ಖಾಸಗಿ ವೈದ್ಯರ ಮುಷ್ಕರದಿಂದ ತೊಂದರೆ

•ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚಿದ ರೋಗಿಗಳ ಸಂಖ್ಯೆ•ಮುಷ್ಕರ ತಿಳಿಯದೇ ಬಂದು ಕಂಗಾಲಾದ ರೋಗಿಗಳು

Team Udayavani, Jun 18, 2019, 9:21 AM IST

vp-tdy-1..

ವಿಜಯಪುರ: ಖಾಸಗಿ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿರುವುದು

ವಿಜಯಪುರ: ಪಶ್ಚಿಮ ಬಂಗಾಳ ರಾಜ್ಯದಲ್ಲಿ ಖಾಸಗಿ ವೈದ್ಯರ ಮುಷ್ಕರ ಬೆಂಬಲಿಸಿ ಸೋಮವಾರ ದೇಶಾದ್ಯಂತ ಖಾಸಗಿ ವೈದ್ಯರು ನಡೆಸಿದ ಮುಷ್ಕರದ ಬಿಸಿ ಆರೋಗ್ಯ ಸಚಿವರ ತವರು ವಿಜಯಪುರ ಜಿಲ್ಲೆಗೂ ತಟ್ಟಿದೆ. ಖಾಸಗಿ ವೈದ್ಯರ ಮುಷ್ಕರ ತಿಳಿಯದೇ ಚಿಕಿತ್ಸೆಗೆ ನಗರ ಪ್ರದೇಶಗಳಿಗೆ ಆಗಮಿಸಿದ್ದ ರೋಗಿಗಳು ಪರದಾಡುವಂತೆ ಮಾಡಿತು. ಮತ್ತೂಂದೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಮಾನ್ಯಕ್ಕಿಂತ ರೋಗಿಗಳ ಸಂಖ್ಯೆ ಹೆಚ್ಚಾದ ಕಾರಣ ಎಲ್ಲ ವೈದ್ಯರನ್ನು ರಜೆ ರಹಿವಾಗಿ ಸಂಪೂರ್ಣ ಸೇವೆ ಪಡೆಯಲು ಮುಂದಾಗಿದ್ದರೂ ಚಿಕಿತ್ಸೆ ಪಡೆಯಲು ರೋಗಿಗಳ ಪರದಾಟ ತಪ್ಪಲಿಲ್ಲ. ಆದರೂ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ.

ವಿಜಯಪುರ ಜಿಲ್ಲೆಯಲ್ಲಿ ಅದರಲ್ಲೂ ಜಿಲ್ಲಾ ಕೇಂದ್ರದಲ್ಲಿ ಖಾಸಗಿ ಆಸ್ಪತ್ರೆಗಳು ಸಂಪೂರ್ಣ ಬಂದ್‌ ಆಗಿದ್ದವು. ಮುಷ್ಕರದ ಕಾರಣ ಜೂ. 17ರಂದು ಬೆಳಗ್ಗೆ 6ರಿಂದ ಜೂ. 18ರಂದು ಬೆಳಗ್ಗೆ 6ರವರೆಗೆ ತಮ್ಮ ಆಸ್ಪತ್ರೆಯಲ್ಲಿ ಸೇವೆಯನ್ನು ಬಂದ್‌ ಮಾಡಿದ್ದಾಗಿ ಫ‌ಲಕ ಅಳವಡಿಸಿ, ಬೀಗ ಹಾಕಿದ್ದು ಸಾಮಾನ್ಯವಾಗಿತ್ತು. ಖಾಸಗಿ ವೈದ್ಯರ ಮುಷ್ಕರ ತಿಳಿಯದೇ ದೂರದ ಊರುಗಳಿಂದ ನೂರಾರು ರೂ. ಖರ್ಚು ಮಾಡಿಕೊಂಡು ಬಂದಿದ್ದ ರೋಗಿಗಳು, ರೋಗಿಗಳ ಸಹಾಯಕರು ಚಿಕಿತ್ಸೆ ದೊರಕದೇ ಪರದಾಡುವಂತೆ ಮಾಡಿತ್ತು.

