ಕೃಷ್ಣೆ ನೀರು ಸದ್ಬಳಕೆಯಾಗಲಿ
Team Udayavani, Mar 9, 2019, 11:24 AM IST
ಮುದ್ದೇಬಿಹಾಳ: ಕೃಷ್ಣಾ ನದಿಯ ಹೊಳೆದಂಡೆ ರೈತರು ನೀರಾವರಿ ಯೋಜನೆಗಳಿಗೆ ಭೂಮಿ ಕಳೆದುಕೊಂಡು ಸಂತ್ರಸ್ತರಾಗಿದ್ದು, ಅವರ ತ್ಯಾಗಕ್ಕೆ ಪ್ರತಿಫಲ ದೊರಕಿಸಿಕೊಡಲು ಸಾಕಷ್ಟು ಪ್ರಯತ್ನ ನಡೆಸಿದ್ದೇನೆ. ಆ ರೈತರ ಜಮೀನಿಗೆ ನೀರಾವರಿ ಸೌಲಭ್ಯ ತಲುಪಿಸಲು ಈಗಾಗಲೇ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದು ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಹೇಳಿದರು.
ತಂಗಡಗಿ ಗ್ರಾಮದಲ್ಲಿ ರಸ್ತೆ ಕಾಮಗಾರಿ, ಸರ್ಕಾರಿ ಪ್ರೌಢಶಾಲೆ ಕೊಠಡಿ ಕಟ್ಟಡ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕೃಷ್ಣೆ ನೀರು ಬಳಕೆಗೆ ಎ, ಬಿ ಸ್ಕೀಂ ನೆಪದಲ್ಲಿ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ. ಯುಕೆಪಿಯ ಎ ಸ್ಕೀಂನಲ್ಲಿ ಇನ್ನೂ 55 ಟಿಎಂಸಿ ನೀರು ಬಳಸಿಕೊಂಡಿಲ್ಲ. ಈ ನೀರು ಬಳಸಿಕೊಳ್ಳಲು ಕಾನೂನಾತ್ಮಕ ತೊಂದರೆ ಇಲ್ಲ ಅನ್ನೋದನ್ನು ಸರ್ಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದರು.
ನೀರಾವರಿಗೆ 110 ಕೋಟಿ, ನೀರಾವರಿ ಡಿಸ್ಟ್ರೀಬ್ಯೂಟರ್, ಲ್ಯಾಟರಲ್ ದುರಸ್ತಿಗೆ 44.5 ಕೋಟಿ, ಗ್ರಾಮೀಣ ರಸ್ತೆಗಳಿಗೆ 63 ಕೋಟಿ, ಪ್ರೌಢಶಾಲೆ ಕೊಠಡಿಗಳಿಗೆ 2.36 ಕೋಟಿ, ಪ್ರಾಥಮಿಕ ಶಾಲೆ ಕೊಠಡಿಗಳಿಗೆ 2.83 ಕೋಟಿ ಹಾಗೂ ತಂಗಡಗಿಯಲ್ಲಿನ ರಸ್ತೆಗಳಿಗೆ 50 ಲಕ್ಷ ಅನುದಾನ ಸರ್ಕಾರದಿಂದ ತಂದಿದ್ದೇನೆ. ಚರಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕರ ನಿಧಿ ಅಡಿ 5 ಲಕ್ಷ ರೂ. ಕೊಟ್ಟಿದ್ದೇನೆ. 22 ಕೆರೆಗಳಲ್ಲಿ 18 ಕೆರೆ ತುಂಬಿಸಿದ್ದೇನೆ. ಇನ್ನೂ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಬೇಕಿದೆ. ಆದರೆ ನಮ್ಮ ಸರ್ಕಾರ ಇಲ್ಲದ್ದರಿಂದ ಸುಮ್ಮನಿದ್ದೇನೆ ಎಂದರು.
ಇದೇ ಸಂದರ್ಭ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ತಮಗೆ ಶಾಲೆಗೆ ಹೋಗಲು ರಸ್ತೆ ಮತ್ತು ಶಾಲೆಗೆ ಕಂಪ್ಯೂಟರ್ ಸೌಲಭ್ಯ ದೊರಕಿಸಿಕೊಡುವಂತೆ ಶಾಸಕರನ್ನು ಒತ್ತಾಯಿಸಿದರು. ಧುರೀಣರಾದ ಶಿವಶಂಕರಗೌಡ ಹಿರೇಗೌಡರ, ಮಲಕೇಂದ್ರಗೌಡ ಪಾಟೀಲ ಸಾನ್ನಿಧ್ಯ ವಹಿಸಿದ್ದ ಹಡಪದ ಅಪ್ಪಣ್ಣ ಸಂಸ್ಥಾನಮಠದ ಅನ್ನದಾನಭಾರತಿ ಮಾತನಾಡಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಿರಾದಾರ, ಪ್ರಭಾರ ದೈಹಿಕ ಶಿಕ್ಷಣಾಧಿಕಾರಿ ಎಚ್.ಎಲ್. ಕರಡ್ಡಿ, ಪುರಸಭೆ ಮಾಜಿ ಸದಸ್ಯ ಮನೋಹರ ತುಪ್ಪದ, ಲಕ್ಷ್ಮಣ ಬಿಜ್ಜೂರ, ಸಂಗಮೇಶ ಹುಂಡೇಕಾರ, ಶಿವಾನಂದ ಮಂಕಣಿ, ಶಿವಾನಂದ ನಿಡಗುಂದಿ, ಬಸವರಾಜ ಡೊಂಗರಗಾಂವಿ, ರಾಜು ಹೊಳಿ, ಸಿದ್ದು ಹೊಳಿ, ಮಹಾಂತೇಶ ಪಡಶೆಟ್ಟಿ, ನಿಂಗಪ್ಪ ಕಮಲಾಪುರ, ಮುದಕಪ್ಪಗೌಡ ಪಾಟೀಲ, ಪರಶುರಾಮ ಢವಳಗಿ, ಪಿಡಿಒ ಅಯ್ಯಪ್ಪ ತಂಗಡಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.