ಕೃಷ್ಣಾ ನದಿ ಪ್ರವಾಹ ಭೀತಿ ಇಲ್ಲ
Team Udayavani, Aug 11, 2020, 11:00 AM IST
ವಿಜಯಪುರ: ಜಿಲ್ಲೆಯಲ್ಲಿ ಕೃಷ್ಣಾ ನದಿಯಲ್ಲಿ ಹರಿವಿನ ಪ್ರಮಾಣ ತಗ್ಗಿದೆ. ಕೃಷ್ಣಾ ನದಿಗೆ ಮಹಾರಾಷ್ಟ್ರ ರಾಜ್ಯದ ಜಲಾಶಯಗಳಿಂದ ಹರಿಬಿಡುವ ನೀರಿನ ಪ್ರಮಾಣದ ಕುರಿತು ಕ್ಷಣ ಕ್ಷಣದ ಮಾಹಿತಿ ಪಡೆಯಲಾಗುತ್ತಿದೆ. ಅಲ್ಲಿನ ಜಲಾಶಯಗಳ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ನದಿಯಲ್ಲಿ ನೀರಿನ ಹರಿವು ನಿರ್ವಹಣೆ ಮಾಡಲಾಗುತ್ತಿದೆ. ಹೀಗಾಗಿ ಜಿಲ್ಲೆಯ ಕೃಷ್ಣಾ ನದಿಪಾತ್ರದ ಜನರಿಗೆ ಪ್ರವಾಹ ಭೀತಿ ಇಲ್ಲ ಎಂದು ಜಿಲ್ಲಾಧಿಕಾರಿ ಪಿ.ಸುನಿಲಕುಮಾರ ಹೇಳಿದರು.
ಮಾಧ್ಯಮದವರಿಗೆ ಜಿಲ್ಲೆಯ ನದಿ ಪ್ರವಾಹ ಪರಿಸ್ಥಿತಿ ಕುರಿತು ವಿವರ ನೀಡಿದ ಅವರು, ಕೃಷ್ಣಾ ನದಿಗೆ ಆಲಮಟ್ಟಿ ಬಳಿ ನಿರ್ಮಿಸಿರುವ ಲಾಲ್‌ಬಹದ್ದೂರ್ ಶಾಸ್ತ್ರಿ ಜಲಾಶಯದ ಒಳ ಹರಿವು ಇರುವಷ್ಟೇ ನೀರನ್ನು ನದಿ ಮೂಲಕ ಸಮಪ್ರಮಾಣದಲ್ಲಿ ನೀರು ಹೊರಬಿಡುವ ಮೂಲಕ ಒಳ-ಹೊರ ಹರಿವು ಸರಿದೂಗಿಸಲು ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಜಿಲ್ಲೆಯ ನದಿ ಪಾತ್ರದ ಜನರಿಗೆ ಪ್ರವಾಹ ಭೀತಿ ಇಲ್ಲ ಎಂದರು.
ಕೃಷ್ಣಾ ನದಿ ಮೂಲಕ ನಮ್ಮ ಜಿಲ್ಲೆಯ ಜಲಾಶಯಗಳಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣದಷ್ಟೇ ನೀರನ್ನು ಜಲಾಶಯಗಳ ಮೂಲಕ ನದಿಗೆ ಹರಿಬಿಡಲಾಗುತ್ತಿದೆ. ಹೀಗಾಗಿ ಹರಿವು ಸಮಾನ ರೀತಿಯಲ್ಲಿದ್ದು ಯಾವುದೇ ರೀತಿಯಿಂದ ಭಯಪಡುವ ಅವಶ್ಯಕತೆ ಇಲ್ಲ. ಪ್ರವಾಹದ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಸದ್ಯ ಆಲಮಟ್ಟಿ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದು, ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ಬಾರಿ ಒಳ ಹರಿವು ಹಾಗೂ ಸಂಗ್ರಹ ಕಡಿಮೆ ಇದೆ ಎಂದು ತಿಳಿಸಿದರು.
ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಹರಿಯುತ್ತಿರುವ ನೀರು ಹಾಗೂ ಪ್ರವಾಹದ ಮುನ್ನೆಚ್ಚರಿಕೆ ಕುರಿತು ನದಿ ತೀರದಲ್ಲಿರುವ ಬಬಲೇಶ್ವರ, ಕೊಲ್ಹಾರ, ನಿಡಗುಂದಿ, ಮುದ್ದೇಬಿಹಾಳ ತಹಶೀಲ್ದಾರ್‌ರಿಗೆ ಸೂಚಿಸಲಾಗಿದೆ. ಪ್ರವಾಹ ಭೀತಿ ಇಲ್ಲದಿದ್ದರೂ ಮುನ್ನೆಚ್ಚರಿಕೆ ಕ್ರಮವಾಗಿ ನದಿ ತೀರದ ಗ್ರಾಮಗಳಲ್ಲಿ ಡಂಗುರ ಸಾರುವ ಮೂಲಕ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡುವ ಕೆಲಸ ನಡೆಸಿದ್ದೇವೆ. ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಿಸಲು ಸಂತ್ರಸ್ತರಿಗೆ ತಾತ್ಕಾಲಿಕ ಪುನರ್ವಸತಿ ಕಲ್ಪಿಸಲು ಎತ್ತರದ ಪ್ರದೇಶಗಳಲ್ಲಿ ಕೇಂದ್ರಗಳನ್ನು ತೆರೆಯಲು ಸರ್ಕಾರಿ ಕಟ್ಟಡಗಳನ್ನು ಗುರುತಿಸಿ, ಮೂಲಸೌಲಭ್ಯಗಳೊಂದಿಗೆ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದ್ದೇವೆ ಎಂದರು. ಒಂದೊಮ್ಮೆ ನದಿ ಪ್ರವಾಹದ ನೀರು ಜನವಸತಿ ಪ್ರದೇಶಕ್ಕೆ ನುಗ್ಗಿದಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲು ಎಲ್ಲೆಡೆ ಬೋಟ್‌ಗಳನ್ನು ಸುಸಜ್ಜಿತ ಸ್ಥಿತಿಯಲ್ಲಿ ಇರಿಸಿಕೊಳ್ಳಲು ಜಿಲ್ಲೆಯ ಎಲ್ಲ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.
ಕೋವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ನಿರ್ಬಂಧ ವಿಧಿಸಲಾಗಿದೆ. ಸರ್ಕಾರದ ನಿರ್ದೇಶನದಂತೆ ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿದೆ. ಆದರೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ. ಜಿಲ್ಲಾಡಳಿತ, ಮಹಾನಗರ ಪಾಲಿಕೆಯಿಂದ ಗಣೇಶ ಮೂರ್ತಿಗಳ ವಿಸರ್ಜನೆಗೆ ವ್ಯವಸ್ಥೆ ಮಾಡಲಾಗುತ್ತದೆ. ವಿಸರ್ಜನೆಗೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆಯಿಂದ ಹೊಂಡಗಳ ನಿರ್ಮಾಣದ ವ್ಯವಸ್ಥೆ ಮಾಡಿಕೊಡುತ್ತೇವೆ. –ಪಿ.ಸುನಿಲಕುಮಾರ, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.