ಅಭಿವೃದ್ಧಿ ಕಾರ್ಯಗಳ ಅನಾವರಣ
Team Udayavani, Dec 17, 2019, 1:05 PM IST
ವಿಜಯಪುರ: ರಾಜ್ಯ ಸರ್ಕಾರ ಅಭಿವೃದ್ಧಿ ಹಿತದೃಷ್ಟಿಯಿಂದ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ನೆರೆ ಸಂತ್ರಸ್ತರಿಗೆ ಅನೇಕ ಪರಿಹಾರ ಹಾಗೂ ಜನಪರ ಕಾರ್ಯಕ್ರಮ ಜಾರಿಗೊಳಿಸಿದ್ದು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳುವಂತೆ ಜಿಪಂ ಸಿಇಒ ಗೋವಿಂದರಡ್ಡಿ ಮನವಿ ಮಾಡಿದರು.
ಸೋಮವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಡಿ. 18ರವರೆಗೆ ನಡೆಯಲಿರುವ ರಾಜ್ಯ ಸರ್ಕಾರದ ಸಾಧನೆಗಳ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಎಲ್ಲ ಸಾರ್ವಜನಿಕರು ಮತ್ತುವಿದ್ಯಾರ್ಥಿಗಳು ಪ್ರದರ್ಶನದ ಸದುಪಯೋಗ ಪಡೆದುಕೊಳ್ಳಬೇಕು. ವಿಶೇಷವಾಗಿ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಗೂ ನೆರವಾಗಲಿದೆ. ಹೀಗಾಗಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸುವಂತೆ ಸಲಹೆ ನೀಡಿದರು. ರಾಜ್ಯದಲ್ಲಿ ಇತ್ತೀಚೆಗೆ ಬಂದಿದ್ದ ನೆರೆ ಹಾವಳಿ ಸಂದರ್ಭದಲ್ಲಿ ಸರ್ಕಾರ ಕೈಗೊಂಡ ಹಲವು ಕ್ರಮಗಳು ಸೇರಿದಂತೆ ಸಾಧನೆಗಳ ಅನಾವರಣಗೊಳಿಸುವ ಛಾಯಾಚಿತ್ರ ಪ್ರದರ್ಶನ ಡಿ. 18ರವರೆಗೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದೆ. ಎಲ್‌ಇಡಿ ಮೂಲಕ ರಾಜ್ಯ ಸರ್ಕಾರ ನೆರೆ ಹಾವಳಿ ಸಂದರ್ಭದಲ್ಲಿ ಕೈಗೊಂಡ ಹಲವು ಮುನ್ನೆಚ್ಚರಿಕಾ ಕ್ರಮಗಳು,ನೆರೆ ಹಾವಳಿ ಸಂತ್ರಸ್ತರಿಗೆ ಘೋಷಿಸಿದ ಪರಿಹಾರ ಕಾರ್ಯಕ್ರಮಗಳು ಸೇರಿದಂತೆ ಇನ್ನಿತರ ಮಾಹಿತಿ ಒದಗಿಸುವ ಛಾಯಾಚಿತ್ರ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.
ಪ್ರವಾಹ ಸಂತ್ರಸ್ತರ ನೋವಿಗೆ ಮಿಡಿದ ಸರ್ಕಾರ, ಐಟಿ-ಬಿಟಿ ಅಭಿವೃದ್ಧಿ ಆವಿಷ್ಕಾರ ಪ್ರಾಧಿಕಾರ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆಯಡಿ ಕೇಂದ್ರ ಸರ್ಕಾರದ ಜೊತೆಗೆ ರಾಜ್ಯದ ಕೊಡುಗೆ, ನೇಕಾರರ ಸಾಲ ಮನ್ನಾ, ಮೀನುಗಾರರ ಸಾಲ ಮನ್ನಾ, ಕೈಗಾರಿಕೆಗಳ ಉತ್ತೇಜನ, ಪ್ರವಾಸೋದ್ಯಮಕ್ಕೆ ಉತ್ತೇಜನ, ಕಲ್ಯಾಣ ಕರ್ನಾಟಕ ಪರ್ವಕ್ಕೆ ಚಾಲನೆ ಸೇರಿದಂತೆ ವಿವಿಧ ಯೋಜನೆಗಳ ಮಾಹಿತಿ ಫಲಕಗಳನ್ನು ಅಳವಡಿಸಲಾಗಿದೆ ಎಂದು ವಿವರ ನೀಡಿದರು. ಪಪೂ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜೆ.ಎಸ್. ಪೂಜೇರಿ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ| ಸಂಪತ್ ಗುಣಾರಿ, ಕೆಎಸ್‌ಆರ್‌ಟಿಸಿ ಡಿಟಿಒ ಬಿರಾದಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಸುಲೇಮಾನ ನದಾಫ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.
Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.