ರೈತರ ಚಿತ್ತ ಕೃಷಿ ಚಟುವಟಿಕೆಯತ್ತ
Team Udayavani, Jul 5, 2021, 9:35 PM IST
ಸಿಂದಗಿ: ಮಳೆ ಕೊರತೆಯಿಂದ ಜಮೀನು ಹದಗೊಳ್ಳದೆ, ಬಿತ್ತನೆ ಆಗದಿರುವುದರಿಂದ ಚಿಂತೆಯಲ್ಲಿ ತೊಡಗಿದ್ದ ಅನ್ನದಾತನಿಗೆ ಕಳೆದ ವಾರ ವರುಣ ಕೃಪೆ ತೋರಿದ್ದು ತಾಲೂಕಾದ್ಯಂತ 2.7 ಸೆ.ಮೀ. ಮಳೆ ಪ್ರಮಾಣ ದಾಖಲಾಗಿದೆ. ಜೂನ್ ಆರಂಭದಲ್ಲಿ ಸುರಿದಿದ್ದ ಮಳೆ ಎರಡು ವಾರಗಳ ಬಿಡುವು ನೀಡಿತ್ತು. ಇದರಿಂದ ಬಿತ್ತನೆಗೆ ಹಿನ್ನಡೆಯಾಗಿತ್ತು.
ಕಳೆದ ವಾರ ಮಳೆ ಸುರಿದು ಕೃಷಿ ಚಟುವಟಿಕೆಗಳಿಗೆ ಅನಕೂಲಕರವಾಗಿದೆ. ಈಗಾಗಲೇ ಸಜ್ಜುಗೊಳಿಸಿರುವ ಜಮೀನುಗಳಲ್ಲಿ ತೊಗರಿ, ಸೂರ್ಯಕಾಂತಿ, ಮೆಕ್ಕೆಜೋಳ, ಸಜ್ಜೆ ಬಿತ್ತನೆ ಕಾರ್ಯ ಚುರುಕು ಪಡೆದುಕೊಂಡಿದೆ. ಸಿಂದಗಿ, ಆಲಮೇಲ ಮತ್ತು ದೇವರಹಿಪ್ಪರಗಿ ರೈತ ಸಂಪರ್ಕ ಕೇಂದ್ರಗಳಿಂದ ರೈತರು ರಿಯಾಯ್ತಿ ದರದಲ್ಲಿ ಬಿತ್ತನೆ ಬೀಜಗಳನ್ನು ಖರೀದಿಸಿ ಬಿತ್ತನೆ ಕಾರ್ಯದಲ್ಲಿ ತೋಡಗಿದ್ದಾರೆ. ಸಿಂದಗಿ, ಆಲಮೇಲ ಮತ್ತು ದೇವರಹಿಪ್ಪರಗಿ ವಲಯಗಳಲ್ಲಿ ಕೃಷಿ ಅ ಧಿಕಾರಿಗಳು ಜಮೀನುಗಳಿಗೆ ಹೋಗಿ ರೈತರಿಗೆ ಸಮಗ್ರ ಕೃಷಿ ಪದ್ಧತಿ, ಸಾವಯವ ಕೃಷಿ ಪದ್ಧತಿ, ಹನಿ ನೀರಾವರಿ ಪದ್ದತಿ ಸೇರಿದಂತೆ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ ಮಾಡುವ ಮೂಲಕ ಆಹಾರ ಧಾನ್ಯಗಳನ್ನು ಬೆಳೆಯಲು ಸಲಹೆ ಸೂಚನೆಗಳನ್ನು ನಿಡುತ್ತಿದ್ದಾರೆ.
ಕೃಷಿ ಉತ್ಪಾದನೆ, ರೈತರ ಆರ್ಥಿಕ ಪರಿಸ್ಥಿತಿ ಹಾಗೂ ಜೀವನಮಟ್ಟ ಸುಧಾರಿಸಲು ಸಮಗ್ರ ಕೃಷಿ ಪದ್ಧತಿಗಳು ತುಂಬಾ ಸಹಕಾರಿಯಾಗಿದೆ. ಅನಿಶ್ಚಿತ ಮಳೆ, ಹವಾಮಾನ ವೈಪರಿತ್ಯಗಳಿಂದ ಕೃಷಿ ಉತ್ಪಾದನೆಯ ಸುಸ್ಥಿರತೆಯನ್ನು ಕಳೆದುಕೊಳ್ಳುತ್ತಿದ್ದು, ಕೇವಲ ಬೆಳೆಗಳಿಂದ ಬರುತ್ತಿರುವ ಉತ್ಪಾದನೆಯು ಹಾಗೂ ಆದಾಯ ಕುಂಠಿತಗೊಳ್ಳುತ್ತಿದ್ದು, ಕಾರಣ ಬೆಳೆಗಳ ಜೊತೆಗೆ ಕೃಷಿ ಅವಲಂಬಿತ ಉಪ ಕಸುಬುಗಳ ಸೂಕ್ತ ಸಂಯೋಜನೆಯಿಂದ ಲಭ್ಯವಿರುವ ಸಂಪನ್ಮೂಲಗಳನ್ನು ಸಮರ್ಥ ರೀತಿಯಲ್ಲಿ ಬಳಸಿಕೊಂಡು ಸುಸ್ಥಿರ ಉತ್ಪಾದನೆ ಪಡೆದು ಆದಾಯವನ್ನು ಉತ್ತಮಪಡಿಸುವುದರ ಜೊತೆಗೆ ವರ್ಷ ಪೂರ್ತಿ ರೈತರ ಕುಟುಂಬಕ್ಕೆ ಉದ್ಯೋಗ ಸƒಷ್ಟಿಸಿ ಸ್ವಾವಲಂಬಿ ಜೀವನೋಪಾಯ ಪಡೆಯುವುದೇ ಸಮಗ್ರ ಕೃಷಿ ಪದ್ಧತಿ ತತ್ವವಾಗಿದೆ ಎಂದು ಕೃಷಿ ಅ ಧಿಕಾರಿಗಳು ರೈತರಿಗೆ ಮಾಹಿತಿ ನೀಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.