ಜಿಲ್ಲೆಯಲ್ಲಿ ತಂಬಾಕು ಉತ್ಪನ್ನ ಮಾರಾಟ-ಬಳಕೆ ನಿಷೇಧ
Team Udayavani, May 21, 2020, 5:26 AM IST
ಸಾಂದರ್ಭಿಕ ಚಿತ್ರ
ವಿಜಯಪುರ: ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ತಂಬಾಕು ಉತ್ಪನ್ನ ಮಾರಾಟ ಹಾಗೂ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಸರ್ಕಾರದ ಆದೇಶದನ್ವಯ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್ ಮಸಾಲಾ, ಜರ್ದಾ ಸೇರಿದಂತೆ ಎಲ್ಲ ರೀತಿಯ ತಂಬಾಕು ಉತ್ಪನ್ನ ಮಾರಾಟ ಹಾಗೂ ತಂಬಾಕು ಉತ್ಪನ್ನ ಸೇವಿಸಿ ಉಗುಳುವುದನ್ನು ನಿಷೇಧಿಸಲಾಗಿದೆ.
ತಂಬಾಕು ಸೇವನೆಯಿಂದ ಕ್ಷಯರೋಗ, ನಿಮ್ಯೋನಿಯಾ, ಕೋವಿಡ್-19 ನಂಥ ರೋಗಗಳ ಸೋಂಕು ಒಬ್ಬರಿಂದ ಇನ್ನೊಬ್ಬರಿಗೆ ಹರಡಲು ಕಾರಣವಾಗುತ್ತವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ತಂಬಾಕು ಉತ್ಪನ್ನ ಮಾರಾಟ ಹಾಗೂ ಸಾರ್ವಜನಿಕರು ಬಳಸುವುದನ್ನು ನಿಷೇಧಿಸಿ ಆದೇಶಿಸಲಾಗಿದೆ.
ಅದರಂತೆ ಬೀಡಿ, ಸಿಗರೇಟ್ ಸೇದುವುದರಿಂದಲೂ ಕೈಯಿಂದ ಬಾಯಿಗೆ ವೈರಸ್‌ಗಳು ಮಾನವನ ದೇಹ ಸೇರುತ್ತವೆ. ಇದರಿಂದ ದೇಹದ ಇತರೆ ಭಾಗಗಳಿಗೂ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆ ಉಂಟು ಮಾಡುತ್ತವೆ. ಹೀಗಾಗಿ ಜಿಲ್ಲೆಯಾದ್ಯಂತ ತಂಬಾಕು, ಪಾನ್ ಮಸಾಲಾ, ಜರ್ದಾ, ಖೈನಿ ಉತ್ಪನ್ನ ಮಾರಾಟ ನಿಷೇ ಧಿಸಲಾಗಿದೆ. ಆದೇಶ ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.