ಕೋವಿಡ್ ಲಾಕಡೌನ್ ಸರ್ಕಾರದ ಪರಿಷ್ಕೃತ ಮಾರ್ಗಸೂಚಿ ಪಾಲಿಸಿ: ವಿಜಯಪುರ ಡಿಸಿ ಸೂಚನೆ

Team Udayavani, Jun 13, 2021, 5:38 PM IST

ಕೋವಿಡ್ ಲಾಕಡೌನ್ ಸರ್ಕಾರದ ಪರಿಷ್ಕೃತ ಮಾರ್ಗಸೂಚಿ ಪಾಲಿಸಿ: ವಿಜಯಪುರ ಡಿಸಿ ಸೂಚನೆ

ವಿಜಯಪುರ:  ಕೋವಿಡ್- 19 ಲಾಕಡೌನ್ ಗೆ ಸಂಬಂಧಿಸಿದಂತೆ ಸರ್ಕಾರವ ಮೇ  7 ರಂದು ಹೊರಡಿಸಿದ್ದ ಮಾರ್ಗಸೂಚಿಗಳಲ್ಲಿ ಕೆಲವು ವಿನಾಯಿತಿ ನೀಡಿ ಜೂನ್ 11 ರಂದು ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ. ಈ ಪರಿಷ್ಕೃತ ಮಾರ್ಗಸೂಚಿಗಳನ್ನು ಜಿಲ್ಲೆಯ ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸುವಂತೆ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿಯವರು, ಜೂನ್ 14ರ ಬೆಳಿಗ್ಗೆ 6ರಿಂದ ಜೂ. 21ರ ಬೆಳಿಗ್ಗೆ 6 ರವರೆಗೆ ಈ ಮಾರ್ಗಸೂಚಿಗಳು ಜಾರಿಯಲ್ಲಿ ಇರಲಿವೆ. ಸೂಚನೆಗಳನ್ನು ಕಡ್ಡಾಯ ಪಾಲನೆ ಮೂಲಕ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಿದ್ದಾರೆ.

ಅಗತ್ಯ ವಸ್ತುಗಳ ಮಾರಾಟ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಾಲಾವಕಾಶವಿದೆ. ಆಹಾರ, ಬೇಳೆಕಾಳು, ಹಣ್ಣು, ತರಕಾರಿ, ಮಾಂಸ, ಮೀನು-ಮಾಂಸ, ಡೇರಿ ಮಿಲ್ಕ್ ಬೂತ್, ಪಶು ಮೇವು, ಕನ್ನಡಕ ಅಂಗಡಿ, ಬೀದಿಬದಿ ವ್ಯಾಪಾರಕ್ಕೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಮಾತ್ರ ಅವಕಾಶವಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಆಟೋ ಟ್ಯಾಕ್ಸಿಗಳಿಗೆ ಅವಕಾಶ ನೀಡಿದ್ದು, ಇಬ್ಬರ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಕೆಎಸ್ಆರ್ ಟಿಸಿ, ಖಾಸಗಿ ಬಸ್ ಸಂಚಾರ ಇರುವುದಿಲ್ಲ. ನಿರ್ಮಾಣ ಚಟುವಟಿಕೆಗಳಿಗೆ ಅವಕಾಶ ನೀಡಿದ್ದು, ಸಿಮೆಂಟ್ ಕಬ್ಬಿಣದ ಅಂಗಡಿಗಳಿಗೆ ತೆರೆಯಲು ಅವಕಾಶವಿದೆ. ಗಾರ್ಮೆಂಟ್ಸ್ ಗಳಿಗೆ ಶೇಕಡ 30 ರಷ್ಟು ಅವಕಾಶವಿದ್ದು ಉಳಿದ ಕಾರ್ಖಾನೆಗಳಿಗೆ ಶೇಕಡ 50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ಮಾಡಬಹುದು.

ಇದನ್ನೂ ಓದಿ:ಅರವಿಂದ ಬೆಲ್ಲದ ದೆಹಲಿಗೆ ಹೋಗಿದ್ದು ವೈಯಕ್ತಿಕ ಕೆಲಸಕ್ಕೆ

ಪಾರ್ಕ್ ಗಳಲ್ಲಿ ಬೆಳಗ್ಗೆ 5 ರಿಂದ 10 ರವರೆಗೆ ವಾಯುವಿಹಾರ, ಜಾಗಿಂಗ್ ನಡೆಸಲು ಕಾಲಾವಕಾಶ ನೀಡಲಾಗಿದೆ. ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಕೌಶಲ್ಯ ತರಬೇತಿ ನೀಡವಹುದು. ಪ್ರಮುಖ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸಲು ಶೇ.50 ರಷ್ಟು ಸಿಬ್ಬಂದಿಗೆ ಅವಕಾಶ ನೀಡಲಾಗಿದೆ.

ನಿರ್ಬಂಧ ಸಡಿಲಿಕೆ ಹೊರತಾಗಿ ಕೆಲ ನಿರ್ಬಂಧ ವಿಧಿಸಲಾಗಿದೆ. ಅಗತ್ಯ ವಸ್ತು ಹೊರತು ಪಡಿಸಿ ಉಳಿದ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧವಿದೆ. ಈಜುಕೊಳ, ಜಿಮ್, ಸಿನಿಮಾ, ಮಾಲ್, ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ ಮುಂದು ವರೆದಿದೆ.

