ಕಾಂಗ್ರೆಸ್‌ಮನೆಕದ ತಟ್ಟಿದ ಮನಗೂಳಿ ಪುತ್ರ ಅಶೋಕ
| ಸ್ಪರ್ಧೆಗೆ ಜೆಡಿಎಸ್ ಹಿಂದೇಟು ಹಾಕಿದ್ದಕ್ಕೆ ಮನಗೂಳಿ ಕುಟುಂಬದ ಹೊಸ ತಂತ್ರ
Team Udayavani, Feb 27, 2021, 6:28 PM IST
ವಿಜಯಪುರ: ಸಿಂದಗಿ ಉಪ ಚುನಾವಣೆ ಸಂಭವನೀಯ ಜೆಡಿಎಸ್ ಅಭ್ಯರ್ಥಿ, ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ಪುತ್ರ ಅಶೋಕ ಕಾಂಗ್ರೆಸ್ ನಾಯಕರ ಸಖ್ಯ ಬೆಳೆಸಿರುವುದು ಕುತೂಹಲ ಮೂಡಿಸಿದೆ.
ಸಿಂದಗಿ ಕ್ಷೇತ್ರದಿಂದ ಜೆಡಿಎಸ್ ಶಾಸಕರಾಗಿ ಆಯ್ಕೆಯಾಗಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಎಂ.ಸಿ. ಮನಗೂಳಿ ಈಚೆಗೆ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದರು. ಹೀಗಾಗಿ ಉಪ ಚುನಾವಣೆ ಎದುರಾಗುತ್ತಿರುವ ಈ ಕ್ಷೇತ್ರದಲ್ಲಿ ರಾಜಕೀಯ ಬಿರುಸು ಕಾಣಿಸಿಕೊಂಡಿದೆ. ಉಪ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಿಲ್ಲ ಎಂದು ಜೆಡಿಎಸ್ ವರಿಷ್ಠರು ಹೇಳುತ್ತಲೇ ಮನಗೂಳಿ
ಕುಟುಂಬದ ಸದಸ್ಯರು ಒಗ್ಗೂಡಿ ಚರ್ಚೆ ನಡೆಸಿದ್ದಾರೆ. ಮನಗೂಳಿ ಅವರ ನಾಲ್ವರು ಪುತ್ರರಲ್ಲಿ ಅಶೋಕ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದ್ದು, ಒಂದೊಮ್ಮೆ ನಾಲ್ವರಲ್ಲಿ ಯಾರಿಗೇ ಟಿಕೆಟ್ ಸಿಕ್ಕರೂ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಇದಲ್ಲದೇ ಜೆಡಿಎಸ್
ವರಿಷ್ಠರನ್ನು ಭೇಟಿ ಮಾಡಿ ಪರಿಸ್ಥಿತಿ ಮನವರಿಕೆ ಮಾಡಿಕೊಡಬೇಕು ಎಂದು ನಿರ್ಧರಿಸಿದೆ. ಇದರ ಫಲವಾಗಿ ಸ್ಪರ್ಧಾಕಾಂಕ್ಷಿ ಮನಗೂಳಿ ಅವರ ಪುತ್ರ ಅಶೋಕ ಬೆಂಗಳೂರಿಗೆ ಧಾವಿಸಿ ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿಲ್ಲ. ಎಂ.