ವಿಜಯಪುರ ಪಾಲಿಕೆ; ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದೇವೆ: ಬಿಜೆಪಿ
ಮುಸ್ಲಿಂ ಸಮುದಾಯದ ಯಾರೂ ಟಿಕೆಟ್ ಕೇಳದ ಕಾರಣ ಅವಕಾಶ ನೀಡಿಲ್ಲ...
Team Udayavani, Oct 20, 2022, 3:54 PM IST
ವಿಜಯಪುರ : ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 33 ವಾರ್ಡ್ ಗಳಿಗೆ ಸ್ಪರ್ಧಿಸಿದ್ದು, ಎಲ್ಲಾ ವಾರ್ಡಗಳಲ್ಲೂ ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಇದರೊಂದಿಗೆ ನಮ್ಮ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ್ ಕುಚಬಾಳ ಗುರುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯದಲ್ಲಿ ನಮ್ಮ ಪಕ್ಷದ ಸರ್ಕಾರಗಳು ಮಾಡಿರುವ ಜನಪರ ಕಾರ್ಯಕ್ರಮಗಳು, ನಗರದಲ್ಲಿ ಆಗಿರುವ, ರಸ್ತೆ, ಕುಡಿಯುವ ನೀರು, ಚರಂಡಿ ಸೇರಿದಂತೆ ಅಭಿವೃದ್ಧಿ ಕಾರ್ಯಗಳೇ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಗೆಲುವಿನ ಶ್ರೀರಕ್ಷೆ ಆಗಲಿದೆ ಎಂದರು.
ಇದನ್ನೂ ಓದಿ : ಪರೇಶ್ ಮೇಸ್ತಾ ಸಾವಿನ ಪ್ರಕರಣ ಮರು ತನಿಖೆಗೆ ಸರ್ಕಾರದ ಚಿಂತನೆ
ಮರಾಠಾ, ಕುರುಬ, ಪಂಚಮಸಾಲಿ, ಬಣಜಿಗ, ಗಾಣಿಗ, ಭಾವಸಾರ ಕ್ಷತ್ರಿಯ, ಮಾದಿಗ, ಬಂಜಾರ, ಬ್ರಾಹ್ಮಣ ಸೇರಿದಂತೆ ಸಾಮಾಜಿಕ ನ್ಯಾಯದ ಆಧಾರದಲ್ಲಿ ಟಿಕೆಟ್ ನೀಡಿದ್ದೇವೆ. ಎರಡು ವಾರ್ಡ್ ಗಳಲ್ಲಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಸಾಧ್ಯವಾಗಿಲ್ಲ. ಮುಸ್ಲಿಂ ಸಮುದಾಯದ ಯಾರೂ ಟಿಕೆಟ್ ಕೇಳದ ಕಾರಣ ಅವಕಾಶ ನೀಡಿಲ್ಲ. ಎರಡು ವಾರ್ಡಗಳಿಗೆ ಅಭ್ಯರ್ಥಿ ಹಾಕದಿರುವುದು ಕೂಡ ಚುನಾವಣೆ ತಂತ್ರಗಾರಿಕೆಯ ಭಾಗವೇ ಹೊರತು, ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ಅನುಕೂಲ ಮಾಡಿಕೊಡುವ ಒಳ ಒಪ್ಪಂದವೇನಲ್ಲ ಎಂದು ಸಮಜಾಯಿಸಿ ನೀಡಿದರು.
ಹಲವು ವಾರ್ಡ್ ಗಳಲ್ಲಿ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಟಿಕೆಟ್ ನಿರೀಕ್ಷೆಯಲ್ಲಿದ್ದ ಹಲವರು ನಾಮಪತ್ರ ಸಲ್ಲಿಸಿದ್ದಾರೆ. ಇಂಥದನ್ನು ಬಂಡಾಯ ಎನ್ನಲಾಗದು. ಸ್ಪರ್ಧಾ ಆಕಾಂಕ್ಷಿಗಳ ಅಸಮಾಧಾನ ಸಹಜವಾಗಿದ್ದು, ಬಹುತೇಕರ ಮನವೊಲಿಕೆ ಕಾರಣ ನಾಮಪತ್ರ ಹಿಂಪಡೆದಿದ್ದಾರೆ. ಪಕ್ಷದ ಸೂಚನೆ ಹೊರತಾಗಿಯೂ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ವಿರುದ್ಧ ಪಕ್ಷ ಶಿಸ್ತುಕ್ರಮ ಕೈಗೊಳ್ಳಲಿದೆ ಎಂದರು.
ರಾಜ್ಯದ ಗಮನ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಮೇಲೆ ನೆಟ್ಟಿದೆ. ಹೀಗಾಗಿ ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಮ್ಮ ಪಾಲಿಕೆ ಚುನಾವಣೆ ವಿಶೇಷ ಗಮನ ಸೆಳೆಯುತ್ತಿದೆ ಎಂದರು.
ಪಕ್ಷದ ಪ್ರಮುಖರಾದ ಮಲ್ಲಿಕಾರ್ಜುನ ಜೋಗೂರ, ಬಾಪುಸಿಂಗ್ ರಜಪೂತ, ವಿಜಯ ಜೋಶಿ, ಚಂದ್ರಶೇಖರ ಕವಟಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.