ಎರಡು ಪ್ರದೇಶ ಕಂಟೈನ್ಮೆಂಟ್ ಝೋನ್
ಸೊಂಕಿತರು ಪತ್ತೆಯಾದ ಪ್ರದೇಶಗಳು ಸೀಲ್‌ಡೌನ್
Team Udayavani, Jul 1, 2020, 12:20 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ತಾಳಿಕೋಟೆ: ತಾಲೂಕಿನಲ್ಲಿ ಕೋವಿಡ್ ವೈರಸ್ ತಗುಲಿರುವ ಸೊಂಕಿತರ ಪ್ರದೇಶಗಳನ್ನು ಸೀಲ್‌ಡೌನ್ ಮಾಡಲಾಗಿದೆ. ನಾವದಗಿ ಗ್ರಾಮದ ಸೋಂಕಿತನ ಮನೆ ಸುತ್ತಲಿನ ಪ್ರದೇಶ ಹಾಗೂ ತಾಳಿಕೋಟೆ ಪಟ್ಟಣದ ಮಿಲತ್ ನಗರ ಬಡಾವಣೆ ಪ್ರದೇಶಗಳನ್ನು 100 ಮೀ.ವರೆಗೆ ಕಂಟೈನ್ಮೆಂಟ್ ಪ್ರದೇಶಗಳೆಂದು ಜಿಲ್ಲಾಡಳಿತ ಸೂಚನೆ ಮೇರೆಗೆ ತಾಲೂಕಾಡಳಿತ ಘೋಷಣೆ ಮಾಡಿದೆ.
ತಾಲೂಕಿನಲ್ಲಿ ಮಂಗಳವಾರ ಇಬ್ಬರಿಗೆ ಕೋವಿಡ್-19 ಸೋಂಕು ತಗುಲಿದ್ದು ನಾವದಗಿ ಗ್ರಾಮದ ಓರ್ವನಿಗೆ ಹಾಗೂ ತಾಳಿಕೋಟೆಯ ಮಿಲತ್‌ನಗರ ಪ್ರದೇಶ ಓರ್ವನಿಗೆ ಸೋಂಕು ತಗುಲಿದೆ. ಆಯಾ ಪ್ರದೇಶಗಳಲ್ಲಿ ಸೀಲ್‌ಡೌನ್ ಮಾಡಲಾಗಿದ್ದು ಎಲ್ಲ ಸುತ್ತಲಿನ ರಸ್ತೆಗಳಿಗೆ ಮುಳ್ಳುಕಂಠಿ ಕಟ್ಟಿ ಯಾರೂ ಹೋಗದಂತೆ ಮತ್ತು ಅಲ್ಲಿಂದ ಯಾರೂ ಹೊರಬರದಂತೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.
ತಾಲೂಕಾಡಳಿತ ಸೀಲ್‌ಡೌನ್ ಗೊಂಡ ಪ್ರದೇಶದೊಳಗಿನ ಜನರಿಗೆ ಅಗತ್ಯ ವಸ್ತುಗಳ ಪೂರೈಕೆಗಾಗಿ ಕ್ರಮ ಕೈಗೊಂಡಿದೆ. ಕಾಯಪಲ್ಲೆ, ಹಾಲು, ಕಿರಾಣಿ, ಕುಡಿಯುವ ನೀರು ಒಳಗೊಂಡು ಅಗತ್ಯ ವಸ್ತುಗಳು ಅಲ್ಲಿಯೇ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಸಿಲ್‌ಡೌನ್ ಪ್ರದೇಶದೊಳಗಿನ ಜನರಿಗೆ ಥರ್ಮಲ್ ಸ್ಕ್ರಿನಿಂಗ್ ಮಾಡಲು ಮುಂದಾಗಿದ್ದಾರೆ.
ಸೋಂಕಿತರಿಂದ ಪ್ರಾಥಮಿಕ ಸಂಪರ್ಕ ಹೊಂದಿದ ಸಂಬಂಧಿಕರೊಳಗೊಂಡು ಒಟ್ಟು 16 ಜನರನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ತಾಲೂಕಾಡಳಿತ ಒಳಪಡಿಸಿದೆ. ಸೋಕಿತರ ಪೈಕಿ ನಾವದಗಿ ಗ್ರಾಮದ ವ್ಯಕ್ತಿ ಬಸ್ ಘಟಕದಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದನೆಂದು ತಿಳಿದು ಬಂದಿದೆ. ಇತನ ಪ್ರಾಥಮಿಕ ಸಂಪರ್ಕಹೊಂದಿದ ನಾವದಗಿ ಗ್ರಾಮದಲ್ಲಿನ 8 ಜನರನ್ನು ಹಾಗೂ ತಾಳೀಕೋಟೆಯ ಮಿಲತ್ ನಗರ ಬಡಾವಣೆಯ 8 ಜನರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಮಿಲತ್‌ನಗರ ಪ್ರದೇಶ ಸೀಲ್‌ಡೌನ್ ವೇಳೆ ಪುರಸಭೆ ಮುಖ್ಯಾಧಿಕಾರಿ ಸಿ.ವಿ. ಕುಲಕರ್ಣಿ, ಬಸವರಾಜ ಖಾಜಿಬಿಳಗಿ, ಶಿವು ಜುಮನಾಳ, ಎಸ್.ಎ. ಘತ್ತರಗಿ, ಮುನ್ನಾ ಅತ್ತಾರ ಇದ್ದರು.
ಕೋವಿಡ್ ಸೊಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದ ಕುಟುಂಬಸ್ಥರು ಸೇರಿ ಇನ್ನುಳಿದವರನ್ನು ಜಮ್ಮಲದಿನ್ನಿ ಶಾಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಿದ್ದೇವೆ. ನಾವದಗಿ ಗ್ರಾಮದ ಸೊಂಕಿತನ ಮನೆ ಪ್ರದೇಶ ಹಾಗೂ ತಾಳಿಕೋಟೆಯ ಮಿಲತ್ ನಗರ ಬಡಾವಣೆ ಪ್ರದೇಶವನ್ನು ಕಂಟೇನ್ಮೆಂಟ್ ಝೋನ್ ಘೋಷಿಸಿದ್ದು ಅಗತ್ಯ ವಸ್ತು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ.
ಅನಿಲಕುಮಾರ ಢವಳಗಿ,
ತಹಶೀಲ್ದಾರ್
ಸೊಂಕಿತರು ಕಂಡು ಬಂದಿರುವ ಪ್ರದೇಶಗಳನ್ನು ಬ್ಯಾರಿಕೇಡ್ ಮತ್ತು ಮುಳ್ಳುಕಂಠಿಗಳ ಮೂಲಕ ಸೀಲ್‌ಡೌನ್ ಮಾಡಲಾಗಿದೆ. ಸಿಬ್ಬಂದಿ ನಿಯೋಜಿಸಿ ಅಗತ್ಯ ಕ್ರಮ ಕೈಗೊಂಡಿದ್ದೇವೆ.ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಬೇರೆ ಬೇರೆ ರಾಜ್ಯಗಳಿಂದ ಯಾರಾದರೂ ಬಂದಿದ್ದರೆ ಠಾಣೆಗೆ ಮಾಹಿತಿ ನೀಡಿ ಸಹಕರಿಸಬೇಕು.
ಎಸ್.ಎಚ್. ಪವಾರ,
ಪಿಎಸೈ ತಾಳಿಕೋಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.