ವಿಜಯಪುರ ಸಾರಿಗೆ ಸಂಸ್ಥೆಯ 3 ಘಟಕಗಳಿಗೆ ರಾಷ್ಟ್ರ ಪ್ರಶಸ್ತಿ

Team Udayavani, Jun 11, 2020, 5:38 PM IST

11-June-21

ವಿಜಯಪುರ: ಡಿಸಿಎಂ ಲಕ್ಷ್ಮಣ ಸವದಿ ಈ.ಕ.ರ.ಸಾ. ಸಂಸ್ಥೆ ವಿಜಯಪುರ ವಿಭಾಗಕ್ಕೆ ಸಂದಿರುವ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದರು

ವಿಜಯಪುರ: ಈ.ಕ.ರ.ಸಾ.ಸಂಸ್ಥೆಯ ವಿಜಯಪುರ ವಿಭಾಗದ ವಿವಿಧ ಘಟಕಗಳಿಗೆ ರಾಷ್ಟ್ರ ಮಟ್ಟದ 2018-19 ನೇ ಸಾಲಿನ ವಿವಿಧ ವಿಭಾಗದಲ್ಲಿ ಮೂರು ಪ್ರಶಸ್ತಿಗಳು ಲಭಿಸಿವೆ.

ಕಲಬುರ್ಗಿಯಲ್ಲಿ ಜರುಗಿದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳ ಸಭೆಯಲ್ಲಿ ಸಾರಿಗೆ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಪಿ.ಸಿ.ಆರ್‌.ಎ ಸಂಸ್ಥೆಯಿಂದ ವಿಜಯಪುರ ವಿಭಾಗದ ಮೂರು ಘಟಕಗಳಿಗೆ ರಾಷ್ಟ್ರ ಮಟ್ಟದ ಪ್ರಶಸ್ತಿ ನೀಡಿದರು. ಅತಿ ಹೆಚ್ಚು ಇಂಧನ ಉಳಿತಾಯ, ಉತ್ತಮ ಸಾಧನೆ ಹಾಗೂ ಶ್ಲಾಘನೀಯ ಸೇವೆಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗದ ವಿಜಯಪುರ ಘಟಕ-2, ಬಸವನ ಬಾಗೇವಾಡಿ ಹಾಗೂ ಸಿಂದಗಿ ವಿಭಾಗಗಳಿಗೆ ರಾಷ್ಟ್ರಮಟ್ಟದ ಪಿಸಿಆರ್‌ಎ ಪ್ರಶಸ್ತಿ ಘೋಷಣೆ ಕುರಿತು ಪ್ರಕಟಿಸಲಾಯಿತು.

ವಿಜಯಪುರ ವಿಭಾಗದ ನಿಯಂತ್ರಣಾಧಿಕಾರಿ ಎಸ್‌.ಜಿ.ಗಂಗಾಧರ, ವಿಜಯಪುರ ವಿಭಾಗದ ತಾಂತ್ರಿಕ ಶಿಲ್ಪಿ ಎ.ಎಚ್‌. ಮಧಬಾವಿ ಹಾಗೂ ವಿಭಾಗಿಯ ಸಾರಿಗೆ ಅಧಿಕಾರಿ ಡಿ.ಎ.ಬಿರಾದಾರ ಅವರು ವಿಭಾಗದ ಪರವಾಗಿ ಪ್ರಶಸ್ತಿ ಹಾಗೂ ಸ್ಮರಣಿಕೆ ಸ್ವೀಕರಿಸಿದರು. ಪ್ರಶಸ್ತಿ ವಿಜೇತ ಮೂರು ಘಟಕಗಳಿಂದ ವಿಜಯಪುರ ಘಟಕ-2ರ ಘಟಕ ವ್ಯವಸ್ಥಾಪಕ ಬಿ.ಎ.ಹೂಗಾರ, ಬಸವನಬಾಗೇವಾಡಿ ಘಟಕ ವ್ಯವಸ್ಥಾಪಕ ವಿನಾಯಕ ಸಾಲಿಮಠ, ಸಿಂದಗಿ ಘಟಕದ ವ್ಯವಸ್ಥಾಪಕ ಎಸ್‌.ಎಂ.ವಾಲಿಕಾರ ಘಟಕದ ಪರವಾಗಿ ಪ್ರಶಸ್ತಿ ಹಾಗೂ ಸ್ಮರಣಿಕೆಯನ್ನು ಸ್ವೀಕರಿಸಿದರು.

ಟಾಪ್ ನ್ಯೂಸ್

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.