ಜನ ಸೇವೆ ಪ್ರತಿನಿಧಿಗಳ ಕರ್ತವ್ಯ


Team Udayavani, Mar 12, 2018, 3:30 PM IST

vij-1.jpg

ಇಂಡಿ: ಜನ ಸೇವೆ ಮಾಡುವುದು ಜನಪ್ರತಿನಿಧಿಗಳ ಕರ್ತವ್ಯ. ರಾಜಕೀಯ ಮಾಡುವುದು ಶೋಕಿಗಾಗಿ ಆಗಬಾರದು, ಜನರ ಸಮಸ್ಯೆ ಪರಿಹರಿಸಲು ರಾಜಕೀಯ ಮಾಡಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ರವಿವಾರ ಹಮ್ಮಿಕೊಂಡಿದ್ದ ಸಾಲೋಟಗಿ ಜಿಪಂ ವ್ಯಾಪ್ತಿಯ ಕಾಂಗ್ರೆಸ್‌ ಕರ್ಯಕರ್ತರ ಬೃಹತ್‌ ಸಭೆ ಉದ್ದೇಶಿಸಿ ಅವರು ಮಾತನಾಡಿದರು. 2013ರಲ್ಲಿ ಭೀಕರ ಬರಗಾಲಕ್ಕೆ ತುತ್ತಾಗಿರುವ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿತ್ತು. ಟ್ಯಾಂಕರ್‌ಗಳ ಮೂಲಕ ನೀರು ಹಾಕುವ ಪರಿಸ್ಥಿತಿ ಕಣ್ಣಾರೆ ಕಂಡು ಇದಕ್ಕೊಂದು ಶಾಶ್ವತ ಪರಿಹಾರಕ್ಕಾಗಿ ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಪ್ರಾರಂಭಿಸಲಾಗಿದೆ.

ನನ್ನ ಮತಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 17 ಕೆರೆಗಳನ್ನು ತುಂಬಿಸಲಾಗಿದೆ. ಇದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿ
ನೀರಿನ ಅಭಾವ ಕಡಿಮೆಯಾಗಿದೆ. ಗುತ್ತಿ ಬಸವಣ್ಣ ಏತನಿರಾವರಿ 120 ಕಿ.ಮೀ. ಸ್ಥಗಿತವಾಗಿದ್ದು ಇಂದು 203 ಕಿ.ಮೀ. ವಿಸ್ತರಿಸಲಾಗಿದೆ. ಹೊರ್ತಿ ಸುತ್ತ ಮುತ್ತಲಿನ ರೈತರ ಭೂಮಿಗೆ ಮುಳವಾಡ ಏತ ನೀರಾವರಿ ಯೋಜನೆ ಮುಂದುವರಿದ ಭಾಗವಾಗಿ ನಾಲ್ಕೂವರೆ ಟಿಎಂಸಿ ನೀರು ಬಳಕೆ ಮಾಡುವಂತೆ ಯೋಜನೆ ತಯಾರಿಸಲಾಗಿದೆ ಎಂದರು.

ಪಟ್ಟಣದ ಸೌಂದಯಿಕರಣ, ಮಿನಿ ವಿಧಾನಸೌಧ, ರಸ್ತೆಗಳ ಅಗಲೀಕರಣ, ವಿದ್ಯುತ್‌ ವ್ಯವಸ್ಥೆ , ತಾಲೂಕಿನಲ್ಲಿ ಬಹುತೇಕ ಪಿಡಬ್ಲೂಡಿ ರಸ್ತೆಗಳ ಸುಧಾರಣೆ ಹೀಗೆ ಅನೇಕ ಯೋಜನೆಗಳ ಜೊತೆ 12ನೇ ಶತಮಾನದ ಬಸವಣ್ಣನ ಸಂದೇಶದಂತೆ ಸರ್ವ ಸಮುದಾಯಕ್ಕೆ ಸಾಮಾಜಿಕ ನ್ಯಾಯ ನೀಡಿದ್ದೇನೆ. ಸಂಸದಿಯ ವ್ಯವಸ್ಥೆಯಲ್ಲಿ ಒಬ್ಬ ಶಾಸಕನಾಗಿ ತಾಲೂಕಿನ ಸಮಸ್ಯೆಗಳ ಬಗ್ಗೆ ಕರ್ನಾಟಕ ರಾಜ್ಯದಲ್ಲಿಯೇ ಅತಿ ಹೆಚ್ಚು ಪ್ರಶ್ನೆಯನ್ನು ಕೇಳಿ ಕ್ಷೇತ್ರದ ಅಭಿವೃದ್ಧಿ ಮಾಡಿದ್ದೇನೆ. ಚುನಾವಣಾ ಪೂರ್ವದಲ್ಲಿ ನಾನು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ. ದುಡಿದವರಿಗೆ ಮತದಾನದ ಮೂಲಕ ಕೂಲಿ ಕೊಡಿ ಎಂದು ಮನವಿ ಮಾಡಿದರು.

ಜಿಪಂ ಸದಸ್ಯ ಶಿವಯೋಗಪ್ಪ ನೇದಲಗಿ, ಎಪಿಎಂಸಿ ಅಧ್ಯಕ್ಷ ಜೆಟ್ಟೆಪ್ಪ ರವಳಿ, ಭೀಮರಾಯಗೌಡ ಪಾಟೀಲ, ಗುರಣ್ಣಗೌಡ ಪಾಟೀಲ, ತಡವಲಗಾ ಗ್ರಾಪಂ ಅಧ್ಯಕ್ಷ ತಮ್ಮಣ್ಣ ಪೂಜಾರ ಮಾತನಾಡಿದರು.

ತಾಪಂ ಸದಸ್ಯ ಜೀತಪ್ಪ ಕಲ್ಯಾಣಿ, ಪುರಸಭೆ ಸದಸ್ಯ ಶ್ರೀಕಾಂತ ಕುಡಿಗನೂರ, ಅಣ್ಣಾಸಾಹ ಹಂಚಿನಮನಿ, ಇಲಿಯಾಸ್‌ ಬೋರಾಮಣಿ, ಸೋಮು ಮ್ಯಾಕೇರಿ, ಶಿವಯೋಗಪ್ಪ ಚನ್ನಗೊಂಡ, ವಿಶ್ವನಾಥ ಚವ್ಹಾಣ, ಹನುಮಂತರಾಯಗೌಡ ಪಾಟೀಲ, ಭೀಮಣ್ಣ ಕೌಲಗಿ, ಧನಸಿಂಗ್‌ ಚವ್ಹಾಣ, ರಾಜುಗೌಡ ಪಾಟೀಲ, ಸಿದ್ದರಾಯ ಐರೋಡಗಿ, ಸೋಮಯ್ಯ ಹಿರೇಮಠ, ಅದಂ ಅಗರಖೇಡ, ಕಾಶೀಂ ಕೋಮಡಿ ಸೇರಿದಂತೆ ಅನೇಕ ಮುಖಂಡರು ವೇದಿಕೆಯಲ್ಲಿದ್ದರು

ಟಾಪ್ ನ್ಯೂಸ್

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

mob

Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !

Dinesh-Gundurao

Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್‌ ಅವ್ಯವಹಾರ ಉಲ್ಲೇಖ: ದಿನೇಶ್‌ ಗುಂಡೂರಾವ್‌

1-manipura

Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

8

ಗಂಭೀರ್‌ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್‌ ಪೇನ್‌

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.