ಬಸವ ನಗರ ಬಡಾವಣೆ ಸೀಲ್‌ಡೌನ್
Team Udayavani, Jul 6, 2020, 3:50 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ತಾಳಿಕೋಟೆ: ತಾಲೂಕಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಭಾನುವಾರ ಪಟ್ಟಣದ ಬಸವ ನಗರ ಬಡಾವಣೆ ಒಬ್ಬನಿಗೆ ಸೋಂಕು ದೃಢಪಟ್ಟಿದೆ. ಹೀಗಾಗಿ ಈ ಪ್ರದೇಶವನ್ನು ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದ್ದು, ಬಸವ ನಗರ ಬಡಾವಣೆ ಪ್ರದೇಶದ 100 ಮೀ. ವರೆಗೆ ಕಂಟೇನ್ಮೆಟ್ ಝೋನ್ ಎಂದು ತಾಲೂಕಾಡಳಿತ ಘೋಷಿಸಿದೆ.
ಸುತ್ತಲಿನ ರಸ್ತೆಗಳಿಗೆ ಪೊಲೀಸ್ ಇಲಾಖೆ ಬ್ಯಾರಿಕೇಡ್ ಹಾಗೂ ಪುರಸಭೆ ಸಿಬ್ಬಂದಿ ಮುಳ್ಳುಕಂಠಿ ಕಟ್ಟಿ ಆ ಪ್ರದೇಶದೊಳಗೆ ಯಾರೂ ಹೋಗದಂತೆ ಮತ್ತು ಅಲ್ಲಿಂದ ಯಾರೂ ಹೊರಬರದಂತೆ ಅಗತ್ಯ ಕ್ರಮ ಕೈಗೊಂಡಿದ್ದಾರೆ.
ಇಲ್ಲಿನ ಜನರಿಗೆ ಅಗತ್ಯ ವಸ್ತುಗಳ ಪೂರೈಕೆಗಾಗಿ ಕ್ರಮ ಕೈಗೊಳ್ಳಲಾಗಿದ್ದು, ಕಾಯಿಪಲ್ಲೆ, ಹಾಲು, ಕಿರಾಣಿ, ಕುಡಿಯುವ ನೀರು ಒಳಗೊಂಡು ಅಗತ್ಯ ವಸ್ತುಗಳು ಅಲ್ಲಿಯೇ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಸಿಲ್‌ಡೌನ್ ಪ್ರದೇಶದೊಳಗಿನ ಜನರಿಗೆ ಥರ್ಮಲ್ ಸ್ಕ್ರೀನಿಂಗ್, ಸೋಂಕಿನ ಲಕ್ಷಣಗಳ ಕುರಿತು ಆರೋಗ್ಯ ತಪಾಸಣೆ ಕಾರ್ಯದಲ್ಲಿ ತೊಡಗಿದ್ದಾರೆ. ಸೋಂಕಿತರಿಂದ ಪ್ರಾಥಮಿಕ ಸಂಪರ್ಕ ಹೊಂದಿದ ಸಂಬಂಧಿಕರೊಳಗೊಂಡು 4 ಜನರನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ತಾಲೂಕಾಡಳಿತ ಒಳಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.