ಭಯೋತ್ಪಾದನೆ ಮಟ್ಟ ಹಾಕಲು ಕೇಂದ್ರ ಮುಂದಾಗಲಿ
Team Udayavani, Feb 17, 2019, 9:45 AM IST
ವಿಜಯಪುರ: ದೇಶದ ಕಣಿವೆ ರಾಜ್ಯಗಳಲ್ಲಿ ಭಯೋತ್ಪಾದನೆ ಚಟುವಟಿಕೆಗೆ ಸಂಪೂರ್ಣ ಮಟ್ಟ ಹಾಕಲು ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಬೇಕು. ಉಗ್ರಗಾಮಿಗಳ ಮಟ್ಟ ಹಾಕಲು ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲ ಸಂಪೂರ್ಣ ಬೆಂಬಲ ಕೊಡುತ್ತೇವೆ ಎಂದು ಮುಸ್ಲಿಂ ಧರ್ಮಗುರು,
ಮುತ್ತಹೀದಾ ಕೌನ್ಸಿಲ್ ಅಧ್ಯಕ್ಷ ಹಜರತ್ ಸೈಯ್ಯದ್‌ತನ್ವೀರ್ ಪೀರಾ ಹಾಶ್ಮಿ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮದ ಹೆಸರಿನಲ್ಲಿ ಸೈನಿಕರ ಮೇಲೆ ದಾಳಿ ನಡೆಸುವ ಕೃತ್ಯ ಹೇಡಿತನದ್ದು. ಉಗ್ರಗಾಮಿಗಳಿಗೂ ಹಾಗೂ ಇಸ್ಲಾಂಗೂ ಯಾವುದೇ ಸಂಬಂಧವಿಲ್ಲ. ಕಾಶ್ಮೀರದ ಪುಲ್ವಾಮಾದಲ್ಲಿ ವೀರಯೋಧರ ಪ್ರಾಣ ಕಸಿದವರು ಮನುಷ್ಯರೇ ಅಲ್ಲ. ಭಯೋತ್ಪಾದನೆಯೇ ಅವರ ಧರ್ಮ, ಭಯೋತ್ಪಾದಕರ ಹೆಸರು ಮುಸಲ್ಮಾನರಾಗಿರಬಹುದು. ಇಂತಹ ಕೃತ್ಯ ಎಸಗುವವರು ಮುಸಲ್ಮಾನರೇ ಅಲ್ಲ. ಅವರು ಮನುಷ್ಯರೇ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದ ವೀರಯೋಧರ ಪ್ರಾಣ ಕಳೆದುಕೊಂಡಿದ್ದೇವೆ. ಇದಕ್ಕೆ ಕೇಂದ್ರ ಸರ್ಕಾರ ಸೂಕ್ತ ಪ್ರತ್ಯುತ್ತರ ನೀಡಬೇಕು. ಪ್ರವಾದಿ ಹಜರತ್ ಮೊಹ್ಮದ್ ಪೈಗಂಬರ್ ಅವರು, ಒಬ್ಬ ಅಮಾಯಕ ಮನುಷ್ಯನನ್ನು ಕೊಂದರೆ ಅದು ಇಡಿ ಮಾನವ ಕುಲವನ್ನೇ ಕೊಂದಂತೆ ಎಂದು ಹೇಳಿದ್ದಾರೆ. ಉಗ್ರಗಾಮಿಗಳಿಗೆ ಯಾವುದೇ ಧರ್ಮವಿಲ್ಲ. ಭಯ ಹುಟ್ಟಿಸುವುದು ಮಾತ್ರ ಅವರ ಧರ್ಮ ಎಂದರು.
ಭಯೋತ್ಪಾದಕರ ಇಂತಹ ಕೃತ್ಯಗಳಿಂದ ದೇಶದಲ್ಲಿ ಭಯದ ವಾತಾವರಣ ಮೂಡಿಸಿವೆ. ಈ ರೀತಿಯ ಘಟನೆಗಳು ದೇಶದ ಏಕತೆ ಒಡೆಯುವ ಷಡ್ಯಂತ್ರವಾಗಿವೆ. ಆದರೆ ದೇಶದ ಏಕತೆಯನ್ನು ಯಾವ ಭಯೋತ್ಪಾದಕನೂ ಒಡೆಯಲು ಸಾಧ್ಯವಿಲ್ಲ ಎಂದರು.
ಅಹಿಂದ ಮುಖಂಡ ಎಸ್.ಎಂ. ಪಾಟೀಲ (ಗಣಿಹಾರ) ಮಾತನಾಡಿ, ದೇಶದಲ್ಲಿ ನಿರಂತರ ನಡೆಯುತ್ತಿರುವ ಭಯೋತ್ಪಾದನಾ ಕೃತ್ಯಗಳನ್ನು ಸಂಪೂರ್ಣ ಮಟ್ಟ ಹಾಕಬೇಕಿದೆ. ಅಂತಹ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿರುವವರ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ
ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮುಸಲ್ಮಾನರು ದೇಶಭಕ್ತಿ ಪ್ರದರ್ಶಿಸಬೇಕಾದ ಅವಶ್ಯಕತೆ ಇಲ್ಲ. ಇದು ನಮ್ಮ ಮಾತೃಭೂಮಿ. ನಾವು ಇಲ್ಲಿಯೇ ಜನ್ಮತಾಳಿ ಜೀವನ ನಡೆಸುತ್ತಿದ್ದೇವೆ. ಭಾರತದ ಮುಸ್ಲಿಂರೆಲ್ಲರೂ ದೇಶಭಕ್ತರು. ಈ ಮಾತೃಭೂಮಿ ಬಗ್ಗೆ ಗೌರವ ಹೊಂದಿದ್ದಾರೆ.
ಆದರೆ ಹೃದಯ, ಧರ್ಮವಿಲ್ಲದ ಪಾಪಿ ಭಯೋತ್ಪಾದಕರು ಇಸ್ಲಾಂ ಹೆಸರನ್ನು ದುರ್ಬಳಕೆ ಮಾಡಿಕೊಂಡು, ಧರ್ಮಕ್ಕೆ ಕೆಟ್ಟ ಹೆಸರು ತರುತ್ತಿದ್ದಾರೆ ಎಂದರು.
ಹಿರಿಯ ಮುಖಂಡ ಅಬ್ದುಲ್‌ಹಮೀದ್ ಮುಶ್ರೀಫ್, ವಿವಿಧ ಪ್ರಗತಿ ಸಂಘಟನೆಗಳ ಪ್ರಮುಖರಾದ ಎಂ.ಸಿ. ಮುಲ್ಲಾ, ನ್ಯಾಯವಾದಿ ಬಷೀರುಜ್ಜಮಾ ಲಾಹೋರಿ, ಅಸ್ಲಂ ಮುಜಾವರ, ಮೊಹ್ಮದ್‌ಯೂಸೂಫ್ ಖಾಜಿ, ಅಬ್ದುಲ್‌ರಹಿಮಾನ ನಾಸರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.