ತ್ರಿಕೋಟಾ ಭಾಗಕ್ಕೆ ಹರಿದು ಬಂದಳು ಕೃಷ್ಣೆ


Team Udayavani, Mar 4, 2018, 3:28 PM IST

vij-1.jpg

ವಿಜಯಪುರ: ಜಿಲ್ಲೆಯ ಅತಿ ಎತ್ತರ ಪ್ರದೇಶವಾದ ತಿಕೋಟಾ ಹೋಬಳಿಗೆ ನೀರಾವರಿ ಸೌಕರ್ಯ ಕಲ್ಪಿಸುವ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆ ಪ್ರಾಯೋಗಿಕ ಚಾಲನೆ ಯಶಸ್ವಿಯಾಗಿದೆ. ಜಲ ಸಂಪನ್ಮೂಲ ಸಚಿವ ಡಾ| ಎಂ.ಬಿ.ಪಾಟೀಲರ ಕನಸಿನ ಕೂಸಾದ ಸದರಿ ಯೋಜನೆಯ ತಿಕೋಟಾ ನೀರು ವಿತರಣಾ ನಾಲೆಯ ಚೆಂಬರ್‌ಗೆ ನೀರು ಹರಿದು ಬಂದಿದ್ದು ರೈತರಲ್ಲಿ ಸಂತಸ ಮನೆ ಮಾಡಿದೆ.

ಕಳೆದ ಒಂದು ವಾರದಿಂದ ಕವಟಗಿ ಜಾಕ್‌ವೆಲ್‌ನಲ್ಲಿ ಪ್ರದೇಶದಲ್ಲೇ ಬೀಡು ಬಿಟ್ಟಿರುವ ಜಲ ಸಂಪನ್ಮೂಲ ಇಲಾಖೆ ಉನ್ನತ ಅಧಿಕಾರಿಗಳ ತಂಡದ ಪರಿಶ್ರಮದಿಂದಾಗಿ ಪರೀಕ್ಷಾರ್ಥ ಪ್ರಯೋಗದ ನೀರು ನಾಲೆಯಲ್ಲಿ ಹರಿಯಲು ಆರಂಭಿಸಿದೆ. ಶುಕ್ರವಾರ ಸಂಜೆ ಕವಟಗಿಯಿಂದ 22 ಕಿ.ಮೀ. ದೂರಕ್ಕೆ ಹರಿದು ಬಂದಿದ್ದ ಕೃಷ್ಣೆ 600 ಅಡಿ ಎತ್ತರದ ಗೋಠೆ ಡೆಲಿವರಿ ಚೆಂಬರ್‌-1 ತಲುಪಿದ್ದಾಳೆ. ನಂತರ ರಾತ್ರಿ ಏಕ ಕಾಲಕ್ಕೆ ಹೊನವಾಡ ಕೆರೆಗೆ, ತಿಕೋಟಾ ಡೆಲಿವರಿ ಚೆಂಬರ್‌-2ಗೆ ವಿದ್ಯುತ್‌ ಸಹಾಯವಿಲ್ಲದೇ ಗುರತ್ವಾರ್ಕಷಣ ಮೂಲಕ ನೀರು ಹರಿಯಲಾರಂಭಿಸಿದೆ. ಹೀಗಾಗಿ ರವಿವಾರ ಬೆಳಗ್ಗೆ 7ಕ್ಕೆ ತಿಕೋಟಾದ ಮುಖ್ಯ ಕಾಲುವೆಯಲ್ಲಿ ನೀರು ಹರಿಯಲು ಆರಂಭಿಸಿದೆ.

ದಶಕದ ಹಿಂದೆ ತಿಕೋಟಾದ ಬಿಎಲ್‌ಡಿಇ ಕಾಲೇಜಿನ ವಸತಿ ನಿಲಯದ ಉದ್ಘಾಟನೆಗೆ ಬಂದಿದ್ದ ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳು ಈ ಭಾಗದ ಭೂಮಿ ಫಲವತ್ತತೆಯಿಂದ ಕೂಡಿದ್ದು ನೀರಿಲ್ಲದೇ ಬರಡಾಗಿದೆ. ಈ ನೆಲಕ್ಕೆ ಒಂದು ಬೊಗಸೆ ನೀರು ಕೊಟ್ಟರೆ, ಈ ಭಾಗ ಅಮೆರಿಕಾದ ಕ್ಯಾಲಿಫೋರ್ನಿಯಾವನ್ನು ಮೀರಿಸುವ ಸಮೃದ್ಧತೆ ನೀಡಲಿದೆ. ಉತ್ಕೃಷ್ಟವಾದ ದ್ರಾಕ್ಷಿ, ದಾಳಿಂಬೆ ಬೆಳೆ ವಿಶ್ವಕ್ಕೆ ರಫ್ತಾಗುವ ಸಾಮರ್ಥ್ಯ ಪಡೆಯಲಿದೆ ಎಂದು ಆಶಯ ವ್ಯಕ್ತಪಡಿಸಿದ್ದರು. 

