ಉತ್ತಮ ಆರೋಗ್ಯಕ್ಕೆ ಕ್ರೀಡೆ ಅಗತ್ಯ
ಚನ್ನಮ್ಮ ವಿವಿ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ
Team Udayavani, Mar 7, 2020, 5:11 PM IST
ತಾಳಿಕೋಟೆ: ಮನುಷ್ಯನ ಆರೋಗ್ಯಕ್ಕೆ ಕ್ರೀಡೆ ಬಹುಮುಖ್ಯ ಎಂದು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಜಗದೀಶ ಗಸ್ತಿ ಹೇಳಿದರು.
ಪಟ್ಟಣದ ಎಸ್.ಕೆ. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಆವರಣದಲ್ಲಿ ಎರಡು ದಿನಗಳ ಕಾಲ ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪುರುಷರ ವಲಯ ಹಾಗೂ ಅಂತರ್‌ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ ಮುಕ್ತಾಯ ಸಮಾರಂಭದಲ್ಲಿ ಅವರು ಮಾತನಾಡಿದರು.
ಮುಂದಿನ ದಿನಗಳಲ್ಲಿ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯ ಮಹಿಳೆಯರ ವಾಲಿಬಾಲ್
ಪಂದ್ಯಾವಳಿಯನ್ನು ತಾಳಿಕೋಟೆಯ ಎಸ್.ಕೆ. ಮಹಾವಿದ್ಯಾಲಯಕ್ಕೆ ಸಂಘಟಿಸಲು ಅವಕಾಶ ನೀಡುವುದಾಗಿ ಭರವಸೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕೆ.ಎಸ್. ಮುರಾಳ ಮಾತನಾಡಿ, ಒಬ್ಬ ಕ್ರೀಡಾಪಟುವಾಗಿ ತಮ್ಮ ಕ್ರೀಡಾ ಜೀವನದ ಅನುಭವಗಳನ್ನು ಹಂಚಿಕೊಳ್ಳುತ್ತ ಸೋಲು ಗೆಲುವು ಮುಖ್ಯವಲ್ಲ, ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವಂತೆ ಹೇಳಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳನ್ನು ಹಾಗೂ ದಾನಿಗಳಾದ ಎಸ್. ಎಸ್. ನಾಡಗೌಡ, ಎಂ.ವೈ. ಮಹೇಂದ್ರಕರ, ಸಚಿನ ಹಂಚಾಟೆ ಹಾಗೂ ಎಂ.ಎಸ್. ಪಾಟೀಲ ಅವರನ್ನು ಸನ್ಮಾನಿಸಲಾಯಿತು.
ವಿ.ವಿ. ಸಂಘದ ಅಧ್ಯಕ್ಷ ಎಸ್.ಎ. ಸರೂರ, ಉಪಾಧ್ಯಕ್ಷ ಸಿ.ಆರ್. ಕತ್ತಿ, ಸಹ-ಕಾರ್ಯದರ್ಶಿ ವಿ.ಬಿ. ಸಜ್ಜನ, ಎಸ್.ಕೆ. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಅಧ್ಯಕ್ಷ ವಿ.ಸಿ.ಹಿರೇಮಠ ಮಹಿಳಾ ಪಪೂ ಕಾಲೇಜ್ ಅಧ್ಯಕ್ಷ ಕೆ.ಸಿ. ಸಜ್ಜನ, ವೀ.ವಿ. ಸಂಘದ ನಿರ್ದೇಶಕರಾದ ಎಂ.ಎಸ್. ಸರಶೆಟ್ಟಿ, ಐ.ಬಿ. ಬಿಳೇಭಾವಿ, ಜಿ.ಎಂ. ಪಾಟೀಲ ಹಾಗೂ ವಸತಿ ನಿಲಯದ ಚೇರಮನ್ ಅಶೋಕ ಜಾಲವಾದಿ, ದೈಹಿಕ ಶಿಕ್ಷಣ ನಿರ್ದೇಶಕರಾದ ರವಿ ಗೋಲಾ ಮತ್ತು ಅಶೋಕ ಜಾಧವ ಇದ್ದರು.
ಕಾರ್ಯಕ್ರಮವನ್ನು ಕಾಶೀನಾಥ ದೇಸಾಯಿ ನಿರೂಪಿಸಿದರು. ರಮೇಶ ಜಾಧವ ಸ್ವಾಗತಿಸಿದರು.
ಎಸ್.ಜಿ. ಕೊಡೆಕಲ್ಲಮಠ ವಂದಿಸಿದರು. ವಿಜೇತರು: ಪಂದ್ಯಾವಳಿಯಲ್ಲಿ 14 ವಲಯ ಮಟ್ಟದ ತಂಡಗಳು ಹಾಗೂ 8 ಅಂತರ್ ವಲಯ ಮಟ್ಟದ ತಂಡಗಳು ಭಾಗವಹಿಸಿದ್ದವು. ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಬಿಎಲ್‌ಡಿಇ ಬಸವೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಬಸವನಬಾಗೇವಾಡಿ ಪಡೆದುಕೊಂಡರು.
ದ್ವಿತೀಯ ಸ್ಥಾನವನ್ನು ಎಸ್. ಕೆ. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ
ತಾಳಿಕೋಟೆ ಹಾಗೂ ತೃತೀಯ ಸ್ಥಾನವನ್ನು ಸಿ.ಎಂ. ಮನಗೂಳಿ ಮಹಾವಿದ್ಯಾಲಯ, ಸಿಂದಗಿ ಅವರು ಪಡೆದುಕೊಂಡರು. ಅಂತರ್ ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಕೆಎಲ್‌ಇ ಸಂಸ್ಥೆಯ ಎಸ್‌ಸಿಪಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಮಹಾಲಿಂಗಪುರ, ದ್ವಿತೀಯ ಸ್ಥಾನ ಬಿಎಲ್‌ಡಿಇ ಸಂಸ್ಥೆಯ ಬಸವೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಬಸವನಬಾಗೇವಾಡಿ, ತೃತೀಯ ಸ್ಥಾನವನ್ನು ಶ್ರೀಪಾದಬೋಧ ಸ್ವಾಮೀಜಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಮೂಡಲಗಿ ಇವರು ಪಡೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.