ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಕ್ರಮಕ್ಕೆ ಆಗ್ರಹ
Team Udayavani, Jun 25, 2020, 5:23 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ತಾಳಿಕೋಟೆ: ತಾಲೂಕು ವ್ಯಾಪ್ತಿ ಅಕ್ರಮ ಮರಳು ಸಾಗಾಣಿಕೆ ಎಗ್ಗಿಲ್ಲದೇ ಸಾಗುತ್ತಿದೆ. ಇದರ ವಿರುದ್ಧ ಸೂಕ್ತ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ಮೂಲಕ ಡಿಸಿಗೆ ಮನವಿ ಸಲ್ಲಿಸಿದರು.
ಈ ಅಕ್ರಮ ಮರಳು ಸಾಗಾಣಿಕೆಗೆ ಸಂಬಂಧಪಟ್ಟಂತೆ ಪೊಲೀಸ್ ಮತ್ತು ಲೋಕೋಪಯೋಗಿ ಇಲಾಖೆ ಮತ್ತು ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಕಣ್ಣಿಗೆ ಕಂಡರೂ ಕಾಣದಂತೆ ಜಾಣಕುರುಡುತನ ಪ್ರದರ್ಶಿಸುತ್ತಿದ್ದಾರೆ. ಸೂರಪುರ ತಾಲೂಕಿನ ಕಡೆಯಿಂದ ನಿತ್ಯ ನೂರಾರು ಟಿಪ್ಪರ್‌ಗಳು ರಾಜಾರೋಷವಾಗಿ ಹಗಲು ಹೊತ್ತಿನಲ್ಲಿ ಟನ್‌ಗಟ್ಟಲೇ ಮರಳು ತುಂಬಿಕೊಂಡು ಹೋಗುವುದು ಸಾಮಾನ್ಯವಾಗಿದೆ. ಕೂಡಲೇ ಜಿಲ್ಲಾಧಿಕಾರಿಗಳು ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ನಂತರ ತಾಲೂಕು ತಹಶೀಲ್ದಾರ್ ಅನಿಲಕುಮಾರ ಢವಳಗಿ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಸಂಘಟನೆಯ ಜಿಲ್ಲಾಧ್ಯಕ್ಷ ಬಸಲಿಂಗಪ್ಪಗೌಡ ಇಂಗಳಗಿ, ತಾಲೂಕಾಧ್ಯಕ್ಷ ಬಸವರಾಜ ಶಿಂಗನಳ್ಳಿ, ಪರಶುರಾಮ ಘಂಜಾಲ, ನಿಂಗನಗೌಡ ಬಿರಾದಾರ, ಶಿವರಾಜ ನಾಗೂರ, ಶಿವರಡ್ಡಿ ಐನಾಪೂರ, ನಿಂಗರಡ್ಡೆಪ್ಪ ಐನಾಪೂರ, ಬಾಪುಗೌಡ ಪಾಟೀಲ, ಸಿದ್ರಾಮ ಬಳಬಟ್ಟಿ, ಪ್ರಭು ಹಡಪದ, ಶಂಕ್ರಯ್ಯ ನಂದಿಮಠ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.