ವರ್ಗಾವಣೆ ಬರೆ: ತಾಪಂ ಗೇಟ್‌ಗೆ ಬೀಗ ಜಡಿದು ಪ್ರತಿಭಟನೆ
Team Udayavani, Aug 19, 2017, 3:44 PM IST
ಮುದ್ದೇಬಿಹಾಳ: ತಾಲೂತ ಪಂಚಾಯತ್ ಕಾರ್ಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ದಲಿತ ನೌಕರರಿಗೆ ಕೆಲ ಜನ ಪ್ರತಿನಿಧಿಗಳು ವರ್ಗಾವಣೆ ಬರೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಶುಕ್ರವಾರ ಮಾದಿಗ ದಂಡೋರ ಯುವ ಸೇನೆ ಪದಾಧಿಕಾರಿಗಳು ದಿಢೀರನೆ ತಾಪಂ ಕಚೇರಿ ಮುಖ್ಯ ಗೇಟ್‌ಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ತಾಪಂನಲ್ಲಿ ಕಾರ್ಯ ನಿರ್ವಹಿಸುತ್ತಿರುವ ದಲಿತ ನೌಕರ ಪರಶುರಾಮ ಗುಡದಿನಿ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿರುವ ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಅವರು ದಲಿತ ನೌಕರನನ್ನು ವರ್ಗಾವಣೆ ಮಾಡಿಸುತ್ತಿದ್ದಾರೆ. ತಾಪಂ ಕಚೇರಿ
ನೋಡಲ್ ಅಧಿಕಾರಿ ಮೇಲೆ ಜಿಪಂ ಉಪಾಧ್ಯಕ್ಷರು ಲಂಚ ಪಡೆದ ಆರೋಪ ಮಾಡಿದ್ದಾರೆ. ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಎ.ಕೆ. ಚಲವಾದಿ ಎಂಬ ದಲಿತ ಮಹಿಳೆಯ ಮೇಲೂ ಇದೇ ರೀತಿ ಆಪಾದನೆ ಮಾಡಿ ವರ್ಗಾವಣೆ ಮಾಡಲಾಯಿತು. ಇಂದು ಪರಶುರಾಮ ಅವರ ಮೇಲೆ ಆರೋಪ ಮಾಡಲಾಗುತ್ತಿದೆ. ತಾಪಂನಲ್ಲಿ ದಲಿತ ನೌಕರರ ಮೇಲೆ ಆರೋಪ ಮಾಡಿ ವರ್ಗಾವಣೆ ಮಾಡಲಾಗುತ್ತಿದೆ ಎಂದು ಪ್ರತಿಭಟನಾ ನಿರತರು ದೂರಿದ್ದಾರೆ. ಕಚೇರಿಗೆ ಬೀಗ ಜಡಿದು ಪ್ರತಿಭಟನೆಗೆ ಮುಂದಾದವರ ಮನವೊಲಿಕೆಗೆ ಪೊಲೀಸ್ ಅಧಿಕಾರಿಗಳು ಮುಂದಾದರು. ಆದರೆ ಪೊಲೀಸರ ಮಾತಿಗೆ ಬಗ್ಗದ ಪ್ರತಿಭಟನಾಕಾರರು ದಲಿತ ನೌಕರರ ವಿರುದ್ಧ ಆರೋಪ ಮಾಡಿರುವ ಜನ ಪ್ರತಿನಿಧಿ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸಿದರೆ ಮಾತ್ರ ಪ್ರತಿಭಟನೆ ಹಿಂಪಡೆಯುವುದಾಗಿ ಪಟ್ಟು ಹಿಡಿದರು. ಪ್ರತಿಭಟನಾಕಾರರು ಶುಕ್ರವಾರ ಸಂಜೆ 4:30ಕ್ಕೆ ಏಕಾಏಕಿ ಕಚೇರಿಯ ಗೇಟ್‌ಗೆ ಬೀಗ ಜಡಿದು ಪ್ರತಿಭಟನೆಗೆ ಮುಂದಾದ ಕಾರಣ ದಿನನಿತ್ಯ ತಾಪಂ ಸಿಬ್ಬಂದಿಗಳು ಸಂಜೆ ಮನೆಗೆ ತೆರಳುವ ನೌಕರರು ಪರದಾಡಿದ್ದು ಕಂಡು ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.