ಮುಷ್ಕರ ನಡೆಸುವ ಕುರಿತು ಖಾಸಗಿ ವೈದ್ಯರು ಮುಂಚಿತವಾಗಿಯೇ ಸಾರ್ವಜನಿಕವಾಗಿ ಎಲ್ಲಿಯೂ ಘೋಷಣೆ ಮಾಡಿ, ಸಾರ್ವಜನಿಕರಿಗೆ ಮಾಹಿತಿ ನೀಡಿರಲಿಲ್ಲ. ಇದರಿಂದ ಜಿಲ್ಲೆಯ ಮೂಲೆ ಮೂಲೆಗಳಿಂದ ಆಗಮಿಸಿದ್ದ ರೋಗಿಗಳು ಖಾಸಗಿ ಆಸ್ಪತ್ರೆಗಳ ಎದುರು ವೈದ್ಯರು ಬಂದಾರೆಂದು ಕಾಯುತ್ತಿರುವುದು ಕೂಡ ಸಾಮಾನ್ಯವಾಗಿತ್ತು. ಜಿಲ್ಲೆಯಲ್ಲಿರುವ 239 ಖಾಸಗಿ ಆಸ್ಪತ್ರೆಗಳು, 402 ಕ್ಲಿನಿಕ್‌ಗಳು ಸಂಪೂರ್ಣ ಸೇವೆ ಬಂದ್‌ ಮಾಡಿದ್ದವು.

ಮಗುವಿಕೆ ತೀವ್ರ ಅನಾರೋಗ್ಯದ ಕಾರಣ ನಗರದ ಮಕ್ಕಳ ಆಸ್ಪತ್ರೆಗೆ ಚಿಕಿತ್ಸೆಗೆ ಬಸವನಬಾಗೇವಾಡಿ ತಾಲೂಕಿನ ಮುತ್ತಗಿ ಗ್ರಾಮದಿಂದ ಬಂದಿದ್ದ ಅನಾರೋಗ್ಯ ಪೀಡಿತ ಮಗುವಿನ ಪಾಲಕರು ಪರದಾಡುತ್ತಿದ್ದರು. ನಿರಂತರ ಒಬ್ಬರೇ ವೈದ್ಯರಲ್ಲಿ ಚಿಕಿತ್ಸೆ ಕೊಡಿಸಿದ್ದು ಸರ್ಕಾರಿ ವೈದ್ಯರ ಬಳಿ ಚಿಕಿತ್ಸೆ ಕೊಡಿಸಲು ವೈದ್ಯಕೀಯ ಚಿಕಿತ್ಸೆ ಬೇರೆ ಆಗುವ ಭೀತಿ ಇದೆ. ಹೀಗಾಗಿ ಬಾಗಿಲು ಹಾಕಿದ್ದರೂ ವೈದ್ಯರು ಬಂದಾರೆಂದು ಕಾಯುತ್ತಿದ್ದೇನೆ ಎಂದು ಅಳಲು ತೋಡಿಕೊಂಡರು.

