ವಿಜಯಪುರ : ಸಾಲಭಾದೆಯಿಂದ ಮನನೊಂದ ರೈತ ಆತ್ಮಹತ್ಯೆ
Team Udayavani, Oct 14, 2019, 4:23 PM IST
ವಿಜಯಪುರ: ಸಾಲಭಾದೆಯ ಒತ್ತಡವನ್ನು ತಡೆಯಲಾರದೆ ರೈತನೊಬ್ಬಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಂದಗಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ನಡೆದಿದೆ.
ನಿಂಗಪ್ಪ ಬಸಪ್ಪ ದುದ್ದಗಿ (49) ಎಂಬ ರೈತ ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ. 12 ರಂದು ಮಧ್ಯರಾತ್ರಿ ಗ್ರಾಮದ ಬಳಿ ತುಂಬಿ ಹರಿಯುತ್ತಿದ್ದ ಕಾಲುವೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ನಿಂಗಪ್ಪ ಬಸಪ್ಪ ದುದ್ದಗಿ ಮೃತ ದೇಹ ಇಂದು ಮೋರಟಗಿ ಕಾಲುವೆ ದಡದಲ್ಲಿ ಪತ್ತೆಯಾಗಿದೆ.
ಮೃತ ರೈತ ನಿಂಗಪ್ಪ 6 ವರ್ಷದ ಹಿಂದೆ ಮೋರಟಗಿ ಬ್ಯಾಂಕ್ ಆಫ್ ಮಾಹಾರಾಷ್ಟ ದಲ್ಲಿ 6 ಲಕ್ಷ ರೂ. ಮತ್ತು ಗಬಸಾವಳಗಿಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕನಲ್ಲಿ 1 ಲಕ್ಷ ರೂ. ಸಾಲ ಪಡೆದಿದ್ದ. ಆದರೆ ಕಳೆದ 3 ವರ್ಷಗಳಿಂದ ಮಳೆ ಇಲ್ಲದೇ ಭೀಕರ ಬರ ಆವರಿಸಿದ್ದು ಬ್ಯಾಂಕ್ ಸಾಲ ದ್ವಿಗುಣ ವಾಗಿತ್ತು. ಸಾಲ ತೀರಿಸಲು ಹಣ ಹೊಂದಿಸಲು ಯತ್ನಿಸಿದರೂ ಎಲ್ಲಿಯೂ ಹಣ ಹೊಂದಾಣಿಕೆ ಆಗಿರಲಿಲ್ಲ. ಅಲ್ಲದೇ ಕುಟುಂಬ ನಿರ್ವಹಣೆಯೂ ಕಷ್ಟವಾಗಿದ್ದು. ಇದರಿಂದ ಮಾನಸಿಕವಾಗಿ ನೊಂದಿದ್ದ ರೈತ ನಿಂಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿರುವ ಕೃಷಿ ಹಾಗೂ ಪೊಲೀಸ್ ಸಿಬ್ಬಂದಿ ಮತ್ತು ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮೃತನಿಗೆ ಪತ್ನಿ ಬಸಮ್ಮ (35) ಮತ್ತು ಮಗ ಬಸವರಾಜ (16) ಅವಲಂಬಿತರಿದ್ದಾರೆ. ಈ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.