ಪರಿಶಿಷ್ಟರ ಅಭ್ಯುದಯದ ಅನುದಾನ ಸದ್ಬಳಕೆಗೆ ಸೂಚನೆ

Team Udayavani, Aug 18, 2018, 12:30 PM IST

vij-1.jpg

ವಿಜಯಪುರ: ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಅನುದಾನ ಶೇಕಡಾ ನೂರರಷ್ಟು ಬಳಕೆಯಾಗುವ ಜೊತೆಗೆ ಸೂಕ್ತ ಪ್ರಗತಿ ಸಾಧಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹ್ಮದ ಮೊಹಸೀನ್‌ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಯೋಜನೆಯಡಿ ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಜುಲೈ ಮಾಹೆವರೆಗಿನ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿದ ಅವರು, ವಿಶೇಷ ಘಟಕ ಹಾಗೂ ಗಿರಿಜನ ಯೋಜನೆಯಡಿಯ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು. ನಿಗದಿಪಡಿಸಿದ ಗುರಿಯನ್ನು ಸಕಾಲಕ್ಕೆ ತಲುಪುವ ಜೊತೆಗೆ ಅನುದಾನವು ಶೇಕಡಾ ನೂರರಷ್ಟು ಬಳಕೆಯಾಗುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

ಈ ಯೋಜನೆಯಡಿ ಮಂಜೂರಾಗಿರುವ ಅನುದಾನವನ್ನು ನಿರ್ಲಕ್ಷ್ಯ ತೋರದೆ ಸದ್ಭಳಕೆಯಾಗುವಂತೆ ನೋಡಿಕೊಳ್ಳಬೇಕು. ತ್ತೈಮಾಸಿಕ ಅನುದಾನ ಬಳಕೆ ಬಗ್ಗೆ ಪರಿಶೀಲಿಸಿ ಅವಶ್ಯಕ ಪ್ರಗತಿ ಸಾಧಿಸಲು ತಿಳಿಸಿದ ಅವರು, ಈ ಅನುದಾನ ಬಳಕೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷತೆ ಸಹಿಸಲಾಗುವುದಿಲ್ಲ ಎಂದು ಹೇಳಿದರು.

ಸಮಾಜ ಕಲ್ಯಾಣ ಅಧಿಕಾರಿಗಳು ವಿವಿಧ ಇಲಾಖೆಗಳೊಂದಿಗೆ ನಿರಂತರ ಸಮನ್ವಯತೆ ಸಾಧಿಸಬೇಕು. ಸಮುದಾಯ ಭವನಗಳ ನಿವೇಶನ ಮತ್ತು ಇತರೆ ನಿವೇಶನಗಳ ಬಗ್ಗೆ ಹಾಗೂ ಸಮಸ್ಯೆಗಳನ್ನು ಪರಸ್ಪರ ಸಮನ್ವಯತೆಯಿಂದ ಬಗೆಹರಿಸಿಕೊಳ್ಳಬೇಕು. ಅನುದಾನ ಬಳಕೆ ಕುರಿತಂತೆ ಬಳಕೆ ಪ್ರಮಾಣ ಪತ್ರ ಸಹ ಸಲ್ಲಿಸುವಂತೆ ತಿಳಿಸಿದ ಅವರು, ಇಲಾಖಾವಾರು ಮಂಜೂರಾಗಿರುವ ಅನುದಾನ ಬಳಸಿ ಅವಶ್ಯಕ ಪ್ರಗತಿಯನ್ನು ಸಾಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿ, ಅರ್ಹ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳು ಸಹ ಸಕಾಲಕ್ಕೆ ದೊರೆಯುವಂತೆ ನೋಡಿಕೊಳ್ಳಲು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್‌.ಬಿ. ಶೆಟ್ಟೆಣ್ಣವರ, ಜಿಪಂ ಉಪ ಕಾರ್ಯದರ್ಶಿ ದುರುಗೇಶ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳು ಇದ್ದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ ವಂದಿಸಿದರು. 

ಟಾಪ್ ನ್ಯೂಸ್

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard spotted in Vijayapura city: CCTV footage captured

Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.