ಸಮಸ್ಯೆ ನಿವೇದಿಸಿಕೊಂಡ ಗಂಟೆಯೊಳಗೆ ಬಂತು ಕಂಪ್ಯೂಟರ್
ತುರ್ತಾಗಿ ಸೌಲಭ್ಯಗಳನ್ನು ಕಲ್ಪಿಸಲು ಅಲ್ಲಿನ ಸಿಬ್ಬಂದಿಗೆ ಸೂಚಿಸಿದರು.
Team Udayavani, Jul 30, 2022, 6:15 PM IST
ವಿಜಯಪುರ: ಜಿಪಂ ಸಿಇಒ ರಾಹುಲ್ ಶಿಂಧೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ವಿವಧ ಕಾಮಗಾರಿ ಪರಿಶೀಲಿಸಿ ಸಮಸ್ಯೆ ಆಲಿಸಿದರು. ಅಲ್ಲದೇ ಮಕ್ಕಳು ಸಮಸ್ಯೆ ನಿವೇದಿಸಿಕೊಂಡ ಗಂಟೆಯಲ್ಲೇ ಸರ್ಕಾರಿ ವಸತಿ ಶಾಲೆಗೆ ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ಪೂರೈಸಿ ಮೆಚ್ಚುಗೆಗೆ ಪಾತ್ರವಾದರು.
ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಮತ್ತು ಕಾರಜೊಳ ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲಿಸಿದ ಅವರು, ಹೊನಗನಹಳ್ಳಿ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಕಾಮಗಾರಿ ಗುಣಮಟ್ಟ ಪರಿಶೀಲಿಸಿದರು. ಕಾರಜೋಳ ಗ್ರಾಪಂ ವ್ಯಾಪ್ತಿಯ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿದ ಸಿಇಒ, ಶಾಲಾ ಕೊಠಡಿಗಳು, ಅಡುಗೆ ಕೋಣೆ, ಊಟದ ವ್ಯವಸ್ಥೆ ಕುರಿತು ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಕ್ಕಳಿಂದ ಅಹವಾಲು ಆಲಿಸಿದಾಗ, ತಮಗೆ ಕಂಪ್ಯೂಟರ್ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂದು ವಿದ್ಯಾರ್ಥಿಗಳು ಸಮಸ್ಯೆ ನಿವೇದಿಸಿಕೊಂಡರು. ಇದಕ್ಕೆ ತಕ್ಷಣ ಸ್ಪಂದಿಸಿದ ಸಿಇಒ ಶಿಂಧೆ, ಸದರಿ ವಸತಿ ಶಾಲೆಗೆ 4 ಕಂಪ್ಯೂಟರ್ ಹಾಗೂ 1 ಪ್ರೊಜೆಕ್ಟರ್ ಪೂರೈಸಲು ತಾಪಂ ಅಧಿಕಾರಿಗೆ ಸೂಚಿಸಿದರು.
ಸಿಇಒ ಸೂಚಿಸಿದ ಒಂದು ಗಂಟೆಯಲ್ಲಿ ಸದರಿ ಶಾಲೆಗೆ ಕಂಪ್ಯೂಟರ್-ಪ್ರೊಜೆಕ್ಟರ್ ಪೂರೈಕೆ ಆಗಿದ್ದು ವಸತಿ ಶಾಲೆಯ ಮಕ್ಕಳಿಂದ ಪ್ರಶಂಸೆಗೆ ಪಾತ್ರವಾಯಿತು. ಹೊನಗನಹಳ್ಳಿ ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಇಒ, ಗ್ರಂಥಾಲಯದಲ್ಲಿ ಆಸನ ನಿರ್ಮಾಣ, ವಿದ್ಯುತ್ ವ್ಯವಸ್ಥೆ, ಕಂಪ್ಯೂಟರ್, ಇಂಟರ್ನೆಟ್ ಸೌಲಭ್ಯ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸುವಂತೆ ಹೊನಗನಹಳ್ಳಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ ನಿರ್ದೇಶನ ನೀಡಿದರು.
ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ಸಹ ಭೇಟಿ ಮಾಡಿ, ಅಲ್ಲಿನ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಆಸ್ಪತ್ರೆಯಲ್ಲಿ ಶುಚಿತ್ವ ಕಾಪಾಡಲು, ಸಾರ್ವಜನಿಕರಿಗೆ ತುರ್ತಾಗಿ ಸೌಲಭ್ಯಗಳನ್ನು ಕಲ್ಪಿಸಲು ಅಲ್ಲಿನ ಸಿಬ್ಬಂದಿಗೆ ಸೂಚಿಸಿದರು. ಅದೇ ರೀತಿ ರಾಜೀವ್ ಗಾಂ ಧಿ ಸೇವಾ ಕೇಂದ್ರಕ್ಕೂ ಸಹ ಭೇಟಿ ನೀಡಿ ಪರಿಶೀಲಿಸಿದರು.
ಬಬಲೇಶ್ವತ ತಾಪಂ ಸಹಾಯಕ ನಿರ್ದೇಶಕಿ ಭಾರತಿ ಹಿರೇಮಠ, ಕಾರಜೊಳ ಪಿಡಿಒ ಬಿ.ಪಿ. ಉಪ್ಪಲದಿನ್ನಿ, ಹೊನಗನಹಳ್ಳಿ ಪಿಡಿಒ ಜಯಶ್ರೀ ಪವಾರ, ಕಾರಜೋಳ ಚನ್ನಮ್ಮ ವಸತಿ ಶಾಲೆ ಮುಖ್ಯ ಶಿಕ್ಷಕ ಸತೀಶ ಸಜ್ಜನ, ಹೊನಗನಹಳ್ಳಿ ಗ್ರಾಪಂ ಕಾರ್ಯದರ್ಶಿ ಅಮೃತ ನಿಂಬಾಳ್ಕರ, ಸಂಗಪ್ಪ ಪಡಸಲಗಿ, ವಾರ್ಡನ್ ಕವಿತಾ ಹೂಗಾರ ಸೇರಿದಂತೆ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.