ಶ್ರೀಮಂತಿಕೆ-ಬಡತನ ಶಾಶ್ವತವಲ್ಲ

ಹುಟ್ಟು -ಸಾವಿನ ನಡುವಿನ ಬದುಕಿನಲ್ಲಿ ಒಳ್ಳೆ ಕೆಲಸ ಮಾಡಿ: ಪಾಟೀಲ

Team Udayavani, Feb 7, 2020, 1:32 PM IST

7-February-13

ತಾಳಿಕೋಟೆ: ಪರರ ಉಪಕಾರಕ್ಕಾಗಿ ನಂಬಿ ಹಳ್ಳ ಕೊಳ್ಳಗಳು ಹರಿಯುತ್ತವೆ. ಅವುಗಳಂತೆ ಸಮಾಜದಲ್ಲಿ ಜನಜಾಗೃತಿಗಾಗಿ ಅಭಿವೃದ್ಧಿ ಪಡಿಸುವ ಕುರಿತು ಅನೇಕ ಶರಣರು ಮಹಾತ್ಮರು ಜನ್ಮ ತಾಳಿದ್ದಾರೆ. ಅವರಲ್ಲಿ ಸಿದ್ಧರಾಮೇಶ್ವರರು ಒಬ್ಬರಾಗಿದ್ದರೆಂದು ಸಮಾಜ ಸೇವಕ ಶಾಂತಗೌಡ ಪಾಟೀಲ (ನಡಹಳ್ಳಿ) ಹೇಳಿದರು.

ಅಖೀಲ ಕರ್ನಾಟಕ ಭೋವಿ ವಡ್ಡರ ಯುವ ವೇದಿಕೆ ಕ್ರಾಂತಿ ವತಿಯಿಂದ ವಿಠ್ಠಲ ಮಂದಿರದಲ್ಲಿ ನಡೆದ ಶಿವಯೋಗಿ ಸಿದ್ಧರಾಮೇಶ್ವರರ 848ನೇ ಜಯಂತಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲರೂ ಒಂದೇ ತಾಯಿ ಮಕ್ಕಳಂತೆ ನಾಡಿನಲ್ಲಿ ಬದುಕುತ್ತಿದ್ದೇವೆ. ಮನುಷ್ಯ ಹುಟ್ಟುತ್ತಾನೆ ಸಾಯುತ್ತಾನೆ ಎಂಬುದು ಗೊತ್ತಿದೆ. ಆದರೆ ಹುಟ್ಟು ಸಾವಿನ ನಡುವಿನ ಬದುಕಿನಲ್ಲಿ ಒಳ್ಳೆ ಕೆಲಸಗಳನ್ನು ಮಾಡಬೇಕೆಂದರು. ಶ್ರೀಮಂತಿಕೆ ಬಡತನವೆಂಬುದು ಶಾಶ್ವತವಲ್ಲ. ಶರಣರು ಹೇಳಿದಂತೆ ಎಲ್ಲರೂ ಒಂದೇ ತಾಯಿ ಮಕ್ಕಳೆಂಬ ಭಾವನೆಯಿಂದ ನಡೆದು ಕೊಳ್ಳಬೇಕು. ಸಮಾಜದಲ್ಲಿಯ ಮುಖಂಡರು ಬಡಜನರ ಬಗ್ಗೆ ಗಮನ ನೀಡಿ ಅವರಿಗೆ ನಿವೇಶನ ಹಾಗೂ ಮನೆಗಳನ್ನು ಕೊಡಿಸಲು ಮುಂದಾದರೆ ಸಮಾಜ ಬೆಳವಣಿಗೆಯಾಗಲು ಸಾಧ್ಯ ಎಂದರು.

ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಬೇಕು. ಶಿಕ್ಷಣದಿಂದಲೇ ದೇಶ ಉದ್ಧಾರವಾಗಲು ಸಾಧ್ಯ ಎಂದ ಅವರು, ಬಡತನವಿದ್ದರೂ ಮಕ್ಕಳಿಗೆ ಶಿಕ್ಷಣ ನೀಡಬೇಕು. ಇಂತಹದಕ್ಕೆ ಒಳ್ಳೆ ಸಂಸ್ಕಾರವೆನ್ನಲಾಗುತ್ತದೆ ಎಂದರು.

