ಬಬಲೇಶ್ವರ ತಾಲೂಕಲ್ಲಿ ಚಿರತೆ ಹೋಲುವ ಪ್ರಾಣಿ ಪ್ರತ್ಯಕ್ಷ
Team Udayavani, May 28, 2020, 5:39 PM IST
ಚಿರತೆಯನ್ನು ಹೋಲುವ ವನ್ಯಜೀವಿಯ ಹೆಜ್ಜೆ ಗುರುತು
ವಿಜಯಪುರ: ಬಬಲೇಶ್ವರ ತಾಲೂಕಿನ ದೇವರಗೆಣ್ಣೂರ, ಸುತಗುಂಡಿ ಪುನರ್ವಸತಿ ಕೇಂದ್ರ ಹಾಗೂ ವಿವಿಧ ಹಳ್ಳಿಗಳಲ್ಲಿ ಚಿರತೆ ಹೋಲುವ ಪ್ರಾಣಿ ಪ್ರತ್ಯಕ್ಷವಾದ ವರದಿಯಾಗಿದ್ದು, ತಾಲೂಕಿನ ಜನರನ್ನು ಭಯಭೀತರನ್ನಾಗಿಸಿದೆ. ಈ ಗ್ರಾಮಗಳ ರೈತರಿಗೆ ಸೇರಿದ ಎಮ್ಮೆ, ಎರಡು, ಮೇಕೆ ಮೇಲೆ ದಾಳಿ ನಡೆಸಿದೆ.
ದಾಳಿ ನಡೆಸಿದ್ದರಿಂದ ಜಾನುವಾರುಗಳು ಚೀರಾಟ ಆರಂಭಿಸಿದವು. ಜನರು ಕೂಗಾಡ ತೊಡಗಿದರು. ಜನರ ಕಿರಿಚಾಟ ಕೇಳಿದ ಈ ಪ್ರಾಣಿ ಕಬ್ಬಿನ ಜಮೀನುಗಳಲ್ಲಿ ಪರಾರಿಯಾಗಿ, ಅಡಗಿಕೊಂಡಿದೆ ಎಂದು ದೇವರ ಗೆಣ್ಣೂರ ಗ್ರಾಮದ ಪ್ರತ್ಯಕ್ಷದರ್ಶಿ ರೈತ ಮಂಜುನಾಥ ನಾವಿ ಹೇಳಿದ್ದಾರೆ. ರೈತರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೂಡಲೇ ಮಾಹಿತಿ ನೀಡಿದ್ದರಿಂದ ಮಮದಾಪುರ ವಲಯ ಅರಣ್ಯಾಧಿ ಕಾರಿ ಪ್ರಭು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಈ ಮಧ್ಯೆ ಬಬಲೇಶ್ವರ ತಾಲೂಕಿನ ಹಳ್ಳಿಗಳಲ್ಲಿ ಕಾಣಿಸಿಕೊಂದ್ದು, ಚಿರತೆಯಲ್ಲ ಹೈನಾ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ರೈತರ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿರುವ ಪ್ರಾಣಿ ಚಿರತೆಯೋ, ಚಿರತೆಯಂತೆ ಕಾಣುವ ಕತ್ತೆಕಿರುಬ (ಹೈನಾ)ವೋ ಎಂದು ಅರಣ್ಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಜನರಲ್ಲಿ ಮೂಡಿರುವ ಭಯ ಹೋಗಲಾಡಿಸಬೇಕಿದೆ ಎಂದು ಕರ್ನಾಟಕ ಪ್ರದೇಶ ಕಿಸಾನ್ ಕಾಂಗ್ರೆಸ್ ಸಮಿತಿ ವಿಜಯಪುರ ಜಿಲ್ಲೆ ಉಸ್ತುವಾರಿ ಜೈನಾಪುರದ ಪ್ರಶಾಂತ ದೇಸಾಯಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.