ಸುನೀಲಗೌಡ-ಶಟಗಾರ ಮೇಲ್ಮನೆ ಆಟ
Team Udayavani, Aug 21, 2018, 2:43 PM IST
ವಿಜಯಪುರ: ಸ್ಥಳೀಯ ಸಂಸ್ಥೆಗಳ ವಿಜಯಪುರ-ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆ ದಿನವಾದ ಸೋಮವಾರ ಬಿಜೆಪಿ ಅಭ್ಯರ್ಥಿಯಾಗಿ ಗೂಳಪ್ಪ ಶಟಗಾರ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಧಿಕೃತ ಅಭ್ಯರ್ಥಿ ಸುನೀಲಗೌಡ ಪಾಟೀಲ ಇಬ್ಬರೂ ನಗರ ದೇವತೆ ಸಿದ್ದೇಶ್ವರನಿಗೆ ಪೂಜೆ ಸಲ್ಲಿಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಲು ಸೋಮವಾರ ಕೊನೆ ದಿನವಾಗಿತ್ತು. ಅಂತಿಮ ದಿನವೇ ಬಿಜೆಪಿ ಅಭ್ಯರ್ಥಿಯಾಗಿ ಮಹಾನಗರ ಪಾಲಿಕೆ ಹಿರಿಯ ಸದಸ್ಯ ಗೂಳಪ್ಪ ಶಟಗಾರ ನಾಮಪತ್ರ ಸಲ್ಲಿಸಿದರು. ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ, ಬಿಜೆಪಿ ಹಿರಿಯ ಶಾಸಕ ಗೋವಿಂದ ಕಾರಜೋಳ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಸೋಮನಗೌಡ ಪಾಟೀಲ ಸಾಸನೂರ, ಸಿದ್ದು ಸವದಿ, ವಿಜುಗೌಡ ಪಾಟೀಲ, ಚಂದ್ರಶೇಖರ ಕವಟಗಿ ಸೇರಿದಂತೆ ಇತರೊಂದಿಗೆ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಎಸ್.ಬಿ. ಶೆಟ್ಟೆಣ್ಣವರ ಅವರಿಗೆ ನಾಮಪತ್ರ ಸಲ್ಲಿಸಿದರು. ಇತ್ತ ರಾಜ್ಯದ ಸಮ್ಮಿಶ್ರ ಸರ್ಕಾರ ಪಾಲುದಾರ ಪಕ್ಷಗಳಾದ ಜೆಡಿಎಸ್ -ಕಾಂಗ್ರೆಸ್ ಮೈತ್ರಿಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನೀಲಗೌಡ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಜೆಡಿಎಸ್‌ನ ಎಂ.ಸಿ. ಮನಗೂಳಿ, ಬಬಲೇಶ್ವರ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ| ಎಂ.ಬಿ.ಪಾಟೀಲ, ಜೆಡಿಎಸ್ ಶಾಸಕ ಡಾ| ದೇವಾನಂದ ಚವ್ಹಾಣ, ಮಾಜಿ ಸಚಿವ ಸಿ.ಎಸ್. ನಾಡಗೌಡ, ಎಸ್. ಆರ್. ಪಾಟೀಲ, ಎಚ್.ವೈ. ಮೇಟಿ., ಉಮಾಶ್ರೀ ಸೇರಿದಂತೆ ಇತರೆ ನಾಯಕರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಎಸ್.ಬಿ. ಶೆಟ್ಟೆಣ್ಣವರ ಅವರಿಗೆ ನಾಮಪತ್ರ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
MUST WATCH
ಹೊಸ ಸೇರ್ಪಡೆ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.