ರಸ್ತೆ ಬದಿ ನರಳುತ್ತಾ ಬಿದ್ದಿದ್ದ ಅನಾಥ ವೃದ್ಧ ಸಾವು
Team Udayavani, Jul 25, 2021, 8:43 PM IST
ಮುದ್ದೇಬಿಹಾಳ: ತಾಲೂಕಿನ ತಂಗಡಗಿ ಗ್ರಾಮದ ಬಳಿ ಕಾಲಿಗೆ ಗ್ಯಾಂಗ್ರಿನ್ ಆಗಿ ರಸ್ತೆ ಬದಿ ನರಳುತ್ತಾ ಬಿದ್ದು ಸಾರ್ವಜನಿಕರು ಮತ್ತು ಸಂಘಟನೆಗಳ ನೆರವಿನೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದ ಆಂಧ್ರಪ್ರದೇಶ ಮೂಲದ 55-65 ವಯಸ್ಸಿನ ಅನಾಥ ವೃದ್ಧನೊಬ್ಬ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾನೆ ಎಂದು ಮುದ್ದೇಬಿಹಾಳ ಪೊಲೀಸರು ತಿಳಿಸಿದ್ದಾರೆ.
ಈ ವೃದ್ಧನ ಗುರುತು ಪತ್ತೇ ಹಚ್ಚಲು ಅವರು ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ. ವಾರಸುದಾರರು ಯಾರಾದರೂ ಇದ್ದಲ್ಲಿ ಮುದ್ದೇಬಿಹಾಳ ಪೊಲೀಸ್ ಠಾಣೆ (ದೂ:08356-220333), ಮುದ್ದೇಬಿಹಾಳ ಸಿಪಿಐ ಕಚೇರಿ (ದೂ: 08352-220332) ಅಥವಾ ವಿಜಯಪುರ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ (ದೂ:08352-222533) ಸಂಪರ್ಕಿಸಿ ಮಾಹಿತಿ ನೀಡಲು ಕೋರಲಾಗಿದೆ.
ಘಟನೆ ಹಿನ್ನೆಲೆ:
ಜು.9 ರಂದು ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದ ಹೊರವಲಯದಲ್ಲಿನ ರಾಜ್ಯ ಹೆದ್ದಾರಿ ಪಕ್ಕದಲ್ಲಿ ಮಳೆಯಲ್ಲೇ ಬಿದ್ದು, ಕಾಲಿನ ಗಾಯಕ್ಕೆ ಹುಳ ಬಿದ್ದು ನರಳಾಡುತ್ತಿದ್ದ ಈತನನ್ನು ಕಾರ್ಗಿಲ್ ಹುತಾತ್ಮ ಯೋಧರ ಸ್ಮಾರಕ ನಿರ್ಮಾಣ ಸಮಿತಿ ಅಧ್ಯಕ್ಷ ಕಿರಣಗೌಡ ಪಾಟೀಲ ಕಂಡು ತಂಗಡಗಿಯ ಮಾಜಿ ಸೈನಿಕ ಬಸವರಾಜ ನಿಡಗುಂದಿ ಮತ್ತು ಸ್ನೇಹಿತರ ಬಳಗಕ್ಕೆ ಮಾಹಿತಿ ನೀಡಿದ್ದರು. ಅವರು ವೃದ್ಧನಿಗೆ ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದರು. ಸಲಾಂ ಭಾರತ ಟ್ರಸ್ಟ್ನ ಸದಸ್ಯರು ಆತನನ್ನು ಮುದ್ದೇಬಿಹಾಳದ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಸಿಪಿಐ ಆನಂದ ವಾಘ್ಮೋಡೆ ಉಸ್ತುವಾರಿಯಲ್ಲಿ ತುರ್ತು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು.
ಅವ್ಯವಸ್ಥೆಗೆ ಅಸಮಾಧಾನ:
ವೃದ್ಧನನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ಕಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಸಲಾಂ ಭಾರತ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ವಾಜೀದ್ ಹಡಲಗೇರಿ ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿ ಅನಾಥ ವೃದ್ಧನಿಗೆ ಸರಿಯಾದ ಚಿಕಿತ್ಸೆ ದೊರೆತಿಲ್ಲ ಎನ್ನುವುದಕ್ಕೆ ಆತನ ಸಾವು ಸಾಕ್ಷಿಯಾಗಿದೆ. ಆತನ ಕಾಲಿಗೆ ಹುಳ ಬಿದ್ದು ಗ್ಯಾಂಗರೀನ್ ಆಗಿತ್ತು. ಕಾಲು ಕತ್ತಿರಿಸಿದರೆ ಆತ ಬದುಕುತ್ತಾನೆ ಎಂದು ಇಲ್ಲಿನ ಆಸ್ಪತ್ರೆ ವೈದ್ಯರು ತಿಳಿಸಿದ್ದರು. ಆದರೆ ಜಿಲ್ಲಾ ಆಸ್ಪತ್ರೆಯಲ್ಲಿ ಆತನಿಗೆ ಸರಿಯಾದ ಚಿಕಿತ್ಸೆ ನೀಡಲಿಲ್ಲ. ಸರಿಯಾದ ಚಿಕಿತ್ಸೆ ದೊರೆತಿದ್ದರೆ ಆತನನ್ನು ಅನಾಥ ವೃದ್ಧಾಶ್ರಮಕ್ಕೆ ಸೇರಿಸಿಕೊಳ್ಳಲು ಎಲ್ಲ ತಯಾರಿ ಮಾಡಲಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.