ಬಸವೇಶ್ವರರ ಸಪ್ತಸೂತ್ರ ಜಗತ್ತಿಗೆ ಮಾದರಿ

ಜಿಲ್ಲಾದ್ಯಂತ ಬಸವ ಜಯಂತಿ ಸರಳ ಆಚರಣೆಬಸವ ಪುತ್ಥಳಿ-ಭಾವಚಿತ್ರಕ್ಕೆ ಗಣ್ಯರ ನಮನ

Team Udayavani, Apr 27, 2020, 1:43 PM IST

27-April-15

ವಿಜಯಪುರ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಸವ ಜಯಂತಿ ಆಚರಿಸಲಾಯಿತು.

ವಿಜಯಪುರ: ವಿಶ್ವಗುರು ಬಸವೇಶ್ವರರು ಸುಂದರ ಹಾಗೂ ಸಂತಸದ ಜೀವನಕ್ಕೆ ಬೋಧಿಸಿದ ಸಪ್ತಸೂತ್ರ ವಚನಗಳು ಇಂದಿನ ಸಮಾಜಕ್ಕೆ ಹಾಗೂ ಜಗತ್ತಿಗೆ ಮಾದರಿ ಆಗಿವೆ ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಹೇಳಿದರು.

ಜಿಲ್ಲಾಡಳಿತದಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ರವಿವಾರ ನಡೆದ ಜಗಜ್ಯೋತಿ ಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು. ಶೋಷಿತರ ಪರ ಧ್ವನಿಯಾಗಿ ಸಮಾಜದಲ್ಲಿನ ಲೋಪ ತಿದ್ದುವಲ್ಲಿ ಮುಂಚೂಣಿಯಲ್ಲಿ ನಿಂತಿದ್ದ ಬಸವೇಶ್ವರರು, ಮಹಿಳೆಯರ ಸಮಾನತೆ ಹಾಗೂ ಹಕ್ಕುಗಳಿಗಾಗಿ ಧ್ವನಿ ಎತ್ತಿದವರು. ಲಿಂಗ, ಬೇಧ ಮರೆತು ಮಾನವರ ಏಕತೆಗಾಗಿ, ಕಾಯಕಜೀವಿ ಶ್ರಮಿಕರ ಕಲ್ಯಾಣಕ್ಕಾಗಿ, ಬದುಕನ್ನೇ ಸವೆಸಿದವರು ಎಂದು ಬಣ್ಣಿಸಿಸಿದರು.

ಬಸವೇಶ್ವರರು ಕಾಯಕ ಹಾಗೂ ದಾಸೋಹ, ದಾನದ ಮಹತ್ವವನ್ನು ಸಾರಿದ್ದು, ಜಗತ್ತನ್ನು ಬಾಧಿಸುತ್ತಿರುವ ಕೋವಿಡ್‌-19 ಕೊರೊನಾ ರೋಗ ನಿಗ್ರಹದ ಹೋರಾಟದ ಸಂಕಷ್ಟದ ಪರಿಸ್ಥಿತಿಯಲ್ಲಿ ಉಳ್ಳವರು ಬಡಜನರಿಗೆ ನೆರವಾಗುವಂತೆ ಮನವಿ ಮಾಡಿದರು. ಕಾರ್ಯಕ್ರಮಕ್ಕೂ ಮೊದಲು ನಗರದ ಬಸವೇಶ್ವರ ವೃತ್ತದಲ್ಲಿನ ಅಶ್ವಾರೂಢ ಶ್ರೀ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ಪಿ ಅನುಪಮ್‌ ಅಗರವಾಲ್‌, ಜಿಪಂ ಸಿಇಒ ಗೋವಿಂದರೆಡ್ಡಿ, ಎಡಿಸಿ ಡಾ| ಔದ್ರಾಮ್‌, ಉಪವಿಭಾಗಾ ಧಿಕಾರಿ ಸೋಮಲಿಂಗ ಗೆಣ್ಣೂರ, ಎಎಸ್ಪಿ ರಾಮ್‌ ಅರಸಿದ್ದಿ, ಡಿಎಸ್ಪಿ ಲಕ್ಷ್ಮೀ ನಾರಾಯಣ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋದ್ದಾರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪೂಜಾರಿ, ಸಮಾಜದ ಮುಖಂಡರಾದ ಸಿದ್ರಾಮಪ್ಪ ಉಪ್ಪಿನ, ಬಸಯ್ಯ ಹಿರೇಮಠ, ಶರಣು ಸಬರದ, ಸೋಮನಗೌಡ ಕಲ್ಲೂರ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.