ದಾರಿ ಸಮಸ್ಯೆ: 4ನೇ ದಿನಕ್ಕೆ ರೈತರ ಆಮರಣ ಸತ್ಯಾಗ್ರಹ
Team Udayavani, Feb 19, 2018, 3:59 PM IST
ವಿಜಯಪುರ: ರೈತರು ಜಮೀನಗಳಿಗೆ ಹೋಗಲು ದಾರಿ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ
ಆಮರಣ ಉಪವಾಸ ನಾಲ್ಕನೇ ದಿನಕ್ಕೆ ಕಾಲಿರಿಸಿದೆ. ಈ ಮಧ್ಯೆ ಧರಣಿ ಸಳಕ್ಕೆ ರವಿವಾರ ಭೇಟಿ ನೀಡಿದ ಶಾಸಕರೊಬ್ಬರನ್ನು ರೈತರು ತರಾಟೆಗೆ ತೆಗೆದುಕೊಂಡು ಹರಿಹಾಯ್ದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಸಂಘಟನೆ ಜಿಲ್ಲಾ
ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಶಿವಪ್ಪ ಬುಜರಿ ಹಾಗೂ ದೇವೇಂದ್ರಪ್ಪ ಕುಂಬಾರ ಇವರು ಆಮರಣ ಉಪವಾಸ ಆರಂಭಿಸಿದ್ದಾರೆ. 3ನೇ ದಿನ ಮುಕ್ತಾಯವಾಗಿ 4ನೇ ದಿನಕ್ಕೆ ಕಾಲಿರಿಸಿದೆ.
ಈ ಮಧ್ಯೆ ರೈತರು ಆಮರಣ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಸಿಂದಗಿ ಶಾಸಕ ರಮೇಶ ಭೂಸನೂರ, ರೈತರು ಅನುಭವಿಸುತ್ತಿರುವ ಹೊಲಕ್ಕೆ ಹೋಗುವ ದಾರಿ ಸಮಸ್ಯೆಯನ್ನು ಸದನದಲ್ಲಿ ಪ್ರಸ್ತಾಪಿಸುವ ಭರವಸೆ ನೀಡಿದರು. ಸದರಿ ಬಜೆಟ್ ಅಧಿವೇಶನದಲ್ಲೇ ಸರ್ಕಾರದ ಗಮನ ಸೆಳೆದು ಅಧಿವೇಶನದಲ್ಲಿ ಚರ್ಚಿಸಿ, ಸಮಸ್ಯೆಗೆ ಪರಿಹಾರ ಕಂಡುಕೊಡುವ ಭರವಸೆ ನೀಡಿದರು.
ಶಾಸಕ ರಮೇಶ ಭೂಸನೂರ ಅವರ ಮಾತಿನಿಂದ ಸಿಡುಕಿದ ಅರವಿಂದ ಕುಲಕರ್ಣಿ, ಜಿಲ್ಲೆಯಲ್ಲಿ 8 ಶಾಸಕರಿದ್ದು ಕಳೆದ ಹಲವು ಬಾರಿ ಈ ಕುರಿತು ರೈತರು ನಡೆಸಿದ ಪ್ರತಿಭಟನೆಗೆ ಕನಿಷ್ಠ ಸ್ಪಂದಿಸುವ ಸೌಜನ್ಯ ತೋರಿಲ್ಲ. ರೈತರ ಮತಗಳಿಂದಲೇ ಅಧಿಕಾರಕ್ಕೆ ಬಂದಿರುವ ಎಲ್ಲ ಶಾಸಕರು ರೈತರ ಕುರಿತು ಕನಿಷ್ಠ ಕಾಳಜಿಯನ್ನೂ ತೋರುತ್ತಿಲ್ಲ. ರೈತರ ಸಮಸ್ಯೆಗಳ ಮೇಲೆ ರಾಜಕಾರಣ ಮಾಡಿ ನಿಮ್ಮ ಕೆಲಸ ಈಡೇರಿಸಿಕೊಳ್ಳುತ್ತಿದ್ದೀರಿ ಎಂದು ಕಿಡಿ ಕಾರಿದರು.
ಸಂಘಟನೆ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ರಂಜಣಗಿ, ಸಿದ್ರಾಮ ಅಂಗಡಗೇರಿ, ಕೃಷ್ಣಪ್ಪ ಪವಾರ, ಪಾಂಡು ಹ್ಯಾಡಿ, ಡಾ|
ಎಂ.ರಾಮಚಂದ್ರ ಬಮ್ಮನಜೋಗಿ, ವಿಠ್ಠಲ ಅಮಾತೆಗೌಡರ, ಭೀಮಶಿ ಚಲವಾದಿ, ರಾಜಶೇಖರ ಗುಜ್ಜರ, ಇಂಡಿ ತಾಲೂಕಾಧ್ಯಕ್ಷ ಮುದ್ದಗೌಡ ಪಾಟೀಲ, ಶಿವಪ್ಪ ರೂಗಿ, ಶ್ಯಾಮರಾಯ ಕಾಗನರಿ, ಬಸವರಾಜ ಜೇವರ್ಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.