ಸಿದ್ದೇಶ್ವರ ಶ್ರೀಗಳ ಆಶಯ ಈಡೇರಿಸಲು ಮುಂದಾದ ಬಿಎಲ್‌ಡಿಇ ಸಂಸ್ಥೆಯ ವಚನ ಪಿತಾಮಹ ಡಾ| ಫ.ಗು. ಹಳಕಟ್ಟಿ ಎಂಜನಿಯರಿಂಗ್‌ ಕಾಲೇಜಿನಿಂದ ತುಬಚಿ-ಬಬಲೇಶ್ವರ ಯೋಜನೆ ರೂಪಿಸಿದ್ದ ಎಂ.ಬಿ. ಪಾಟೀಲ ಅವರು, ಜಲ ಸಂಪನ್ಮೂಲ ಸಚಿವರಾಗುತ್ತಿದ್ದಂತೆ ಕೃಷ್ಣಾ ನ್ಯಾಯಾಧಿಕರಣದಲ್ಲಿ ರಾಜ್ಯಕ್ಕೆ ಹಂಚಿಕೆಯಾದ ನೀರಿನಲ್ಲಿ 6.4 ಟಿಎಂಸಿ ನೀರೊದಗಿಸಿ, 3500 ಕೋಟಿ ರೂ. ಅನುದಾನದ ಬೃಹತ್‌ ಯೋಜನೆ ರೂಪಿಸಿದರು.

ಇದರಿಂದ ವಿಜಯಪುರ ಜಿಲ್ಲೆಯ ತಿಕೋಟಾ ಹೋಬಳಿ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಹೋಬಳಿ ಹಾಗೂ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ 5 ಹಳ್ಳಿಗಳ 1.30 ಲಕ್ಷ ಎಕರೆ ಪ್ರದೇಶಕ್ಕೆ ನೀರು ಕಾಣುವ ಭಾಗ್ಯ ಕಂಡಿದೆ. ಯೋಜನೆ ಆರಂಭಗೊಂಡ ಕೇವಲ 2 ವರ್ಷದಲ್ಲಿ ಯೋಜನೆಯ ಪೂರ್ಣ ಕಾಮಗಾಗಿ ಮುಕ್ತಾಯ ಕಂಡು ನಾಲೆಗಳಿಗೆ ನೀರು ಹರಿದಿರುವುದು ನಿಜಕ್ಕೂ ವಿಜಯಪುರ ಜಿಲ್ಲೆಯಲ್ಲಿ ದಾಖಲೆ ಎನಿಸಿದೆ.

ತಿಕೋಟಾ ಭಾಗದಲ್ಲಿ ನಾಲೆಗೆ ನೀರು ಹರಿದು ಬರುತ್ತಲೇ ಹೋಳಿ ಹಬ್ಬದ ಬಣ್ಣದಾಟದಲ್ಲಿ ತೊಡಗಿದ್ದ ರೈತರು, ರೈತರ ಮಕ್ಕಳು ಹರಿಯುವ ಕೃಷ್ಣೆಯಲ್ಲಿ ಮಿಂದೆದ್ದರು. ಬಳಿಕ ಗೋಠೆ, ಹೊನವಾಡ, ತಿಕೋಟಾ ಭಾಗದ ರೈತರು ನಾಲೆ ನೀರಿನಲ್ಲೇ ನಿಂತು ಬಣ್ಣದಾಟವಾಡಿ ಸಂಭ್ರಮಿಸಿದರು.

ಹಲವು ರೈತರು ಫೇಸ್‌ಬುಕ್‌ ಮೂಲಕ ನೇರ ಪ್ರಸಾರ ಬಿತ್ತರಿಸಿ ಸಂಭ್ರಮ ಹಂಚಿಕೊಂಡರು. ಸ್ಥಳದಲ್ಲಿದ್ದ ಜಲ ಸಂಪನ್ಮೂಲ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರೆ, ಕೆಲವು ರೈತರು ಬೆಂಗಳೂರಿನಲ್ಲಿರುವ ಸಚಿವ ಡಾ| ಎಂ.ಬಿ. ಪಾಟೀಲ ಅವರಿಗೆ ಸ್ಥಳದಿಂದಲೇ ವಿಡಿಯೋ ಕಾಲ್‌ ಮೂಲಕ ಅಭಿನಂದನೆ ಸಲ್ಲಿಸಿದರು.

ಟಾಪ್ ನ್ಯೂಸ್

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

rape

Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.