ಶಿಕ್ಷಕರ ನೇಮಕ ಗೊಂದಲ-ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ
Team Udayavani, Aug 29, 2017, 1:13 PM IST
ವಿಜಯಪುರ: ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಹಲವು ಗೊಂದಲಗಳಿದ್ದು, ಕೂಡಲೇ ನಿವಾರಣೆಗೆ ಕ್ರಮ ಕೈಗೊಳ್ಳಬೇಕೆಂದು ಎಐಡಿವೈಒ ನೇತೃತ್ವದಲ್ಲಿ ಉದ್ಯೋಗಾಕಾಂಕ್ಷಿಗಳು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಮಹಾತ್ಮ ಗಾಂಧೀಜಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಪ್ರತಿಭಟನಾಕಾರರು
ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಎಐಡಿವೈಒ ಅಧ್ಯಕ್ಷ ಸಿದ್ದಲಿಂಗ ಬಾಗೇವಾಡಿ ಮಾತನಾಡಿ, ಶಿಕ್ಷಕರ ನೇಮಕಾತಿ ಅಧಿಸೂಚನೆ ಸಾಕಷ್ಟು
ಗೊಂದಲ ಮೂಡಿಸಿದೆ. ಇದರಿಂದಾಗಿ ಲಕ್ಷಾಂತರ ಉದ್ಯೋಗಕಾಂಕ್ಷಿಗಳು ಆತಂಕ ಎದುರಿಸುವಂತಾಗಿದೆ.
ಮತ್ತೂಂದೆಡೆ ಸರ್ಕಾರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಮುಂದಾಗಿಲ್ಲ. ಕೇವಲ ಪದವೀಧರರನ್ನು
ಮಾತ್ರ ಶಿಕ್ಷಕರಾಗಿ ನೇಮಿಸಿಕೊಳ್ಳುತ್ತಿದೆ. ಡಿಎಸ್ ಶಿಕ್ಷಣ ಪಡೆದಿರುವವರು ಉದ್ಯೋಗ ಇಲ್ಲದೇ ಪರದಾಡುತ್ತಿದ್ದಾರೆ ಎಂದರು ಕಿಡಿ ಕಾರಿದರು. ಶಿಕ್ಷಣ ಇಲಾಖೆಯು 3 ಬಾರಿ ನಡೆಸಿದ ಟಿಇಟಿ ಪರೀಕ್ಷೆಯಲ್ಲಿ 39,692 ಅಭ್ಯರ್ಥಿಗಳು ಪತ್ರಿಕೆ-1 ಪರೀಕ್ಷೆಯಲಿ ಉತ್ತೀರ್ಣರಾಗಿದ್ದಾರೆ. ಆದರೆ ಅವರೆಲ್ಲರೂ ಈ ಬಾರಿ ಅರ್ಜಿ ಸಲ್ಲಿಸುವಂತಿಲ್ಲ. ಏಕೆಂದರೆ ಇಲಾಖೆಯ ಪ್ರಕಾರ ಅವರನ್ನು ಅರ್ಹರು ಎಂದು ಪರಿಗಣಿಸುವಂತಿಲ್ಲ. ಡಿ.ಇಡಿ ಬೋಧನಾವಾರು ವಿಷಯಕ್ಕೂ ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ವಿಷಯಕ್ಕೂ ತಾಳಮೇಳ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಮುಖಂಡ ಭೈರವ ಮಾತನಾಡಿ, ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಇತಿಹಾಸದಲ್ಲೇ ಮೊದಲ ಬಾರಿಗೆ ವಿವರಣಾತ್ಮಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಇದರಿಂದ ಪಾರದರ್ಶಕತೆ ನಿರೀಕ್ಷಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು. ಟಿಇಟಿಯಲ್ಲಿ ಉತ್ತೀರ್ಣರಾದ ಅರ್ಹರು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಬೇಕು. ಡಿ.ಇಡಿ ತರಬೇತಿಯಲ್ಲಿ ಅಭ್ಯರ್ಥಿಯ ಬೋಧನಾ ವಿಷಯಗಳನ್ನು ಮೂಲಭೂತ ಅಂಶ ಎಂದು
ಪರಿಗಣಿಸಬೇಕು. ವಿವರಾಣಾತ್ಮಕ ಪರೀಕ್ಷೆ ಕೈ ಬಿಟ್ಟು, ಬಹು ಆಯ್ಕೆಯ ಪ್ರಶ್ನೆಯ ಮಾದರಿ ಅನುಸರಿಸಬೇಕು. ದುಬಾರಿ ಅರ್ಜಿ ಶುಲ್ಕ ಕಡಿಮೆ ಮಾಡಬೇಕು ಎಂಬುವುದು ಸೇರಿದಂಥೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಹಕ್ಕೊತ್ತಾಯ ಮಂಡಿಸಿದರು. ಬಾಳು ಜೇವೂರ, ಹಬೀಬ ಪಟೇಲ್, ಯಲಗೋಡ, ಎಸ್.ಪಠಾಣ, ಜ್ಯೋತಿ, ರಾಘವೇಂದ್ರ ಸುಣಗಾರ, ಏಸಪ್ಪಾ ಕೇದಾರ,ಬಸವರಾಜ ಯಾದವ, ಸೈಯ್ಯದ್, ಪಿ.ಎಲ್. ಪೂಜಾರಿ, ಮುಬಾರಕ ಆಲಮೇಲ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.