ಗಜೇಂದ್ರಗಡದ ಸಾಹಿತಿ ಎಫ್‌.ಎಸ್‌. ಕರಿದುರ್ಗನ್ನವರ ಮಾತನಾಡಿ, ಸಿದ್ಧರಾಮೇಶ್ವರರು ಚಿಕ್ಕವರಿರುವಾಗಲೇ ಹೊಲದ ಕೆಲಸಕ್ಕೆ ಹೋಗುತ್ತಾರೆ. ಸ್ವಾಮಿ ರೂಪತಾಳಿದ ಭಗವಂತ ಭೇಟಿಯಾಗುತ್ತಾನೆ. ಸ್ವಾಮಿಗಳ ಆಸೆಯಂತೆ ಅವರು ಹೇಳಿದ್ದನ್ನು ಸಿದ್ಧರಾಮರು ತಂದು ಕೊಡುತ್ತಾರೆ. ಶ್ರೀಗಳಿಂದ ಮೆಚ್ಚುಗೆ ಪಡೆದ ನಂತರ ಶ್ರೀಶೈಲದಿಂದ ಸೊಲ್ಲಾಪುರಕ್ಕೆ ತೆರಳಿ ಚನ್ನಮಲ್ಲಿಕಾರ್ಜು ದೇವಾಲಯ ಕಟ್ಟಿಸುತ್ತಾರೆ.

ರೈತರಿಗಾಗಿ ಕೆರೆಗಳನ್ನು ಕಟ್ಟಿಸುತ್ತಾರೆ. ಬಸವ ತತ್ವ ಉಳಿಸುವ ಶ್ರಮಿಸಿದ್ದಾರೆ ಎಂದರು. ಭೋವಿ ಯುವ ವೇದಿಕೆ ಕ್ರಾಂತಿ ರಾಜ್ಯಾಧ್ಯಕ್ಷ ವೈ.ಕೊಟ್ರೇಶ ಮಾತನಾಡಿ, ಬಸವಣ್ಣನವರು, ಅಕ್ಕಮಹಾದೇವಿ, ಸಿದ್ಧಾರೂಡರು, 12ನೇ ಶತಮಾನದ ಶರಣರು ಒಳ್ಳೆ ಸಂಸ್ಕೃತಿ, ಸಂಸ್ಕಾರ ನೀಡಿದ್ದಾರೆ. 68 ಸಾವಿರ ವಚನಗಳನ್ನು ಬರೆದು ಎಲ್ಲರಿಗೂ ಮಾರ್ಗ ತೋರಿಸಿದ್ದಾರೆ. ಕಾರಣ ಸಿದ್ಧರಾಮೇಶ್ವರರ ಇತಿಹಾಸವನ್ನು ಎಲ್ಲರೂ ಓದಿ ತಿಳಿದುಕೊಳ್ಳಬೇಕೆಂದರು.

ಸ್ಥಳೀಯ ಭೋವಿ ಸಮಾಜದ ಅಧ್ಯಕ್ಷ ಹುಲಿಗೆಪ್ಪ ಕಟ್ಟಿಮನಿ ಮಾತನಾಡಿದರು. ಸಂಗಯ್ಯ ವಿರಕ್ತಮಠ ಸಾನ್ನಿಧ್ಯ ವಹಿಸಿದ್ದರು. ಪುರಸಭೆ ಸದಸ್ಯ ವಾಸುದೇವ ಹೆಬಸೂರ, ಫಾತಿಮಾ ಖಾಜಾಬಸರಿ, ಸಿದ್ದು ಚಿಂಚೋಳಿ, ನ್ಯಾಯವಾದಿ ಕಾರ್ತಿಕ ಕಟ್ಟಿಮನಿ, ಪತ್ರಕರ್ತ ಜಿ.ಟಿ. ಘೋರ್ಪಡೆ, ಸಂತೋಷ ಹಜೇರಿ, ಶಿವಶಂಕರ ಹಿರೇಮಠ,ಮಾರುತಿ ಬೇಕಿನಾಳ, ಭೀಮಣ್ಣ ವಡ್ಡರ, ಪ್ರಕಾಶ ಹಜೇರಿ, ನಾಗರಾಜ ಭೋವಿ, ದ್ಯಾವಪ್ಪ ಕಟ್ಟಿಮನಿ, ದೇವೇಂದ್ರ ಕೂಚಬಾಳ, ಫಯಾಜ್‌ ಉತ್ನಾಳ, ರಿಯಾಜ್‌ ಡೋಣಿ, ಲಾಳೇಮಶಾಕ ಖಾಜಾಬಸರಿ, ಜಿಲ್ಲಾಧ್ಯಕ್ಷ ದೇವು ಕೂಚಬಾಳ,
ಹನುಮಂತ ಕಟ್ಟಿಮನಿ ನಿರೂಪಿಸಿದರು.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.