ಅನುದಾನ ರಹಿತ ಶಿಕ್ಷಕರ ಪ್ರತಿಭಟನೆ


Team Udayavani, Sep 21, 2020, 6:18 PM IST

ಅನುದಾನ ರಹಿತ ಶಿಕ್ಷಕರ ಪ್ರತಿಭಟನೆ

ಸಾಂದರ್ಭಿಕ ಚಿತ್ರ

ವಿಜಯಪುರ: ಅನುದಾನ ರಹಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಸಹಾಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಖಾಸಗಿ ಆಡಳಿತ ಮಂಡಳಿಗಳ ಹಾಗೂನೌಕರರ ಒಕ್ಕೂಟ ಜಿಲ್ಲಾ ಘಟಕ ಪದಾಧಿಕಾರಿಗಳು ಜಿಲ್ಲಾ ಡಳಿತ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಸಂಘದ ಅಧ್ಯಕ್ಷ ಎಸ್‌.ಡಿ. ಕುಮಾನಿ ಮಾತನಾಡಿ, ಕೋವಿಡ್‌-19 ಕಾರಣದಿಂದಾಗಿ ಶಾಲೆಗಳು ಸಂಪೂರ್ಣ ಬಂದಾಗಿದ್ದು, ಅನುದಾನ ರಹಿತ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ತುಂಬಾ ಸಂಕಷ್ಟದಲ್ಲಿದ್ದಾರೆ. 4-5 ತಿಂಗಳಿಂದ ಅವರಿಗೆ ವೇತನವಿಲ್ಲ ಹೀಗಾಗಿ ಈ ನೌಕರರ ಕುಟುಂಬಗಳು ಬೀದಿಪಾಲಾಗಿವೆ ಎಂದರು.

ಈ ಶಿಕ್ಷಕರ ಸಂಕಷ್ಟಕ್ಕೆ ಇದುವರೆಗೂ ಸರಕಾರಯಾವುದೇ ಸಹಾಯ ಮಾಡಿಲ್ಲ. ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಮರಣ, ರಾಜೀನಾಮೆ ಮತ್ತು ನಿವೃತ್ತಿಯಿಂದ ಶಿಕ್ಷಕ, ಶಿಕ್ಷಕೇತರ ಹುದ್ದೆಗಳು ಖಾಲಿಯಾಗಿವೆ. 2014ರಿಂದ ಇಲ್ಲಿವರೆಗೆ ಈ ಹುದ್ದೆಗಳನ್ನು ತುಂಬಿಕೊಳ್ಳಲು ಸರಕಾರ ಅನುಮತಿ ನೀಡಿಲ್ಲ. ಶಾಲೆಗಳಲ್ಲಿ ಮಕ್ಕಳಿಗೆ ಕಲಿಸಲು ಶಿಕ್ಷಕರ ಕೊರತೆ ಉಂಟಾಗಿದೆ. ಸರಕಾರ ಈ ಹುದ್ದೆಗಳನ್ನು ತುಂಬಿಕೊಳ್ಳಲು ಆರ್ಥಿಕ ಮಿತವ್ಯಯ ಸಡಿಲಗೊಳಿಸಬಬೇಕು ಎಂದು ಒತ್ತಾಯಿಸಿದರು.

ಸಂಘಟನೆ ಗೌರವಾಧ್ಯಕ್ಷ ಸಹಜಾನಂದ ದಂದರಗಿ ಮಾತನಾಡಿ, 2006ರಲ್ಲಿ ನೇಮಕಾತಿ ಹೊಂದಿದ ಶಿಕ್ಷಕರಿಗೆ ಹೊಸ ಯೋಜನೆಗಳ ಪ್ರಕಾರ ಪಿಂಚಣಿ ನಿವೃತ್ತಿಯ ನಂತರ ಪಿಂಚಣಿ ನೀಡಲಾಗುತ್ತಿದೆ.ಈ ಕಾರಣದಿಂದಾಗಿ ನೌಕರರಿಗೆ ತುಂಬಾ ಅನ್ಯಾಯವಾಗಿದೆ. ಕೂಡಲೇ ಸರ್ಕಾರ ಹಳೆಯ ಮಾದರಿಯ ಪಿಂಚಣಿ ನೀಡಬೇಕು ಎಂದರು.

ಸರಕಾರ 1995ರ ನಂತರದ ಶಾಲೆ, ಕಾಲೇಜುಗಳಿಗೆ ಅನುದಾನ ನೀಡಬೇಕು. ರಾಜ್ಯ ಸರಕಾರಿ ನೌಕರರಿಗೆ 7 ಸ್ಥಗಿತ ವೇತನ ಬಡ್ತಿ ನೀಡಲಾಗುತ್ತಿದೆ. ಈ ಸೌಲಭ್ಯವನ್ನು ಅನುದಾನಿತ ಶಾಲಾ ನೌಕರರಿಗೆ ವಿಸ್ತರಿಸಬೇಕು ಹಾಗೂ ಕಾಲ್ಪನಿಕ ವೇತನ ಬಡ್ತಿಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಕೆ.ಜಿ. ಕುಲಗೊಂಡ, ಮುರುಗೇಶ ಹೊಕ್ರಾಣಿ, ಎಂ.ಬಿ. ಬಿರಾದಾರ, ಚಂದ್ರಶೇಖರ ಲೋಣಿ, ಶರಣು ಕಡಬಿ, ಸಿದ್ದಣ್ಣ ಬಡದಗೋಳ, ಎಸ್‌.ಆರ್‌. ಕಟ್ಟಿ, ಈಶ್ವರ ಕಂಬಾರ, ಎಂ.ಕೆ. ಕುಲಕರ್ಣಿ, ಎಸ್‌.ಎ. ಪುಣೇಕರ, ರಾಜೇಶ ದರಬಾರ, ಮಹಿಬೂಬಖಾದ್ರಿ ಮುಶ್ರೀಫ್‌, ಎಸ್‌.ಎ. ಜಿದ್ದಿ, ಎಲ್‌.ಆರ್‌. ಅಂಗಡಿ, ಜಿ.ಎಸ್‌. ಮಕಾನದಾರ, ಕೆ.ಎ. ಚವ್ಹಾಣ ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.