ಬಾಲಕಿ ಮೇಲೆ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್
Team Udayavani, Jan 20, 2018, 6:35 AM IST
ವಿಜಯಪುರ: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಹತ್ಯೆ ಪ್ರಕರಣದ ವಿರುದಟಛಿ ಹೋರಾಟ ನಡೆಸುತ್ತಿದ್ದ ಸಂಘಟನೆಯ ನಾಯಕರೊಬ್ಬರ ಜೊತೆ ಬೆಳಗಾವಿ ಉತ್ತರ ವಲಯದ ಐಜಿಪಿ ರಾಮಚಂದ್ರರಾವ್ ಅವರು “ಮೃತ ಬಾಲಕಿಯ ನಡತೆ’ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ಮೊಬೈಲ್ ಸಂಭಾಷಣೆ ಹೊರ ಬಿದ್ದಿದ್ದು, ವೈರಲ್ ಆಗಿದೆ.
ಈ ಕುರಿತು “ಉದಯವಾಣಿ’ ಜೊತೆ ಮಾತನಾಡಿರುವ ಸಂಘಟನೆಯ ನಾಯಕ ಭಾಸ್ಕರಪ್ರಸಾದ್, “ಐಜಿಪಿ ಅವರು ನನ್ನ ಜೊತೆ ಮಾತನಾಡಿರುವ ಸದರಿ ಸಂಭಾಷಣೆಯನ್ನು ನಾನು ಬಿಡುಗಡೆ ಮಾಡಿಲ್ಲ. ಇದು ಮಾಧ್ಯಮಗಳಿಗೆ ಹೇಗೆ ಸೋರಿಕೆ ಆಯಿತು ಎಂಬುದೇ ತಿಳಿಯುತ್ತಿಲ್ಲ. ನನ್ನನ್ನು ಬಂ ಧಿಸಿ ಜೈಲಿಗೆ ಸೇರಿಸುವ ಮುನ್ನ ನಾನು ನನ್ನ ಮೊಬೈಲ್ ಅನ್ನು ಸ್ನೇಹಿತ ಮಂಜು ಎಂಬುವರ ಬಳಿ ಕೊಟ್ಟು ಹೋಗಿದ್ದೆ. ಅವರಿಂದ ನನ್ನ ಮೊಬೈಲ್ ಕಿತ್ತುಕೊಂಡಿದ್ದ ಪೊಲೀಸರು ಈ ಸಂಭಾಷಣೆಯನ್ನು ಕಾಪಿ ಮಾಡಿಕೊಂಡಿರುವ ಸಾಧ್ಯತೆ ಇದೆ’ ಎಂದು ಅನುಮಾನ ವ್ಯಕ್ತಪಡಿಸಿದರು.
ಈ ನಡುವೆ ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು, ಈ ಕುರಿತು ವರದಿ
ನೀಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ. ಜತೆಗೆ ಆಡಿಯೋ ಕ್ಲಿಪ್ ಒದಗಿಸುವಂತೆ
ಕೇಳಲಾಗಿದೆ. ಪ್ರಕರಣದಲ್ಲಿ ಅಧಿಕಾರಿಯಿಂದ ಲೋಪವಾಗಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.