ತ್ವರಿತ ಚಿಕಿತ್ಸೆಯಿಂದ ಕ್ಷಯರೋಗ ನಿಗ್ರಹ
Team Udayavani, Mar 26, 2021, 8:08 PM IST
ವಿಜಯಪುರ: ಶೀಘ್ರ ಪತ್ತೆ, ತ್ವರಿತ ಚಿಕಿತ್ಸೆಯಿಂದ ಕ್ಷಯರೋಗ ನಿಗ್ರಹ ಸಾಧ್ಯ. ಇದರಿಂದ ಸಮಾಜದಲ್ಲಿ ಕ್ಷಯರೋಗದ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುವಿಕೆ ತಡೆಯಲು ಸಾಧ್ಯವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉತ್ತರ ಕರ್ನಾಟಕದ ಅಪರ ನಿರ್ದೇಶಕ ಡಾ| ಅಪ್ಪಾಸಾಬ ನರಹಟ್ಟಿ ಹೇಳಿದರು.
ವಿಶ್ವ ಕ್ಷಯರೋಗ ದಿನದ ಹಿನ್ನೆಲೆಯಲ್ಲಿ ವಿಜಯಪುರದ ಜಿಲ್ಲಾ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸರ್ಕಾರಿ ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಶರಣಪ್ಪ ಕಟ್ಟಿ, ಮಾತನಾಡಿ ಕ್ಷಯ ರೋಗಿಗಳಿಗೆ ಆದ್ಯತೆ ಮೇಲೆ ಚಿಕಿತ್ಸೆ ನೀಡಿ, ಗುಣಪಡಿಸಲು ಜಿಲ್ಲಾ ಆಸ್ಪತ್ರೆಯ ಕ್ಷಯ ವಿಭಾಗವು ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅ ಧಿಕಾರಿ ಡಾ| ರಾಜಕುಮಾರ ಯರಗಲ್ ಮಾತನಾಡಿ, ಕ್ಷಯರೋಗ ಲಕ್ಷಣ ಕಂಡುಬಂದಲ್ಲಿ ಯಾವುದೇ ವ್ಯಕ್ತಿ ನಿರ್ಲಕ್ಷé ಮಾಡದೇ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು. ಕ್ಷಯ ರೋಗದ ಲಕ್ಷಣ ಇರುವವನ್ನು ಅವರ ಕುಟುಂಬ ಸದಸ್ಯರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಬೇಕು. ಕ್ಷಯ ರೋಗ ಇರುವುದು ದೃಢಪಟ್ಟಲ್ಲಿ ರೋಗಕ್ಕೆ ಸೂಕ್ತ ಚಿಕಿತ್ಸೆ ಕೊಡಿಸಿದವರಿಗೆ ಸರ್ಕಾರ 500 ರೂ. ಗೌರವಧನ ಸರ್ಕಾರದಿಂದ ನೀಡಲಾಗುತ್ತಿದೆ. ಜಿಲ್ಲೆಯ ಜನರು ಈ ಕುರಿತು ಸರ್ಕಾರ ಹಾಗೂ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿ ಕಾರಿ ಡಾ| ಈರಣ್ಣ ಧಾರವಾಡಕರ ಮಾತಗನಾಡಿ, ಜಿಲ್ಲೆಯಲ್ಲಿ ಕ್ಷಯರೋಗ ಪತ್ತೆ ಹಚ್ಚುವಲ್ಲಿ ಉನ್ನತ ತಾಂತ್ರಿಕತೆ ಹೊಂದಿರುವ ವ್ಯವಸ್ಥೆ ಇದೆ. ಯಾವುದೇ ಲೋಪ ಇಲ್ಲದಂತೆ ಕ್ಷಯ ರೋಗ ಪತ್ತೆ ಹಚ್ಚುವ ಸೌಲಭ್ಯ ಹೊಂದಿದ್ದೇವೆ. ರೋಗ ಪತ್ತೆಯಾಗುತ್ತಲೇ ರೋಗಿಗೆ ಚಿಕಿತ್ಸೆಗೊಳಪಡಿಸುವ ಕೆಲಸವನ್ನೂ ಮಾಡಲಾಗುತ್ತಿದೆ. ಹೀಗಾಗಿ ಈ ವರ್ಷ “ಟಿಬಿ ಸೋಲಿಸಿ, ದೇಶ ಗೆಲ್ಲಿಸಿ’ ಘೋಷ ವಾಕ್ಯದೊಂದಿಗೆ ಆಚರಿಸುತ್ತಿರುವ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು. ವಿಜಯಪುರ ಸ್ವಯಂ ಸೇವಾ ಸಂಸ್ಥೆಗಳ ಫೆಡರೇಶನ್ ಅಧ್ಯಕ್ಷ ಪೀಟರ್ ಅಲೆಕ್ಸಾಂಡರ್ ಮಾತನಾಡಿ, ಜಿಲ್ಲೆಯಲ್ಲಿ ಕ್ಷಯರೋಗಿಗಳನ್ನು ಗುಣಪಡಿಸುವಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಸಹಕಾರ ಕೋರಿದಲ್ಲಿ ಸದಾ ಸಿದ್ಧವಿರುತ್ತೇವೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಯ ಸ್ಥಾನಿಕ ವೈದ್ಯ ಡಾ| ಲಕ್ಕಣ್ಣವರ, ಡಾ| ಹರೀಶ ಪೂಜಾರಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದ ಜಯತೀರ್ಥ ಅಷ್ಟಪುತ್ರೆ, ಇಮಾಮಸಾಬ ಕಲಬುರ್ಗಿ, ಬಾಬುರಾವ್ ತಳವಾರ, ವಾಸೀಂ ಮೋಮಿನ, ಡಿ.ಆರ್. ಶೇಖ್, ಮಂಜುಳಾ ನಾಯೊRàಡಿ, ಶಿವಾನಂದ ಹಕ್ಕಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಅಧ್ಯಕ್ಷ ಖರ್ಗೆಗೆ ರಾಜಕಾರಣ ಸಾಕು; ಅವರು ಮನೆಯಲ್ಲಿರಲಿ: ಸಂಸದ ಜಿಗಜಿಣಗಿ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್
Vijayapura: ಇಟ್ಟಿಗೆ ಭಟ್ಟಿ ಕಾರ್ಮಿಕರ ಮೇಲೆ ಅಮಾನುಷ ಹಲ್ಲೆ; ಇಬ್ಬರ ಬಂಧನ
Vijayapura: ತಂದೆ ಸಹಿ ನಕಲು ಮಾಡಿದ ಬಿವೈವಿ ಒಪ್ಪಲ್ಲ; ಯತ್ನಾಳ್