ಕೆರೆಗೆ ತೋಂಟದಾರ್ಯ ಸಿದ್ದಲಿಂಗ ಶ್ರೀಗಳ ಹೆಸರಿಡಿ
Team Udayavani, Jul 11, 2021, 6:54 PM IST
ಸಿಂದಗಿ: ಪಟ್ಟಣದ ಜನತೆಗೆ ಕುಡಿಯುವ ನೀರು ಪೂರೈಸುವ ಬೃಹತ್ ಕೆರೆಗೆ ಡಾ| ತೋಂಟದಾರ್ಯ ಸಿದ್ದಲಿಂಗ ಮಹಾಸ್ವಾಮಿಗಳ ಹೆಸರು ನಾಮಕರಣ ಮಾಡಬೇಕು ಎಂದು ಬಿಜೆಪಿ ಸಿಂದಗಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ ಒತ್ತಾಯಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜು. 12ರಂದು ನಡೆಯುವ ಪುರಸಭೆಯ ಎರಡನೇ ಸಾಮಾನ್ಯ ಸಭೆಯಲ್ಲಿ ಸಿಂದಗಿ ಪಟ್ಟಣದ ಗದಗ-ಡಂಬಳದ ಡಾ| ತೋಂಟದಾರ್ಯ ಸಿದ್ದಲಿಂಗ ಮಹಾಸ್ವಾಮಿಗಳ ಹೆಸರು ನಾಮಕರಣ ಮಾಡಬೇಕು. ಯಾವ ರಾಜಕಾರಣಿಗಳ ಹೆಸರು ಇಡಬಾರದು ಎಂದು ಹೇಳಿದರು. ಕರ್ನಾಟಕ ನಿಂಬೆ ಬೆಳೆಗಾರರ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ ಮಾತನಾಡಿ, ಪುರಸಭೆ ಆಡಳಿತ ಪಟ್ಟಣದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು.
ಪಟ್ಟಣದಲ್ಲಿ ನಡೆಯುತ್ತಿರುವ ಒಳ ಚರಂಡಿ ಕಾಮಗಾರಿ ಕಳಪೆಯಿಂದ ಕೂಡಿದ್ದು ಕಾಮಗಾರಿ ಬಗ್ಗೆ ಪರಿಶೀಲನೆ ಮಾಡಬೇಕು. ಗುಣಮಟ್ಟದ ಕಾಮಗಾರಿ ಮಾಡಲು ಗುತ್ತಿಗೆದಾರರಿಗೆ ಸೂಚಿಸಬೇಕು. ಒಳಚರಂಡಿ ಕಾಮಗಾರಿ ಮಾಡುವ ಸಂದರ್ಭದಲ್ಲಿ ಸುಸಜ್ಜಿತ ರಸ್ತೆಗಳನ್ನು ಅಗೆದು ಹಾಳು ಮಾಡಿದ್ದಾರೆ. ಶೀಘ್ರದಲ್ಲಿ ಅಂತ ರಸ್ತೆಗಳ ದುರಸ್ತಿ ಮಾಡಬೇಕು. ಪಟ್ಟಣದಲ್ಲಿ ಸಾಕಷ್ಟು ಅನ ಧಿಕೃತ ನಳಗಳಿದ್ದು ಅಂಥ ನಳಗಳನ್ನು ಗುರುತಿಸಿ ಸಕ್ರಮಗೊಳಿಸಬೇಕು. ದಿನದ 24 ಗಂಟೆ ನೀರು ಸರಬರಾಜು ಯೋಜನೆ ಅನುಷ್ಠಾನಗೊಳಿಸಬೇಕು. ವ್ಯರ್ಥವಾಗಿ ಹರಿಯುವ ನೀರನ್ನು ತಡೆಗಟ್ಟುವ ಕಾರ್ಯ ಮಾಡಬೇಕು ಎಂದು ಎಂದು ಒತ್ತಾಯಿಸಿದರು.
ಬಿಜೆಪಿ ಸಿಂದಗಿ ಮಂಡಲ ಪ್ರಧಾನ ಕಾರ್ಯದರ್ಶಿ ಗುರು ತಳವಾರ, ಕೆಡಿಪಿ ಸದಸ್ಯ ಶಿವುಕುಮಾರ ಬಿರಾದಾರ, ಪುರಸಭೆ ನಾಮನಿರ್ದೇಶಿತ ಸದಸ್ಯ ರಾಖೇಶ ಕಂಠಿಗೊಂಡ ಮಾತನಾಡಿದರು. ಬಿಜೆಪಿ ಹಿರಿಯ ಮುಖಂಡ ಎಂ.ಎಸ್. ಮಠ, ಕೆಡಿಪಿ ಸದಸ್ಯೆ ಅನಸೂಬಾಯಿ ಪರಗೊಂಡ, ಪುರಸಭೆ ನಾಮನಿರ್ದೇಶಿತ ಸದಸ್ಯ ಮಲ್ಲು ಪೂಜಾರಿ, ಮಹಿಳಾ ಮೋರ್ಚಾ ತಾಲೂಕಾಧ್ಯಕ್ಷೆ ಸುನಂದಾ ಯಂಪುರೆ, ಸುದರ್ಶನ ಜಿಂಗಾಣಿ, ನಿಂಗರಾಜ ಬಗಲಿ, ಯಲ್ಲು ಇಂಗಳಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.