ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸಂಕಷ್ಟ
Team Udayavani, Sep 2, 2020, 5:54 PM IST
ಸಿಂದಗಿ: ಕೋವಿಡ್-19 ಸಮಸ್ಯೆಯಿಂದಾಗಿ ರಾಜ್ಯದೆಲ್ಲೆಡೆ ಮಾರ್ಚ್ ತಿಂಗಳಾರ್ಧದಲ್ಲೇ ಶಾಲಾ ಮತ್ತು ಕಾಲೇಜುಗಳು ಮುಚ್ಚಿದ್ದವು. ಪ್ರಸ್ತುತ ಸಂದರ್ಭದಲ್ಲಿ 2020-21ನೇ ಶೈಕ್ಷಣಿಕ ವರ್ಷ ಪ್ರಾರಂಭದ ಬಗ್ಗೆ ಸರ್ಕಾರ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ. ಇದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ಸಂಕಷ್ಟದಲ್ಲಿ ಸಿಲುಕಿಕೊಂಡಿವೆ.
ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆ ಪ್ರಾರಂಭವಾಗದೇ ಇರುವುದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ ಹೊರೆಯಾಗಿದೆ. ಸಂಸ್ಥೆಯಲ್ಲಿ ಕೆಲಸ ಮಾಡುವ ಬೋಧಕ ಬೋಧಕೇತರ ಸಿಬ್ಬಂದಿಗಳಿಗೆ ವೇತನ ನೀಡುವುದು, ಶಾಲಾ ವಾಹನಗಳಿಗಾಗಿ ಮಾಡಿದ ಬ್ಯಾಂಕ್ ಸಾಲದ ಮಾಸಿಕ ಕಂತು ತುಂಬುವುದು ಕಷ್ಟಕರವಾಗಿದೆ.
ಇಂಥ ಸಂದರ್ಭದಲ್ಲಿ ಸರಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಸಂಸ್ಥೆಗಳಲ್ಲಿ ಕೆಲಸ ಮಾಡುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಆರ್ಥಿಕ ನೆರವು ನೀಡಬೇಕು ಮತ್ತು ಅವರಿಗೆ ಸರಕಾರ ಜೀವ ವಿಮೆ ಸೌಲಭ್ಯ ಕಲ್ಪಸಿಕೊಡಬೇಕು ಎನ್ನುವುದು ಸಿಂದಗಿ ತಾಲೂಕು ಖಾಸಗಿ ಶಾಲೆಗಳ ಒಕ್ಕೂಟದ ಒತ್ತಾಯವಾಗಿದೆ.
ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಿಲ್ಲ. ಒಂದು ವೇಳೆ ಶಾಲೆಗಳನ್ನು ಪ್ರಾರಂಭಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿದಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು, ಶಾಲಾ ಅವಧಿಯನ್ನು ಬದಲಿಸಲು ಕೂಡ ಕಷ್ಟಕರವಾಗುವ ಸಾಧ್ಯತೆ ಹೆಚ್ಚು. ಶಿಕ್ಷಣ ಇಲಾಖೆ ಮಕ್ಕಳ ಸುರಕ್ಷತೆ ಬಗೆಗೆ ಹಲವು ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಿದೆ.
ಶೈಕ್ಷಣಿಕ ವರ್ಷದಲ್ಲಿ ಕಳೆದುಕೊಳ್ಳುವ ಅವ ಧಿಯ ಆಧಾರದ ಮೇಲೆ ಮಕ್ಕಳ ಕಲಿಕೆಗೆ ಹೊರೆಯಾಗದ ರೀತಿಯನ್ನು ಅನವಶ್ಯಕ,ಪುನರಾವರ್ತಿತ ಪಠ್ಯವನ್ನು ಕೈಬಿಡಬೇಕು. ಅತ್ಯವಶ್ಯಕ ಪಠ್ಯಗಳನ್ನು ಉಳಿಸಿಕೊಳ್ಳಲು ಕ್ರಿಯಾಯೋಜನೆ ಸಿದ್ಧಪಡಿಸಬೇಕು. – ಹ.ಮ. ಪೂಜಾರ, ನಿವೃತ್ತ ಶಿಕ್ಷಕ, ಸಿಂದಗಿ
ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಬಗೆಗೆ ಹಲವಾರು ಕ್ರಮ ಕೈಗೊಳ್ಳುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲಿದೆ. ಜತೆಗೆ ಪೋಷಕರ ಹಾಗೂ ಸಮುದಾಯದ ಪಾತ್ರ ಹಿರಿದಾಗಿದೆ. – ಪ್ರಕಾಶ ಚೌಧರಿ, ಅಧ್ಯಕ್ಷರು, ವೇಂಕಟೇಶ್ವರ ಶಿಕ್ಷಣ ಸಂಸ್ಥೆ, ಸಿಂದಗಿ
–ರಮೇಶ ಪೂಜಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Squash event: ಭಾರತದ ಅನಾಹತ್,ಮಲೇಷ್ಯಾದ ಚಂದರನ್ ಚಾಂಪಿಯನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.