ಭಾರತ ಬಂದ್ ಮುಷ್ಕರಕ್ಕೆ ಬೆಂಬಲಿಸಿ
Team Udayavani, Dec 18, 2018, 3:03 PM IST
ವಿಜಯಪುರ: ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಹಕ್ಕುಗಳ ಈಡೇರಿಕೆಗೆ ಆಗ್ರಹಿಸಿ ಬರುವ ಜನೇವರಿ 8ರಿಂದ ದೇಶಾದ್ಯಂತ ಹಮ್ಮಿಕೊಂಡಿರುವ ಭಾರತ ಬಂದ್ ಮುಷ್ಕರಕ್ಕೆ ಹೆಚ್ಚಿನ ಬೆಂಬಲ ನೀಡಬೇಕು ಎಂದು ಸಿಐಟಿಯು ಅಂಗನವಾಡಿ ನೌಕರರ ಸಂಘದ ರಾಜ್ಯ ಗೌರವಾಧ್ಯಕ್ಷೆ ಶಾಂತಾ ಘಂಟಿ ಮನವಿ ಮಾಡಿದರು.
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ-ಸಿಐಟಿಯು ನೇತೃತ್ವದಲ್ಲಿ ನಗರದಲ್ಲಿ ಜರುಗಿದ ಅಂನಗೌಡಿ ನೌಕರರ ವಿಜಯಪುರ ತಾಲೂಕು ಮೂರನೇ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾನ ಕೆಲಸಕೆ ಸಮಾನ ವೇತನವಾಗಿ ಕನಿಷ್ಠ 18 ಸಾವಿರ ರೂ. ಕೂಲಿ ನೀಡಬೇಕು. ಅಂಗನವಾಡಿ ನೌಕರರ ಸೇವೆ ಕಾಯಂಗೊಳಿಸಬೇಕು. ಎನ್‌ಪಿಎಸ್ ಭವಿಷ್ಯ ನಿಧಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಆಗ್ರಹಿಸಿದರು.
ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ ಮಾತನಾಡಿ, ಯಾವುದೇ ಹಕ್ಕುಗಳು ಸುಲಭವಾಗಿ ದೊರೆಯುವುದಿಲ್ಲ. ಬದಲಾಗಿ ಹೋರಾಟಗಳಿಂದ ಮಾತ್ರ ಎಲ್ಲವನ್ನು ಪಡೆಯಲು ಸಾಧ್ಯ. ಅಂಗನವಾಡಿ ನೌಕರರು
ಸೇರಿದಂತೆ ಶ್ರಮಿಕ ಸಮುದಾಯವಾದ ಕಾರ್ಮಿಕರ ಯಾವುದೇ ಹೋರಾಟಕ್ಕೆ ಕೈ ಜೋಡಿಸಲು ಸಿದ್ಧ. ಬೇಡಿಕೆಗಳ
ಈಡೇರಿಕೆಗೆ ಆಗ್ರಹಿಸಿ ನಡೆಯುವ ಹೋರಾಟಕ್ಕೆ ನಮ್ಮ ಸಂಘಟನೆಯ ಸಂಪೂರ್ಣ ಬೆಂಬಲ ನೀಡಲು ಸದಾ ಸಿದ್ಧ
ಎಂದರು.
ಅಧ್ಯಕ್ಷತೆ ವಹಿಸಿದ್ಧ ಸಂಘಟನೆ ತಾಲೂಕಾಧ್ಯಕ್ಷೆ ಸುನಂದಾ ನಾಯಿಕ ಮಾತನಾಡಿ, ಜನೇವರಿ 8ರಿಂದ ಎರಡು ದಿನ ನಡೆಯುವ ಮುಷ್ಕರಕ್ಕೆ ಜಿಲ್ಲೆಯ ಎಲ್ಲ ಅಂಗನವಾಡಿ ಕಾರ್ಯಕರ್ತರು ಸಂಪೂರ್ಣ ಬೆಂಬಲ ನೀಡಲಿದ್ದಾರೆ. ಇದಲ್ಲದೇ ಜನೇವರಿ 31ರಂದು ನಡೆಯಲಿರುವ 7ನೇ ಅಂಗನವಾಡಿ ನೌಕರರ ರಾಜ್ಯ ಸಮ್ಮೇಳನದಲ್ಲೂ ಜಯಪುರ
ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು.
ಕಾರ್ಯದರ್ಶಿ ಸುವರ್ಣಾ ಬಿರಾದಾರ ಹಲಗಣಿ ಸ್ವಾಗತಿಸಿದರು. ಅಣ್ಣಾರಾಯ ಈಳಗೇರಿ, ಲಕ್ಷ್ಮಣ ಹಂದ್ರಾಳ
ವೇದಿಕೆಯಲ್ಲಿದ್ದರು. ದ್ರಾಕ್ಷಾಯಣಿ ಧ್ವಜಾರೋಹಣ ನೆರವೇರಿಸಿದರು. ಗೀತಾ ಜಾಧವ, ಪಟೇಲ್, ಸಂಗೀತಾ ದುಂಡಮ್ಮ, ಎಸ್. ಎಂ. ಜಮಾದಾರ, ಚನ್ನಮ್ಮ ಖಾನಾಪುರ, ಮಂಜುಳಾ ಪತ್ತಾರ, ರಾಜೇಶ್ವರಿ, ಸಂಕದ ಝರಿನಾ, ಛಾಯಾ ತಬಸುಮ, ದೊಡ್ಡವ್ವ ಸಿದ್ದಮ್ಮಾ, ಲಲಿತಾ ಪೋಳ, ಶಾಲಿನಿ ಇದ್ದರು. ಇದೇ ವೇಳೆ ಸಂಘಟನೆಯ ತಾಲೂಕು ಘಟಕ
ರಚಿಸಲಾಯಿತು. ಸುನಂದಾ ನಾಯಿಕ ಅಧ್ಯಕ್ಷರಾಗಿ, ಜಯಶ್ರೀ ಪೂಜಾರಿ ಗೌರವಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಕಾರ್ಯದರ್ಶಿ ಸುವರ್ಣಾ ಬಿರಾದಾರ, ಖಜಾಂಚಿ ರಿಜ್ವಾನ್ ಕರೋಸಿ ಇವರನ್ನು ಆಯ್ಕೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.