ಬುದ್ದಿಜೀವಿಗಳಿಂದ ದೇಶ ಹಾಳಾಗಿದೆ, ಯತ್ನಾಳ್ ಹೇಳಿದ್ದೇನು ಗೊತ್ತಾ?
Team Udayavani, Jul 26, 2018, 3:39 PM IST
ವಿಜಯಪುರ: ಭಾರತ ದೇಶ ಬುದ್ಧಿ ಜೀವಿಗಳಿಂದಾಗಿಯೇ ಹಾಳಾಗಿದೆ. ನನ್ನಂತಹವರು ಏನಾದ್ರು ಗೃಹ ಮಂತ್ರಿಯಾಗಿದ್ದರೆ ಇಂತಹವರನ್ನು ಗುಂಡು ಹಾರಿಸಿ ಸಾಯಿಸಿ ಎಂದು ಹೇಳುತ್ತಿದ್ದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಗುರುವಾರ ವಿಜಯಪುರದಲ್ಲಿ ಆಯೋಜಿಸಿದ್ದ ಕಾರ್ಗಿಲ್ ವಿಜಯೋತ್ಸವ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ತಮ್ಮ ಭಾಷಣದುದ್ದಕ್ಕೂ ಬುದ್ದಿ ಜೀವಿಗಳು ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.ಕಾಶ್ಮೀರದಲ್ಲಿರುವ ಜನರು ಕೂಡಾ ದೇಶದ ವಿರುದ್ಧ ಘೋಷಣೆ ಕೂಗುತ್ತಾರೆ. ಆದರೆ ಅಂತಹವರಿಗೆ ದೇಶದ ಕೆಲವರು ಬೆಂಬಲ ಕೊಡುತ್ತಾರೆ ಎಂದರು.
ನಮ್ಮ ದೇಶದ ಗಡಿ ಕಾಯುವ, ದೇಶವನ್ನು ರಕ್ಷಿಸುವ ಯೋಧರ ಬಗ್ಗೆಯೂ ಅವಹೇಳನಕಾರಿ ಹೇಳಿಕೆ ಕೊಡುತ್ತಾರೆ. ಸೈನಿಕರು ಸಾಯೋಕೆ ಗಡಿಭಾಗಕ್ಕೆ ಹೋಗುತ್ತಾರೆ ಎಂದು ಅವಮಾನಿಸುತ್ತಾರೆ ಎಂದು ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದ್ರೋಹಿ ಸಂಘಟನೆಗಳಿಂದ ನಮ್ಮ ದೇಶ ಹಾಳಾಗುತ್ತಿದೆ. ಪಾಕಿಸ್ತಾನ ಭಾರತ ವಿರುದ್ಧ ಎಂದೂ ಯುದ್ಧ ಗೆದ್ದಿಲ್ಲ. ದೇಶದ ವಿರುದ್ಧ ಮಾತನಾಡುವವರಿಗೆ ಬೆಂಬಲ ಕೊಡುತ್ತಿದ್ದಾರೆ. ಹೀಗಾದರೆ ದೇಶದ ವ್ಯವಸ್ಥೆ ಏನಾಗುತ್ತಿದೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.