ಇತಿಹಾಸ ಸೃಷ್ಟಿಸಿದ್ದೆ ಸಿದ್ದು ಸರ್ಕಾರ
Team Udayavani, Mar 17, 2021, 7:15 PM IST
ಸಿಂದಗಿ : ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿನ ಸರಕಾರ ಚುನಾವಣೆಯಲ್ಲಿ ನೀಡಿದ 168 ಭರವಸೆಗಳನ್ನು ಅಧಿಕಾರ ಅವಧಿಯಲ್ಲಿ ಪೂರ್ಣಗೊಳಿಸುವ ಮೂಲಕ ಇತಿಹಾಸ ಸೃಷ್ಟಿಸಿದೆ ಎಂದು ಮಾಜಿ ಸಚಿವ, ಹಾಲಿ ಶಾಸಕ ಡಾ| ಎಂ.ಬಿ. ಪಾಟೀಲ ಹೇಳಿದರು.
ಮಂಗಳವಾರ ಪಟ್ಟಣದ ಸಿಂದಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ಕರೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2013ರಿಂದ 2108ರವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಜನಪರ, ರೈತಪರ, ಹಿಂದುಳಿದವರ, ದೀನ-ದಲಿತ ಪರ ಸರಕಾರವಾಗಿತ್ತು ಎಂದು ಹೇಳಿದರು. ದಿ| ಶಾಸಕ ಎಂ.ಸಿ. ಮನಗೂಳಿ ಅವರ ಪುತ್ರ ಅಶೋಕ ಮನಗೂಳಿ ಅವರು ಯಾವುದೇ ಷರತ್ತು ಇಲ್ಲದೇ ಪಕ್ಷ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಬಲ ಹೆಚ್ಚಿಸಿದೆ.
ಮಾ.19ರಂದು ಸಂಜೆ 4ಕ್ಕೆ ಸ್ಥಳೀಯ ಬಸ್ ನಿಲ್ದಾಣದ ಹತ್ತಿರದಲ್ಲಿನ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದಲ್ಲಿ 50 ಸಾವಿರಕ್ಕೂ ಹೆಚ್ಚು ಜನ ಸೇರುತ್ತಾರೆ. ಇಂದೇ ವಿಧಾನಸಭಾ ಸಾರ್ವತ್ರಿಕ ಚುನಾವಣೆ ನಡೆದರೆ ಕಾಂಗ್ರೆಸ್ ಪಕ್ಷ 130-140 ಸ್ಥಾನಗಳ ಗೆಲುವು ಸಾಧಿಸುತ್ತದೆ ಎಂದರು. ಉಪ ಚುನಾವಣೆಯಲ್ಲಿ ವಿಠuಲ ಕೋಳ್ಳೂರ, ಅಶೋಕ ಮನಗೂಳಿ, ಶರಣಪ್ಪ ಸುಣಗಾರ, ಮಲ್ಲಣ್ಣ ಸಾಲಿ, ಎಂ.ಆರ್. ತಾಂಬೋಳಿ ಸೇರಿದಂತೆ 7 ಜನರು ಆಕಾಂಕ್ಷಿ ಪಟ್ಟಿಯಲ್ಲಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಕ್ಷದ ವರಿಷ್ಠರು ಸಭೆ ಸೇರಿ ಯಾರಿಗೆ ಟಿಕೆಟ್ ನೀಡಬೇಕು ಎಂದು ನಿರ್ಣಯ ಮಾಡಲಿದ್ದಾರೆ ಎಂದು ಹೇಳಿದರು.
ಶಾಸಕ ಶಿವಾನಂದ ಪಾಟೀಲ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ರೈತ ವಿರೋಧಿ ಸರಕಾರಗಳಾಗಿವೆ. ದಿ| ಶಾಸಕ ಎಂ.ಸಿ. ಮನಗೂಳಿ ಅವರ ಪುತ್ರ ಅಶೋಕ ಮನಗೂಳಿ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದರು.
ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ರಾಜು ಆಲಗೂರ, ಶಾಸಕ ಯಶವಂತರಾಯಗೌಡ ಪಾಟೀಲ, ಮಾಜಿ ಶಾಸಕ ಅಪ್ಪಾಸಾಬ ನಾಡಗೌಡ, ಸುಭಾಷ್ ಛಾಯಾಗೋಳ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೊಳ್ಳೂರ, ಶರಣಪ್ಪ ಸುಣಗಾರ, ಅಶೋಕ ಮನಗೂಳಿ, ಮೈಬೂಬ ತಾಂಬೋಳಿ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಬೆಟಗೇರಿ, ಜಿಲ್ಲಾ ಮಹಿಳಾ ಘಟಕದ ಕಾರ್ಯದರ್ಶಿ ಸಂಜನಾ ಭಜಂತ್ರಿ, ಮುಖಂಡರಾದ ಅಶೋಕ ವಾರದ, ಶರಣಪ್ಪ ವಾರದ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಎ. ಖತೀಬ, ಮಲ್ಲು ಗತ್ತರಗಿ, ಯುವ ಧುರೀಣರಾದ ಅಬು ಖತೀಬ, ಚನ್ನು ವಾರದ, ಯೋಗಪ್ಪಗೌಡ ಪಾಟಿಲ. ಸದಸ್ಯ ಶಾಂತವೀರ ಬಿರಾದಾರ, ಮುನ್ನಾ ಬೈರಾಮುಡಗಿ, ಭೀಮು ಬಿರಾದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.