ಸಿ. ಮನಗೂಳಿ ಅವರು ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ, ಜನರೊಂದಿಗೆ ಹೊಂದಿದ್ದ ಒಡನಾಟ, ಆಪ್ತತೆ ಅವರಿಗೆ ರಾಜಕೀಯ ಮರುಜನ್ಮ ನೀಡುವಲ್ಲಿ ಸಹಕಾರಿ ಆಗಿತ್ತು. ಆದರೆ ಬದಲಾದ ಕಾಲಘಟ್ಟದಲ್ಲಿ ಅದರಲ್ಲೂ ಉಪ ಚುನಾವಣೆಯಂಥ ಸಂದರ್ಭದಲ್ಲಿ ಬಿಜೆಪಿ ಆಡಳಿತ ಯಂತ್ರ-ಆರ್ಥಿಕ ಶಕ್ತಿ ಎದುರು ಜೆಡಿಎಸ್ ಸೆಣಸಲಾಗದು. ಈ ವಾಸ್ತದ ಅರಿವು ಪಕ್ಷದ ವರಿಷ್ಠರು ಅಶೋಕಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಕಾರಣ ಏನು?: ಎರಡು ದಶಕದಿಂದ ಕಾಂಗ್ರೆಸ್ ಸಿಂದಗಿ ಕ್ಷೇತ್ರವನ್ನು ಕಳೆದುಕೊಂಡಿದೆ. ಶತಾಯಗತಾಯ ಈ ಬಾರಿ ಸಿಂದಗಿಯಲ್ಲಿ ಕಾಂಗ್ರೆಸ್ ಶಕ್ತಿ ತೋರಬೇಕೆಂಬ ಇರಾದೆ ಆ ಪಕ್ಷದ ನಾಯಕರಿಗೆ ಇದೆ. ಸಹಕಾರಿ ವ್ಯವಸ್ಥೆಯಲ್ಲಿ ಅಶೋಕ ಅವರನ್ನು ಕಂಡಿರುವ ಮೇಲ್ಮನೆ ವಿಪಕ್ಷದ ನಾಯಕ ಎಸ್.ಆರ್. ಪಾಟೀಲ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಎಚ್.ಕೆ. ಪಾಟೀಲ, ಶಿವಾನಂದ ಪಾಟೀಲ, ಎಂ.ಬಿ. ಪಾಟೀಲ ಅವರಂಥ ನಾಯಕರು ಕಾಂಗ್ರೆಸ್ ಸೇರಲು ಸೂಚಿಸಿದ್ದಾರೆ ಎನ್ನಲಾಗಿದೆ.
ಸಿಂದಗಿ ಕ್ಷೇತ್ರದಲ್ಲಿ ಸತತ ಮೂರು ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದ್ದು, ಹೊಸ ಮುಖದ ಹುಡುಕಾಟದಲ್ಲಿದೆ. ಅಹಿಂದ ಮತಗಳು ಒಗ್ಗೂಡಿದರೆ ಹಾಲಿ ಶಾಸಕರಾಗಿದ್ದ ಮನಗೂಳಿ ನಿಧನದ ಅನುಕಂಪ ಆಡಳಿತ ಪಕ್ಷದ ಎಲ್ಲ ರಣತಂತ್ರಗಳನ್ನು ಬಗ್ಗುಬಡಿದು ತಮ್ಮ ಗೆಲುವಿನ ದಡಕ್ಕೆ ಕೊಂಡೊಯ್ಯಲು ಸಹಕಾರಿ ಆಗಲಿದೆ ಎಂದು ಅಶೋಕ ಮನಗೂಳಿಗೆ ಸಲಹೆ ನೀಡಿದ್ದಾರೆ.
ಇಂಥ ಹಲವು ಕಾರಣಗಳಿಂದಾಗಿ ಅಶೋಕ ಕಾಂಗ್ರೆಸ್ ಕೈ ಹಿಡಿಯಲು ನಾಯಕರನ್ನು ಸಂಪರ್ಕಿಸುವ ಕೆಲಸದಲ್ಲಿ ತೊಡಗಿದ್ದಾರೆ. ಇದರ ಭಾಗವಾಗಿ ವಿಧಾನಸಭೆ ವಿನಾಯಕ ಸಿದ್ದರಾಮಯ್ಯ ಅವರನ್ನೂ ಬೆಂಗಳೂರಿನಲ್ಲಿ ಭೇಟಿಯಾಗಿರುವ ಅಶೋಕ ಮಾತುಕತೆ ನಡೆಸಿದ್ದಾರೆ. ತಮ್ಮ ತಂದೆಯೊಂದಿಗೆ ಜನತಾ ಪರಿವಾರದಲ್ಲಿ ಹೊಂದಿದ್ದ ಬಾಂಧವ್ಯ ಕೈ ಹಿಡಿಯಲಿದೆ ಎಂಬ ಲೆಕ್ಕಾಚಾರವೇ ಅಶೋಕ ಕಾಂಗ್ರೆಸ್ ಕದ ತಟ್ಟಲು ಕಾರಣವಾಗಿದೆ.
–ಜಿ.ಎಸ್. ಕಮತರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.