Vijayapura:ಗಾಂಜಾ ಬೆಳೆದವನಿಗೆ 5 ವರ್ಷ ಕಠಿಣ ಶಿಕ್ಷೆ, 50 ಸಾವಿರ ರೂ.ದಂಡ
Team Udayavani, Aug 24, 2023, 8:06 PM IST
ವಿಜಯಪುರ: ಅಕ್ರಮವಾಗಿ ಗಾಂಜಾ ಬೆಳೆದ ಆರೋಪದ ಮೇಲೆ ತಿಕೋಟಾ ಪೋಲಿಸ್ ಠಾಣಾ ವ್ಯಾಪ್ತಿಯ ಜಾಲಗೇರಿ ವಿಟ್ಠಲವಾಡಿ ಗ್ರಾಮದ ನಿವಾಸಿ ಕಾಶಿನಾಥ ರಾಠೋಡನಿಗೆ 5 ವರ್ಷ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನಿಡಿದೆ.
ಆರೋಪಿ ಕಾಶೀನಾಥ ರಾಠೋಡ ತನ್ನ ಜಮೀನಿನಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ ಗಾಂಜಾ ಬೆಳೆದಿರುವುದನ್ನು ತಿಕೋಟಾ ಪೋಲಿಸರು ದಾಳಿ ಮಾಡಿ ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಿವಾಜಿ ಅನಂತ ನಾಲವಾಡೆ ಅವರು ವಿಚಾರಣೆ ನಡೆಸಿ, ಆರೋಪ ಸಾಬೀತಾದ ಹಿನ್ನಲೆಯಲ್ಲಿ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ಆ.23 ರಂದು ತೀರ್ಪು ನೀಡಿದ್ದಾರೆ.
ತಿಕೋಟಾ ಪೋಲಿಸ್ ಠಾಣೆಯ ಶ್ರೀಮತಿ ಎಸ್.ಕೆ.ಲಂಗೋಟಿ ಅವರು ಈ ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕರಾದ ಎಸ್.ಎಚ್.ಹಕೀಮ ಅವರು ವಾದ ಮಂಡಿಸಿದ್ದರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ಅರೆನಗ್ನಾವಸ್ಥೆಯಲ್ಲಿ ಅನಾಮಧೇಯ ಮಹಿಳೆಯ ಶವ ಪತ್ತೆ
Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ
CHANAKYA CAREER ACADEMY: ಚಾಣಕ್ಯ ಯುವ ಭವಿಷ್ಯಕ್ಕೆ ಭದ್ರ ಬುನಾದಿ
Waqf issue: ಎಲ್ಲ ಪಹಣಿಯಲ್ಲೂ ವಕ್ಫ್ ಹೆಸರು ತೆಗೆಯಿರಿ: ಮುಲ್ಲಾ ಅಸೋಸಿಯೇಷನ್ ಆಗ್ರಹ
Tragedy: ಕೂಲಿ ಆಸೆಗೆ ತೆಂಗಿನ ಮರ ಏರಿದ್ದ ಅವಿವಾಹಿತ ಯುವಕ ಆಯತಪ್ಪಿ ಬಿದ್ದು ಮೃತ್ಯು
MUST WATCH
ಹೊಸ ಸೇರ್ಪಡೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.