ವಿಜಯಪುರ: ಸಿ.ಎಂ. ಯಡಿಯೂರಪ್ಪ ಕೃಷ್ಣೆಗೆ ಬಾಗಿನ ಅರ್ಪಣೆ ಹಿನ್ನಲೇ: ಪೊಲೀಸರಿಂದ ಬಿಗಿ ಭದ್ರತೆ
Team Udayavani, Aug 25, 2020, 12:31 PM IST
ವಿಜಯಪುರ: ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಮೈದುಂಬಿ ನಿಂತಿರುವ ಕೃಷ್ಣೆಗೆ ಮಂಗಳವಾರ ಸಿಎಂ. ಯಡಿಯೂರಪ್ಪ ಬಾಗೀನ ಅರ್ಪಿಸಲು ಬರುತ್ತಿದ್ದು ಪೊಲೀಸರು ಭಾರಿ ಭದ್ರತೆ ಕಲ್ಪಿಸಿದ್ದಾರೆ.
ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳೀಯ ಪತ್ರಕರ್ತರು, ಮನವಿ ಅರ್ಪಿಸಲು ಬರುವ ರೈತ, ಜನಪರ ಸಂಘಟನೆಗಳ ಕಾರ್ಯಕರ್ತರಿಗೆ ಪ್ರವೇಶ ನಿರ್ಭಂಧಿಸಲಾಗಿದೆ ಎನ್ನಲಾಗಿದೆ.
ಈ ಸಲ ಮುಖ್ಯಮಂತ್ರಿಯಾದ ಬಳಿಕ ಬಿ.ಎಸ್. ಯಡಿಯೂರಪ್ಪ ಆಲಮಟ್ಟಿ ಬಳಿ ಕೃಷ್ಷೆಗೆ ನಿರ್ಮಿಸಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಮೊದಲ ಬಾರಿಗೆ ಕೃಷ್ಣೆಗೆ ಬಾಗಿನ ಅರ್ಪಿಸಲು ವಿಜಯಪುರ ಜಿಲ್ಲೆಗೆ ಬರುತ್ತಿದ್ದಾರೆ. ಆದರೆ ಸಿ.ಎಂ. ಯಡಿಯೂರಪ್ಪ ಅವರ ಭೇಟಿಗೆ ಪೊಲೀಸರು ಭದ್ರತೆ ನೆಪದಲ್ಲಿ ನಿರ್ಬಂಧ ಹೇರುತ್ತಿರುವ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಸದರಿ ಕಾರ್ಯಕ್ರಮಕ್ಕೆ ವಿಜಯಪುರ, ಬಾಗಲಕೋಟೆ ಅವಳಿ ಜಿಲ್ಲೆಗಳ ಪತ್ರಕರ್ತರಿಗೆ ವಾರ್ತಾ ಇಲಾಖೆಯಿಂದ ಅಧಿಕೃತ ಆಹ್ವಾನ ಇದ್ದರೂ, ಬೆರಳೆಣಿಕೆಯಷ್ಡು ಪಾಸ್ ವಿತರಿಸಲಾಗುತ್ತಿದೆ. ಪಾಸ್ ಪಡೆದಿರುವ ಪತ್ರಕರ್ತರಿಗೂ ಜಲಾಶಯ, ಹೆಲಿಪ್ಯಾಡ್, ಸಿ.ಎಂ. ಸಭೆ ನಡೆಯುವ ಹಾಗೂ ಪ್ರವಾಸಿ ಮಂದಿರ ಪ್ರವೇಶ, ಬಾಗಿನ ಕಾರ್ಯಕ್ರಮ ಸ್ಥಳಗಳಿಗೆ ತೆರಳದಂತೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಅವಳಿ ಜಿಲ್ಲೆಯ ಪತ್ರಕರ್ತರು ಸಾಮಾಜಿಕ ಜಾಲತಾಣದಲ್ಲಿ ಜಿಲ್ಲಾಡಳಿತ ಗಳ ಕ್ರಮದ ವಿರುದ್ಧ ಹರಿಹಾಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.