ತೊಗರಿ ಖರೀದಿಗೆ ಸಹಕರಿಸಲು ಅನ್ನದಾತರಿಗೆ ಸ್ವಾಮೀಜಿ ಸಲಹೆ
ಈ ಭಾಗದ ಪ್ರತಿಯೊಬ್ಬ ರೈತರ ತೊಗರಿ ಖರೀದಿಯಾಗುವವರೆಗೂ ಎಲ್ಲವನ್ನು ಪ್ರಾಮಾಣಿಕವಾಗಿ ಖರೀದಿ ಮಾಡಲಾಗುವುದು
Team Udayavani, Jan 21, 2021, 5:33 PM IST
ದೇವರಹಿಪ್ಪರಗಿ: ದೇವರಹಿಪ್ಪರಗಿ ವ್ಯಾಪ್ತಿಯ ಎಲ್ಲ ರೈತ ಸಮುದಾಯದ ಅನುಕೂಲಕ್ಕಾಗಿ ತೊಗರಿ ಖರೀದಿ ಕೇಂದ್ರ ಆರಂಭಿಸಲಾಗಿದ್ದು ರೈತ ಬಾಂಧವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸದಯ್ಯನಮಠದ ವೀರ ಗಂಗಾಧರ ಸ್ವಾಮೀಜಿ ಹೇಳಿದರು. ಪಟ್ಟಣದ ಸಿಂದಗಿ ರಸ್ತೆಯಲ್ಲಿನ ತೊಗರಿ ಖರೀದಿ ಕೇಂದ್ರದಲ್ಲಿ ತೂಕದ ಯಂತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ರೈತರ ಶ್ರಮಕ್ಕೆ ಖರೀದಿ ಕೇಂದ್ರಗಳು ಯೋಗ್ಯ ದರ ನೀಡಿ ಸಹಕಾರ ನೀಡುತ್ತಿವೆ. ರೈತರು ಸಹ ಶಾಂತಿ, ಸಹನೆಯಿಂದ ಸರದಿ ಪ್ರಕಾರ ಬೆಳೆ ನೀಡಲು ಮುಂದಾಗಬೇಕು ಎಂದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕಾಶೀನಾಥ ಮಸಬಿನಾಳ ಮಾತನಾಡಿ, ಕೇಂದ್ರ ಸರ್ಕಾರದ ನಿರ್ದೇಶನದಂತೆ ಕ್ವಿಂಟಲ್‌ಗೆ ಆರು ಸಾವಿರ ರೂ. ದರದಂತೆ ಪ್ರತಿ ರೈತನಿಂದ 20 ಕ್ವಿಂಟಲ್ ತೊಗರಿ ಖರೀದಿಸಲಾಗುವುದು. ಈ ಭಾಗದ ಪ್ರತಿಯೊಬ್ಬ ರೈತರ ತೊಗರಿ ಖರೀದಿಯಾಗುವವರೆಗೂ ಎಲ್ಲವನ್ನು ಪ್ರಾಮಾಣಿಕವಾಗಿ ಖರೀದಿ ಮಾಡಲಾಗುವುದು ಎಂದು ಹೇಳಿ ರೈತರ ಕುರಿತು ವಿಶೇಷ ಕಾಳಜಿ ವಹಿಸಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.
ಪಿಕೆಪಿಎಸ್ ಕಾರ್ಯದರ್ಶಿ ನಿಂಗು ಜಡಗೊಂಡ, ಬಂಡೆಪ್ಪ ದಿಂಡವಾರ, ಬಾಬುಗೌಡ ಪಾಟೀಲ, ಕಾಸು ಜಲಕತ್ತಿ, ಬಸಪ್ಪ ಮಸಬಿನಾಳ, ಶ್ರೀಧರ ನಾಡಗೌಡ, ಬಸಯ್ಯ ಮಲ್ಲಿಕಾರ್ಜುನಮಠ, ಜಯರಾಮ್ ನಾಡಗೌಡ, ವಿನೋದ ಪಾಟೀಲ, ಯಮನೂರಿ ಸಣ್ಣಕ್ಕಿ, ಕಾಶೀನಾಥ ರಾಮಗೊಂಡ, ನಿಂಗನಗೌಡ ಬಿರಾದಾರ, ರಮೇಶ ಮ್ಯಾಕೇರಿ, ವೀರೇಶ ಕುದರಿ,ಸುರೇಶ ಒಂಟೆತ್ತಿನ, ಬಸವರಾಜ ಹಳಿಮನಿ, ದಯಾನಂದ ರಾಠೊಡ, ಶಿವಯ್ಯ ಸದಯ್ಯನಮಠ, ನಿಂಗು ನಾಗರಾಳ, ಪಿಂಟು ಭಾಸುತ್ಕರ್, ಗೌಡು ಯಾಳಗಿ, ಸಾಹೇಬಗೌಡ ಮದ್ದರಕಿ ಸೇರಿದಂತೆ ಸಿಬ್ಬಂದಿ, ರೈತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕ್ಯುಆರ್ ಕೋಡ್ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ
ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Sullia: ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣ; ಚಾಲಕ-ನಿರ್ವಾಹಕರಿಗೆ ಶಿಕ್ಷೆ
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.