ಮಹಾಮಾರಿಯಿಂದ ರಕ್ಷಣೆಗೆ ಜಾಗೃತಿಯೇ ಮದ್ದು


Team Udayavani, May 9, 2021, 9:17 PM IST

9-13

ಮುದ್ದೇಬಿಹಾಳ: ಕೊರೊನಾ ಎರಡನೇ ಅಲೆಯ ಗಂಭೀರ ಪರಿಣಾಮಗಳಿಂದ ರಕ್ಷಿಸಿಕೊಳ್ಳಲು ನಮ್ಮ ಕುಟುಂಬದಿಂದಲೇ ಜಾಗೃತಿ ಪ್ರಾರಂಭಗೊಳ್ಳಬೇಕು ಎಂದು ಶಾಸಕ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್‌. ಪಾಟೀಲ ನಡಹಳ್ಳಿ ತಿಳಿಸಿದ್ದಾರೆ.

ಕೊರೊನಾ ಸೋಂಕಿನಿಂದ ಗುಣಮುಖರಾದ ಅವರು ಶನಿವಾರ “ಉದಯವಾಣಿ’ಯೊಂದಿಗೆ ಮಾತನಾಡಿ, ಕುಟುಂಬದಲ್ಲಿರುವ ಪ್ರತಿಯೊಬ್ಬ ಸದಸ್ಯರು ಸ್ವಲ್ಪ ದಿನಗಳ ಕಾಲ ದೂರ ದೂರ ಇರೋಣ, ಮಾಸ್ಕ್ ಹಾಕೋಣ, ಉಸಿರಾಟ ನಿಯಂತ್ರಿಸುವ ಶ್ವಾಸಕೋಶಕ್ಕೆ ಸಂಬಂ ಧಿಸಿದ ವ್ಯಾಯಾಮ ಮಾಡೋಣ, ಹೊಲಕ್ಕೆ ಅಥವಾ ಪರಿಸರದಲ್ಲಿ ಹೋಗಿ ದೈಹಿಕ ಶ್ರಮ ಪಡೋಣ ಎನ್ನುವ ಸಂಕಲ್ಪ ತೊಡಬೇಕು ಎಂದರು. ನಮ್ಮ ದೇಹಕ್ಕೆ ಆಕ್ಸಿಜನ್‌ ಸಿಗಬೇಕಾದರೆ ದೈಹಿಕ ಶ್ರಮ ಮಹತ್ವದ್ದಾಗಿದೆ. ನಾವು ದೇಹವನ್ನು ಎಷ್ಟು ದುಡಿಸುತ್ತೇವೆಯೋ ಅಷ್ಟು ಶಕ್ತಿ ನಮಗೆ ಬರುತ್ತದೆ. ಇದರಿಂದ ರೋಗ ನಮ್ಮಿಂದ ದೂರ ಇರುತ್ತದೆ. ಬೆಳಗ್ಗೆ, ಸಂಜೆ ಎರಡು ಗಂಟೆ ನಿಯಮಿತವಾಗಿ ಶ್ರಮದಾಯಕ ಕೆಲಸ ಮಾಡಿದರೆ ಶ್ವಾಸಕೋಶ ಬಲಗೊಳ್ಳುತ್ತವೆ. ಆಕ್ಸಿಜನ್‌ ವ್ಯವಸ್ಥೆ ಸರಿಹೋಗುತ್ತದೆ. ಉಸಿರಾಟ ಏರಿಳಿತಗಳಿಲ್ಲದೆ ನಿಯಮಿತವಾಗುತ್ತದೆ ಎಂದು ಹೇಳಿದರು.

ನಮ್ಮದು ಶೇ.80 ಕೃಷಿ ಅವಲಂಬಿತ ದೇಶ. ಶೇ.80 ಜನ ತಮ್ಮೂರಲ್ಲೇ ಇದ್ದು ಕೆಲಸ ಮಾಡಬೇಕು. ಅನವಶ್ಯಕ ನಗರ, ಪಟ್ಟಣ ವಲಸೆಗೆ ಕಡಿವಾಣ ಹಾಕಬೇಕು. ಸೋಂಕಿನ ಪಾಸಿಟಿವ್‌ ಬಂದರೂ ತೋರಿಸದೆ ಮುಚ್ಚಿಟ್ಟುಕೊಳ್ಳುವುದು ಆತ್ಮಹತ್ಯೆಗೆ ಸಮ. ಸೋಂಕಿತರು ಸ್ವತ್ಛಂದವಾಗಿ ತಿರುಗಾಡಿ ನೂರಾರು ಜನರಿಗೆ ಸೋಂಕು ತಗುಲುವವರೆಗೂ ಸುಮ್ಮನಿದ್ದು ಆಮೇಲೆ ಉಸಿರಾಟಕ್ಕೆ ತೊಂದರೆ ಆದಾಗ ಆಸ್ಪತ್ರೆಗೆ ಓಡುವುದು ಬೇಡ. ನಮ್ಮ ಮನೆಯಿಂದಲೇ ಜಾಗೃತಿ ಶುರುವಾದರೆ ಸರ್ಕಾರ, ಪೊಲೀಸರು, ವೈದ್ಯರು ಯಾರೂ ಬೇಕಾಗಿಲ್ಲ. ಇದನ್ನು ಜನತೆ ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು.

ಈಗಿನ ಪರಿಸ್ಥಿತಿಯಲ್ಲಿ ಅವಶ್ಯಕ ಸೇವೆ ಹೊರತುಪಡಿಸಿ ದೇಶದ ಒಟ್ಟಾರೆ ಸಂಚಾರ ವ್ಯವಸ್ಥೆಯನ್ನೇ ಬಂದ್‌ ಮಾಡಬೇಕು. ಸಾರಿಗೆ ಸಂಪರ್ಕ ಮೊದಲು ಬಂದ್‌ ಆಗಬೇಕು. ಅವಶ್ಯಕ ಸೇವೆ ಹೊತ್ತು ತರುವ ವಾಹನ ಹೊರತು ಪಡಿಸಿ ಮತ್ಯಾವುದೂ ರಸ್ತೆಗಿಳಿಯಬಾರದು. ಮೋಟಾರ್‌ ಬೈಕ್‌ ಬ್ಯಾನ್‌ ಮಾಡಬೇಕು. ನಡೆದುಕೊಂಡೇ ಎಲ್ಲ ಚಟುವಟಿಕೆ ನಿರ್ವಹಿಸುವ ಪದ್ಧತಿ ಬರಬೇಕು. ಈ ನಿಟ್ಟಿನಲ್ಲಿ ಮೇ 10ರಿಂದ ಸರ್ಕಾರ ಜಾರಿಗೊಳಿಸಲಿರುವ ಲಾಕ್‌ಡೌನ್‌ ಸ್ವಾಗತಾರ್ಹ ಎಂದರು.

ಟಾಪ್ ನ್ಯೂಸ್

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.