Theft: ಬೀಗ ಹಾಕಿದ್ದ ಮನೆಗಳ್ಳತನ,ನಗದು ಚಿನ್ನಾಭರಣ ದೋಚಿ ಕಳ್ಳರ ಪರಾರಿ;ಪೊಲೀಸರಿಂದ ಪರಿಶೀಲನೆ
Team Udayavani, Jul 17, 2024, 11:19 AM IST
ವಿಜಯಪುರ: ಬೀಗ ಹಾಕಿದ್ದ ಮನೆಯಲ್ಲಿ ಬಾಗಿಲ ಕೊಂಡಿ ಕತ್ತರಿಸಿ ಕಳ್ಳತನ ನಗ-ನಗದು ಕಳ್ಳತನ ಮಾಡಿರುವ ಘಟನೆ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ.
ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಕಾಲೋನಿಯಲ್ಲಿರುವ ಮಹಮ್ಮದ್ ಹುಸೇನ್ ಎಂಬವರ ಬೀಗ ಹಾಕಿದ್ದ ಮನೆಯಲ್ಲಿ ಕಳ್ಳತನ ನಡೆದಿದೆ.
ಮೊಹರಮ್ ಹಬ್ಬದ ಹಿನ್ನೆಲೆಯಲ್ಲಿ ಪಟ್ಟಣದಲ್ಲೇ ಇರುವ ಮತ್ತೊಂದು ಮನೆಗೆ ಕುಟುಂಬದ ಸದಸ್ಯರು ಹೋಗಿದ್ದರು. ಮಂಗಳವಾರ ರಾತ್ರಿ 12 ಗಂಟೆ ಸುಮಾರಿಗೆ ಹುಸೇನ್ ಕೂಡ ಹುಡ್ಕೋ ಕಾಲೋನಿಯಲ್ಲಿನ ಮನೆಗೆ ಬೀಗ ಹಾಕಿ ಕುಟುಂಬ ಸದಸ್ಯರಿದ್ದ ಮನೆಗೆ ಹೋಗಿದ್ದರು.
ಈ ವೇಳೆ ಹೊಂಚು ಹಾಕಿರುವ ಕಳ್ಳರು ಮನೆಯ ಚಿಲಕದ ಕೊಂಡಿ ಕತ್ತರಿಸಿ ಒಳಗೆ ಪ್ರವೇಶಿಸಿದ್ದು, ಚಿನ್ನಾಭರಣ, ನಗದು ಇರಿಸಿದ್ದ ತಿಜೋರಿಗಳನ್ನು ಮುರಿದು ಕಳ್ಳತನ ಮಾಡಿದ್ದಾರೆ.
ಉದ್ಯಮ ನಡೆಸುತ್ತಿರುವ ಹುಸೇನ್ ವ್ಯಾಪಾರ ವಹಿವಾಟಿನಿಂದ ಮಂಗಳವಾರ ಸಂಗ್ರಹಿಸಿದ್ದ 14,300 ರೂ. ನಗದು, ಚಿನ್ನದ ಉಂಗುರ, ಚಿನ್ನ-ಬೆಳ್ಳಿಯ ನಾಣ್ಯಗಳು ಸೇರಿದಂತೆ ಇತರೆ ವಸ್ತುಗಳು ಕಳ್ಳತನವಾಗಿದೆ ಎಂದು ಪ್ರಾಥಮಿಕ ಹಂತದಲ್ಲಿ ಮಾಹಿತಿ ಲಭ್ಯವಾಗಿದೆ.
ಕಳ್ಳತನ ನಡೆದಿರುವ ಹುಸೇನ್ ಅವರ ಮನೆಯ ಪಕ್ಕದಲ್ಲೇ ಶಾಸಕರ ಮನೆಯೂ ಇದ್ದು, ಇಂಥ ಪರಿಸರದಲ್ಲೇ ಕಳ್ಳತನ ನಡೆದಿರುವುದು ಜನರಲ್ಲಿ ಆತಂಕ ಮೂಡುವಂತೆ ಮಾಡಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಕಳ್ಳರಿಗಾಗಿ ಶೋಧ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.