ಬೆಳೆ ಮೌಲ್ಯವರ್ಧನೆಯಲ್ಲಿ ಮಹಿಳೆ ಪಾತ್ರ ದೊಡ್ಡದು
Team Udayavani, Oct 20, 2018, 3:50 PM IST
ವಿಜಯಪುರ: ಆಧುನಿಕ ಕೃಷಿಯಲ್ಲಿ ರೈತರು ಕೇವಲ ಬೆಳೆ ಬೆಳೆದರೆ ಸಾಲದು, ಬೆಳೆದ ಬೆಳೆಗೆ ನಿರೀಕ್ಷಿತ ಬೆಲೆ ಹಾಗೂ ಲಾಭ ಬರುವಂತಾಗಲು ರೈತರು ತಾವು ಬೆಳೆಗಳಿಗೆ ಮೌಲ್ಯವರ್ಧನೆ ಮಾಡುವುದು ಇಂದಿನ ಅಗತ್ಯವಾಗಿದೆ. ಈ ಕೆಲಸದಲ್ಲಿ ಮಹಿಳೆಯರ ಪಾತ್ರ ದೊಡ್ಡದು ಎಂದು ಮಾಜಿ ಸೈನಿಕ ಫಿಲಿಫ್ ಕುಂದರಗಿ ಅಭಿಪ್ರಾಯಪಟ್ಟರು.
ಹಿಟ್ನಳ್ಳಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರ ಆಯೋಜಿಸಿದ್ದ ಮಹಿಳಾ ಕಿಸಾನ್ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಸಕ್ತ ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳಿಗಿಂತ ಮೌಲ್ಯವರ್ಧಿತ ಬೆಳೆಗೆ ಹೆಚ್ಚಿನ ಬೇಡಿಕೆ ಇದೆ. ಹೀಗಾಗಿ ರೈತರು ತಾವು ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾದಾಗ ಮೌಲ್ಯವ ರ್ಧಿಸಿ ಕೃಷಿ ಬೆಳೆಗಳ ಪೂರಕ ಪದಾರ್ಥಗಳನ್ನು ತಯಾರಿಸುವ ಮೂಲಕ ಬೆಲೆ ಕುಸಿತಕ್ಕೆ ಸೆಡ್ಡು ಹೊಡೆಯಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಕೃಷಿ ಬೆಳೆಗಳಿಗೆ ದ್ವಿಗುಣ ಬೆಲೆ ತಂದುಕೊಡುವ ಮೌಲ್ಯವರ್ಧನೆ ಮಾಡುವಲ್ಲಿ ರೈತ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಮೌಲ್ಯವರ್ಧಕ ಕೃಷಿ ಉತ್ಪನ್ನಗಳ ಮಾರಾಟದಿಂದ ಮಹಿಳೆಯರು ಪೂರಕ ಆದಾಯದ ಗಳಿಸುವ ಜೊತೆಗೆ ಕುಟುಂಬದ ಆರ್ಥಿಕ ಶಕ್ತಿ ವೃದ್ಧಿಸುವ ಜೊತೆಗೆ ತಾವು
ಕೂಡ ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ| ಎಸ್.ಎ. ಬಿರಾದಾರ ಮಾತನಾಡಿ, ಭಾರತದ ಕೃಷಿ ಪರಂಪರೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖ ಸ್ಥಾನ ಪಡೆದಿದೆ. ಮಹಿಳೆ ಇಲ್ಲದ ಭಾರತೀಯ ಕೃಷಿ ಊಹೆಗೂ ಅಸಾಧ್ಯ. ಹೀಗಾಗಿ ಕೃಷಿ ಕಾಯಕದ ಮಹಿಳೆಯರು ಸಂಘಟಿತರಾಗಿ ಗ್ರಾಮೀಣ ಮಟ್ಟದಲ್ಲಿ ಸಂಘಗಳ ರಚಿಸಿಕೊಂಡು ಸರ್ಕಾರದ ಸೌಲಭ್ಯ ಪಡೆಯುವ ಜೊತೆಗೆ ನಿಮ್ಮ ಆರ್ಥಿಕ ಶಕ್ತಿ ವೃದ್ಧಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ಕೃಷಿ ಸಾಧಕಿ ರೈತ ಮಹಿಳೆ ದೊಂಡುಬಾಯಿ ಚವ್ಹಾಣ ಅವರನ್ನು ಸನ್ಮಾನಿಸಲಾಯಿತು. ಡಾ| ಎಸ್.ಎಂ. ವಸ್ತ್ರದ, ಡಾ| ಪ್ರೇಮಾ ಪಾಟೀಲ, ಡಾ| ಸಂಗೀತಾ ಜಾಧವ, ಶ್ರೀಶೈಲ ರಾಠೊಡ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.