ಬಳಸಿ ಎಸೆದ ಪಿಪಿಇ ಕಿಟ್-ಮಾಸ್ಕ್ ಧರಿಸಿ ಹುಚ್ಚಾಟ
Team Udayavani, Jul 13, 2020, 2:43 PM IST
ವಿಜಯಪುರ: ಸ್ಮಶಾನದಲ್ಲಿ ಸೋಂಕಿತರ ಶವ ಸಂಸ್ಕಾರದ ಬಳಸಿ ಎಸೆದಿದ್ದ ಪಿಪಿಇ ಕಿಟ್, ಫೇಸ್ ಶೀಲ್ಡ್, ಮಾಸ್ಕ್ ಧರಿಸಿದ ಮಾನಸಿಕ ಅಸ್ವಸ್ಥನೊಬ್ಬ ಹುಚ್ಚಾಟ ನಡೆಸಿದ್ದು, ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪಾಲಿಕೆ ಸಿಬ್ಬಂದಿ ಪಿಪಿಇ ಕಿಟ್‌ಗಳನ್ನು ಸುಟ್ಟು ಹಾಕಿದ ಘಟನೆ ಜರುಗಿದೆ.
ನಗರದ ಮನಗೂಳಿ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ಕೊರೊನಾ ಸೋಂಕಿತರ ಅಂತ್ಯಕ್ರಿಯೆ ಸಂದರ್ಭದಲ್ಲಿ ಬಳಸುವ ಪಿಪಿಇ ಕಿಟ್ ಬಳಸಿ ಎಸೆಯಲಾಗಿತ್ತು. ಇದನ್ನು ನೋಡಿದ ಮಾನಸಿಕ ಅಸ್ವಸ್ಥನೊಬ್ಬ ಅದನ್ನು ಧರಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಓಡಾಡಿ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ. ಮನಗೂಳಿ ರಸ್ತೆಗೆ ಹೊಂದಿಕೊಂಡ ಪುಲಕೇಶಿ ನಗರ, ಕೀರ್ತಿ ನಗರ, ಕೆ.ಕೆ.ನಗರ, ಕನಕದಾಸ ಬಡಾವಣೆಗಳಲ್ಲಿ ಓಡಾಡಿಕೊಂಡಿದ್ದರಿಂದ ನಿವಾಸಿಗಳು ಕಂಗಾಲಾಗಿದ್ದರು. ಮಾನಸಿಕ ಅಸ್ವಸ್ಥನ ಈ ಹುಚ್ಚಾಟದ ಮಾಹಿತಿ ದೊರೆಯುತ್ತಲೇ ಪೌರ ಕಾರ್ಮಿಕರೊಂದಿಗೆ ಸ್ಥಳಕ್ಕಾಗಮಿಸಿದ ಮಹಾನಗರ ಪಾಲಿಕೆ ಸಿಬ್ಬಂದಿ ಹುಚ್ಚಾಟ ನಡೆಸಿದ್ದವನಿಂದ ಪಿಪಿಇ ಕಿಟ್ ಕಿತ್ತುಕೊಂಡು ಸುಟ್ಟು ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.