ಆಕಸ್ಮಿಕ ಬೆಂಕಿಗೆ ಭಸ್ಮವಾದ ಮನೆ: ಲಕ್ಷಾಂತರ ರೂ. ನಷ್ಟ
Team Udayavani, Jan 25, 2020, 12:09 PM IST
ವಿಜಯಪುರ: ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಮನೆಯೇ ಸುಟ್ಟು ಭಸ್ಮವಾಗಿರುವ ಘಟನೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.
ವಿಜಯಪುರ ತಾಲೂಕಿನ ಅಲಿಯಾಬಾದ್ 2ನೇ ತಾಂಡಾದ ರತ್ನು ರಾಠೋಡ ಎಂಬುವವರಿಗೆ ಸೇರಿದ ಮನೆ ಬೆಂಕಿಗೆ ಆಹುತಿಯಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಹೀಗಾಗಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ.
ಬಟ್ಟೆ, ಧವಸ ಧಾನ್ಯ, ದಿನ ಬಳಕೆಯ ವಸ್ತುಗಳು ಸೇರಿದಂತೆ ಅಂದಾಜು 2 ಲಕ್ಷ ರೂ. ಮೌಲ್ಯದ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿವೆ.
ಬಡತನದಲ್ಲಿದ್ದ ರತ್ನು ಕುಟುಂಬ ಸಂಕಷ್ಟದಲ್ಲಿ ಕೂಲಿ ಮಾಡಿ ಬದುಕುತ್ತಿತ್ತು. ಸದರಿ ಘಟನೆಯಿಂದ ಕಂಗಾಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.