ಇನ್ನು ಕಳೆದ ಮೂರು ದಶಕಗಳಿಂದ ತಮ್ಮ ಕುಟುಂಬ ವಿಜಯಪುರ ನಗರದ ಖಾಸಗಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದೆ ಎಂಬ ಕಾರಣಕ್ಕೆ ಬಾಗಲಕೋಟೆ ಜಿಲ್ಲೆಯಿಂದ ಬಂದಿದ್ದವರು ತಮ್ಮ ನೆಚ್ಚಿನ ಆಸ್ಪತ್ರೆ ಬಾಗಿಲು ಹಾಕಿದ್ದರಿಂದ ಕಂಗಾಲಾಗಿದ್ದರು. ಬಾಗಲಕೋಟೆ ಜಿಲ್ಲೆಯ ಬಿಳಗಿ ತಾಲೂಕಿನ ಬಿಸನಾಳ ಗ್ರಾಮದ ರೇಣುಕಾ ಆಮಾತೆ ಎಂಬವರು ರೋಗಪೀಡಿತ ತಮ್ಮ ಮಗುವಿಗೆ ಚಿಕಿತ್ಸೆಗೆ ಪರದಾಡುತ್ತಿದ್ದರು. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಸೇವೆ ಇದ್ದರೂ ಒಬ್ಬರೇ ವೈದ್ಯರಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದೇವೆ. ಹೀಗಾಗಿ ಸರ್ಕಾರಿ ಮಾತ್ರವಲ್ಲ, ಬೇರೆ ಯಾವುದೇ ವೈದ್ಯರ ಬಳಿ ಚಿಕಿತ್ಸೆ ಕೊಡಿಸಲು ಮನಸ್ಸಿಲ್ಲ ಎಂದು ಗೋಳಾಡುತ್ತಿದ್ದರು. ಇನ್ನು ಖಾಸಗಿ ವೈದ್ಯರ ಮುಷ್ಕರ ಘೋಷಣೆ ಆಗುತ್ತಲೇ ಮುಂಜಾಗೃತಾ ಕ್ರಮವಾಗಿ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ರಜೆ ಮೇಲಿದ್ದ ವೈದ್ಯರ ರಜೆಯನ್ನೂ ರದ್ದು ಮಾಡಿ ಎಲ್ಲ ವೈದ್ಯರನ್ನು ಕರ್ತವ್ಯಕ್ಕೆ ಬಳಸಿಕೊಳ್ಳಲು ಮುಂದಾಗಿತ್ತು. ಪರಿಣಾಮ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಸೇವೆಗೆ ಹೆಚ್ಚಿನ ಬೇಡಿಕೆ ಬಂದಿತ್ತು. ಇದರಿಂದಾಗಿ ಸಾಮಾನ್ಯವಾಗಿ ಕಂಡು ಬರುತ್ತಿದ್ದ ಹೊರ ರೋಗಿಗಳ ಸಂಖ್ಯೆಯಲ್ಲಿ ಶೇ. 40ಕ್ಕಿಂತ ಹೆಚ್ಚು ಕಂಡು ಬಂದರೆ, ಒಳ ರೋಗಿಗಳ ಸಂಖ್ಯೆಯಲ್ಲಿ ಶೇ. 25 ಹೆಚ್ಚಳವಾಗಿತ್ತು.

ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಸಾಮಾನ್ಯವಾಗಿ ನಿತ್ಯವೂ 1,100 ಇರುತ್ತಿದ್ದ ಹೊರ ರೋಗಿಗಳ ಸಂಖ್ಯೆ 2,000 ಸಾವಿರ ಗಡಿಗೆ ಬಂದಿದ್ದರೆ, ಒಳ ರೋಗಿಗಳು ನಿತ್ಯವೂ 60-70 ಇರುತ್ತಿದ್ದುದು 85-90ರ ಹಂತಕ್ಕೆ ತಲುಪಿತ್ತು. ಹೀಗಾಗಿ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವ 182 ವೈದ್ಯರ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲಾಗಿತ್ತು. ಇದಲ್ಲದೇ ಜಿಲ್ಲೆಯಲ್ಲಿರುವ ಸರ್ಕಾರಿ ಆರೋಗ್ಯ ಸೇವೆಯ 4 ತಾಲೂಕಾಸ್ಪತ್ರೆಗಳು, 3 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 9 ಸಮುದಾಯ ಆರೋಗ್ಯ ಕೇಂದ್ರಗಳು, 63 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ 6 ಆರೋಗ್ಯ ವಿಸ್ತರಣಾ ಕೇಂದ್ರಗಳಲ್ಲಿ ನಿರಂತರ ವೈದ್ಯಕೀಯ ಸೇವೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಹೀಗಾಗಿ ಜಿಲ್ಲೆಯಲ್ಲಿ ಎಲ್ಲಿಯೂ ಸರ್ಕಾರಿ ವೈದ್ಯರ ಮುಷ್ಕರದ ಮಧ್ಯೆಯೂ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ.

ಟಾಪ್ ನ್ಯೂಸ್

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.