Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
Team Udayavani, Nov 26, 2024, 10:55 AM IST
ವಿಜಯಪುರ: ಮಹಾನಗರ ಪಾಲಿಕೆಯ ವಾರ್ಡ್ ನಂ.29ಕ್ಕೆ ನಡೆದ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಗಿರೀಶ ವಿಜಯಕುಮಾರ ಪಾಟೀಲ ಗೆಲುವು ಸಾಧಿಸಿದ್ದಾರೆ.
ವಾರ್ಡ್ ನಂ.29ರ ಸದಸ್ಯರಾಗಿದ್ದ ಬಿಜೆಪಿಯ ವಿಜಯಕುಮಾರ ಬಿರಾದಾರ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಕಾರಣಕ್ಕೆ ಶನಿವಾರ ಉಪಚುನಾವಣೆ ನಡೆದಿತ್ತು.
ಒಟ್ಟು 9,861 ಮತದಾರರ ಪೈಕಿ ಶೇ.46.18ರಷ್ಟು ಮಾತ್ರ ಮತದಾನವಾಗಿತ್ತು. ಇಂದು ಮತ ಎಣಿಕೆ ನಡೆದು ಫಲಿತಾಂಶ ಹೊರ ಬಂದಿದ್ದು, ವಿಜಯಕುಮಾರ ಅವರ ಪುತ್ರ ಗಿರೀಶ ಬಿರಾದಾರ ಗೆಲುವು ದಕ್ಕಿಸಿಕೊಂಡಿದ್ದಾರೆ.
ಬಿಜೆಪಿ ಅಭ್ಯರ್ಥಿ ಗಿರೀಶ 2,754 ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಭಾಗಪ್ಪ ಏಳಗಂಟಿ 1,762 ಮತಗಳನ್ನು ಪಡೆದಿದ್ದು, 38 ನೋಟಾ ಮತಗಳು ಚಲಾವಣೆಯಾಗಿವೆ ಎಂದು ಉಪ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಕಾಂಗ್ರೆಸ್ ಗೆ ಹಿನ್ನಡೆ: ಪಾಲಿಕೆಯಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿತ್ತು. ಹೀಗಾಗಿ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಏಳಗಂಟಿ ಅವರನ್ನು ಕಾಂಗ್ರೆಸ್ ಸೆಳೆದು ಕಣಕ್ಕಿಳಿಸಿ ಭಾರೀ ಪೈಪೋಟಿ ಒಡ್ಡಿತ್ತು.
ಮತ್ತೊಂದಡೆ, ಬಿಜೆಪಿ ಅಭ್ಯರ್ಥಿಯ ಪರವಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಎರಡು ದಿನಗಳ ಕಾಲ ಪ್ರಚಾರ ನಡೆಸಿದ್ದರು. ವಾರ್ಡ್ ಅನ್ನು ವಶಕ್ಕೆ ಪಡೆದು ಪಾಲಿಕೆಯಲ್ಲಿ ತಮ್ಮ ಸಂಖ್ಯಾಬಲವನ್ನು ವೃದ್ಧಿಸಿಕೊಳ್ಳಲು ಎರಡೂ ಪಕ್ಷಗಳು ಸಮಬಲದ ಹೋರಾಟ ನಡೆಸಿದ್ದವು. ಆದರೆ, ಉಪ ಚುನಾವಣೆಯಲ್ಲಿ ಸೋಲಿನ ಮೂಲಕ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ.
ಮಹಾನಗರ ಪಾಲಿಕೆಯು 35 ಸ್ಥಾನಗಳನ್ನು ಹೊಂದಿದೆ. ಸದ್ಯ ಬಿಜೆಪಿ 16, ಕಾಂಗ್ರೆಸ್ 10, ಜೆಡಿಎಸ್ 1, ಎಐಎಂಐಎಂ 2 ಹಾಗೂ ಪಕ್ಷೇತರ 5 ಸದಸ್ಯರಿದ್ದಾರೆ. ಜೆಡಿಎಸ್, ಎಐಎಂಐಎಂ ಹಾಗೂ ಪಕ್ಷೇತರ ಸದಸ್ಯರ ಬೆಂಬಲದೊಂದಿಗೆ ಕಾಂಗ್ರೆಸ್ ಅಧಿಕಾರದ ಗದ್ದುಗೆಯಲ್ಲಿ ಇದೆ.
ಇದನ್ನೂ ಓದಿ: By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.