ಜನಗಣತಿಗೆ ಮೊಬೈಲ್ ಆ್ಯಪ್
ಏ. 15ರಿಂದ ಜೂ. 1ರವರೆಗೆ ವೇಳಾ ಪಟ್ಟಿ ನಿಗದಿಪಡಿಸಿ ಮನೆ ಮನೆಗೆ ಭೇಟಿ: ಡಿಸಿ
Team Udayavani, Jan 19, 2020, 12:50 PM IST
ವಿಜಯಪುರ: ಸರ್ಕಾರದ ಜನ ಕಲ್ಯಾಣ ಯೋಜನೆ ರೂಪಿಸುವಲ್ಲಿ ಜನಸಂಖ್ಯೆಯ ಅಂಕಿ ಅಂಶಗಳು ಮುಖ್ಯಪಾತ್ರ ವಹಿಸಲಿವೆ. ಹೀಗಾಗಿ ದೇಶದ ಯೋಜನೆಗಳಲ್ಲಿ ಪ್ರಮುಖವಾಗಿರುವ ಜನಗಣತಿ ಕಾರ್ಯಕ್ಕೆ ನೂತನ ತಂತ್ರಜ್ಞಾನದ ಮೊಬೈಲ್ ಆ್ಯಪ್ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಜರುಗಿದ ಜನಗಣತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜನಗಣತಿ ಕಾರ್ಯ ಅಂಕಿ ಅಂಶ ಸಂಗ್ರಹಣೆಯಲ್ಲಿ ಅತ್ಯಂತ ಪ್ರಮುಖ ಅಂಶವಾಗಿದೆ. ಜನಗಣತಿ ಕಾರ್ಯಕ್ರಮದಲ್ಲಿ ಇದೇ ಪ್ರಪ್ರಥಮ ಬಾರಿಗೆ ಮೊಬೈಲ್ ಆ್ಯಪ್ ತಂತ್ರಜ್ಞಾನ ಬಳಕೆ ಮಾಡುತ್ತಿದ್ದು, ಈ ವಿಶೇಷ ತಾಂತ್ರಿಕತೆ ಅಭಿವೃದ್ಧಿ ಪಡಿಸಿದ ಈ ತಂತ್ರಜ್ಞಾನ ಬಳಕೆಯಲ್ಲಿ ಅಧಿಕಾರಿಗಳು ಸೂಕ್ತ ಮಾಹಿತಿ ಹೊಂದುವುದು ಸೂಕ್ತ ಎಂದರು.
2020-21ನೇ ಸಾಲಿನ ಜನಗಣತಿ ಕಾರ್ಯ ಎರಡು ಹಂತದಲ್ಲಿ ನಡೆಯಲಿದ್ದು, ಒಂದನೇ ಹಂತದಲ್ಲಿ ಮನೆ ಮನೆಗೆ ಭೇಟಿ ನೀಡಿ ಜನಸಂಖ್ಯೆ ಪರಿಶೀಲನೆ ನಡೆಸಲಾಗುವುದು. 15 ಏಪ್ರಿಲ್‌ನಿಂದ ಜೂನ್ 1ರವರೆಗೆ ವೇಳಾ ಪಟ್ಟಿ ನಿಗದಿಪಡಿಸಿ ಮನೆ ಮನೆಗೆ ಭೇಟಿ ನೀಡಿ ಜನಸಂಖ್ಯೆ ಪರಿಶೀಲನೆ ಮಾಡಲಾಗುವುದು. ಜನಗಣತಿ ವಿಷಯದ ಕಾರ್ಯನಿರ್ವಹಣೆ ಕುರಿತು ಎಲ್ಲ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪಾರದರ್ಶಕ ರೀತಿಯಲ್ಲಿ ಹಾಗೂ ವಸ್ತು ನಿಷ್ಠ ಅಂಕಿ-ಅಂಶ ಒದಗಿಸುವ ಜನಗಣತಿ ಕಾರ್ಯ ಕೈಗೊಳ್ಳಬೇಕು. ಅಧಿಕಾರ ಯಂತ್ರದಲ್ಲಿ ಜಿಲ್ಲಾ ಧಿಕಾರಿಗಳು ಜಿಲ್ಲಾ ಪ್ರಧಾನ ಜನಗಣತಿ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಲಿದ್ದು ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ಜನಗಣತಿ ಅಧ್ಯಯನ ಅಧಿಕಾರಿಗಳಾಗಿ ಅಪರ ಜಿಲ್ಲಾಧಿಕಾರಿಗಳು, ಹೆಚ್ಚುವರಿ ಜಿಲ್ಲಾ ಜನಗಣತಿ ಅ ಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಅದರಂತೆ ಈ ಬಾರಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಡಿಐಒ ಹಾಗೂ ಎನ್ ಐಸಿ ಅ ಧಿಕಾರಿಗಳು ಜನಗಣತಿ ಕಾರ್ಯಕ್ಕಾಗಿ ಸಿಬ್ಬಂದಿಗಳ ನಿಯೋಜನೆಯ ಜವಾಬ್ದಾರಿಯನ್ನು ವಹಿಸುಕೊಳ್ಳುವಂತೆ ಸೂಚಿಸಿದರು.
ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸಂಬಂಧಿಸಿದ ಅಧಿಕಾರಿಗಳು ಜವಾಬ್ದಾರಿಯುತ ಜನಗಣತಿ ಕಾರ್ಯಕ್ಕೆ ಗಮನ ನೀಡಬೇಕು. ಈಗಾಗಲೇ ಇಬ್ಬರು ಮಾಸ್ಟರ್ ಟ್ರೇನರ್‌ಗಳನ್ನೂ ನೇಮಿಸಿದ್ದು, 71 ಕ್ಷೇತ್ರ ಮಟ್ಟದ ತರಬೇತುದಾರರನ್ನು ಫೆಬ್ರುವರಿ 20ರ ಒಳಗೆ ತರಬೇತಿ ಗೊಳಿಸಲಾಗುವುದು. ತಾಂತ್ರಿಕ ಆಪರೇಟರಗಳ ಸಂಬಂಧಿಸಿದ ಪ್ರದೇಶಗಳನ್ನು ನಿಯೋಜಿಸಲಾಗುವುದು. ಈಗಾಗಲೇ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲಿಸಿದ ಜಿಲ್ಲಾ ಧಿಕಾರಿಗಳು, 3,389 ಗಣತಿದಾರರು ಹಾಗೂ 564 ಗಣತಿದಾರರ ಮೇಲ್ವಿಚಾರಕರನ್ನಾಗಿ ಜನಗಣತಿ ನಿರ್ದೇಶನಾಲಯದ ಸೂಚನೆ ಮೇರೆಗೆ ನೇಮಕ ಮಾಡಿಕೊಳ್ಳಲಾಗುವುದು. ತರಬೇತಿದಾರರನ್ನು ಜನಗಣತಿ ಕಾರ್ಯಕ್ಕೆ ಸಂಬಂಧಪಟ್ಟ ಕ್ಷೇತ್ರಗಳ ಬಗ್ಗೆ ಜನಗಣತಿದಾರರಿಗೆ ಕಳಿಸುವುದಾಗಿ ವಿವರಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ| ಔದ್ರಾಮ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.