ರಾಜಕೀಯ ಧಾರ್ಮಿಕ ಸಾಂಸ್ಕೃತಿಕ ಸಮಾರಂಭಗಳಿಗೆ ನಿರ್ಬಂಧವಿದೆ. ಖಾಸಗಿ ಅಗತ್ಯ ಸೇವೆ ವ್ಯಾಪ್ತಿಗೆ ಬಾರದ ಸರ್ಕಾರಿ ಕಚೇರಿಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಈ ಮೊದಲು ನಿಗದಿತ ಮದುವೆ ಮನೆಯಲ್ಲಿ ನೆರವೇರಿಸಬಹುದು. 40 ಜನ ಮಾತ್ರ ಪಾಲ್ಗೊಳ್ಳಲು ಅವಕಾಶವಿದೆ. ಶವಸಂಸ್ಕಾರ ಅಥವಾ ಅಂತ್ಯಕ್ರಿಯೆ ವೇಳೆ 5 ಜನರಿಗೆ ಮಾತ್ರ ಅವಕಾಶವಿದೆ.

ರಾಜ್ಯ ವ್ಯಾಪ್ತಿ ರಾತ್ರಿ ಹಾಗೂ ವಾರಂತ್ಯ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ. ಜೂನ್ 14 ರಿಂದ 21 ರವರೆಗೆ ರಾತ್ರಿ ಕರ್ಫ್ಯೂ ರಾಜ್ಯ ವ್ಯಾಪ್ತಿ ರಾತ್ರಿ 7 ರಿಂದ ಬೆಳಿಗ್ಗೆ 5  ವರೆಗೆ ಜಾರಿಯಲ್ಲಿ ಇರುತ್ತದೆ. ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ರಿಂದ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿಯಲ್ಲಿ ಇರುತ್ತದೆ. ಈ ವೇಳೆ ರೋಗಿಗಳು ಅವರ ಸಹಾಯಕರ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾತ್ರಿ ಕಾರ್ಯಾಚರಣೆ ಅಗತ್ಯವಿರುವ ಕೈಗಾರಿಕೆಗಳಿಗೆ ಅವಕಾಶವಿರುತ್ತದೆ. ನೌಕರರು ಐಡಿ ಕಾರ್ಡ್ ತೋರಿಸಿ ಪ್ರಯಾಣಿಸಬೇಕು. ಒಟ್ಟಾರೆ ರಾತ್ರಿ ಕರ್ಫ್ಯೂ ಹಾಗೂ ವಿಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಅನುಮತಿಸಲಾದ ಚಟುವಟಿಕೆ ಹೊರತು ಪಡಿಸಿ ಜನರ ಹಾಗೂ ವಾಹನಗಳ ಅನಗತ್ಯ ಓಡಾಟಕ್ಕೆ ನಿರ್ಭಂಧಿಸಲಾಗಿದೆ.

ಅದರಂತೆ ಟೆಲಿಕಾಂ ಇಂಟರ್ನೆಟ್ ಸಂಸ್ಥೆಗಳ ನೌಕರರು ಮತ್ತು ವಾಹನಗಳ ಸಂಚಾರಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ. ಆದರೆ ಗುರುತಿನ ಚೀಟಿಯೊಂದಿಗೆ ಪ್ರಯಾಣಿಸಬೇಕು‌. ವೈದ್ಯಕೀಯ ತುರ್ತು ಸೇವೆಗಳು ಅಗತ್ಯ ಸೇವೆಯ ಫಾರ್ಮಸಿ ಕಾರ್ಯಾಚರಣೆಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಎಲ್ಲ ತರಹದ ಸರಕು ಮತ್ತು ಸರಕು ಸಾಗಾಟ ವಾಹನ ಸಂಚಾರಕ್ಕೆ ನಿರ್ಬಂಧ ಇರುವುದಿಲ್ಲ. ಸರಕುಗಳ ಹೋಂ ಡೆಲಿವರಿ, ಇ-ಕಾಮರ್ಸ್ ಚಟುವಟಿಕೆಗೆ ಅವಕಾಶ ನೀಡಲಾಗಿದೆ.

ರೈಲು ವಿಮಾನ ಸೇವೆ ಎಂದಿನಂತೆ ಅವಕಾಶವಿದ್ದು, ಪಾಸ್ ರೀತಿಯಲ್ಲಿ ಟಿಕೆಟ್ ಬಳಸಲು ಸೂಚಿಸಲಾಗಿದೆ. ಅದರಂತೆ ನಿತ್ಯದ ರಾತ್ರಿ ಕರ್ಫ್ಯೂ, ವಿಕೆಂಡ್ ಕರ್ಫ್ಯೂ ವೇಳೆ ಸರ್ಕಾರದ  ಮಾರ್ಗಸೂಚಿ ಅನ್ವಯ ಅನುಮತಿಸಿದ ಚಟುವಟಿಕೆ ಹೊರತು ಪಡಿಸಿ ಅನಗತ್ಯ ವಾಹನ, ಹಾಗೂ ವ್ಯಕ್ತಿಗಳು ಓಡಾಟ ನಡೆಸಲು ಅವಕಾಶವಿಲ್ಲ. ಸಾರ್ವಜನಿಕರು ಮಾಸ್ಕ್ ಧರಿಸಿ ಸಾಮಾಜಿಕ ಅಂತರದೊಂದಿಗೆ ಸರ್ಕಾರದ ಮಾರ್ಗಸೂಚಿ ಪಾಲಿಸುವಂತೆ ಜಿಲ್ಲಾಧಿಕಾರಿ ಸುನೀಲ್ ಕುಮಾರ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.