ಗಾಂಧಿ ಆಶಯದಂತೆ ಪೌರತ ತಿದ್ದುಪಡಿ ಕಾಯ್ದೆ ಜಾರಿ

ಕಾಂಗ್ರೆಸ್‌ ಸೇರಿದಂತೆ ವಿಪಕ್ಷಗಳಿಂದ ಅಪ ಪ್ರಚಾರ

Team Udayavani, Jan 13, 2020, 1:40 PM IST

13-Jnauary-15

ವಿಜಯಪುರ: ಧರ್ಮದ ಆಧಾರದಲ್ಲಿ ದೇಶವನ್ನು ಇಬ್ಭಾಗ ಮಾಡಿದ ಕಾಂಗ್ರೆಸ್‌ ಪಕ್ಷಕ್ಕೆ ಪೌರತ್ವದ ಕುರಿತು ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಬೀದರ ಸಂಸದ ಭಗವಂತ ಕೂಬಾ ಹೇಳಿದರು.

ರವಿವಾರ ಸಂಜೆ ನಗರದ ದರಬಾರ್‌ ಪ್ರೌಢ ಶಾಲೆ ಮೈದಾನದಲ್ಲಿ ಆಯೋಜಿಸಿದ್ದ ಪೌರತ್ವ ಕಾಯ್ದೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಧರ್ಮದ ಹೆಸರಿನಲ್ಲೇ ಪಾಕಿಸ್ತಾನವನ್ನು ವಿಭಜಿಸಿದ್ದರೂ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳು ಭಾರತಕ್ಕೆ ಯಾವಾಗ ಬೇಕಾದರೂ ಮರಳಬಹದು ಎಂದು ಗಾಂಧೀಜಿ ಹೇಳಿದ್ದರು.

ಇದಕ್ಕೆ ಪೂರಕವಾಗಿ ಮೋದಿ ಸರ್ಕಾರ ಜಾರಿಗೆ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಆದರೆ ಕಾಂಗ್ರೆಸ್‌ ಸೇರಿದಂತೆ ವಿಪಕ್ಷಗಳು ಧರ್ಮಾಧಾರಿತ ಪೌರತ್ವ ಕಾಯ್ದೆ ಎಂದು ಅಪಪ್ರಚಾರದಲ್ಲಿ ತೊಡಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧರ್ಮದ ಹೆಸರಿನಲ್ಲೇ ಪಾಕಿಸ್ತಾನ ವಿಭಜನೆಯಾದ ಬಳಿಕ ಪಾಕಿಸ್ತಾನದಲ್ಲಿ ಉಳಿದಿರುವ ಅಲ್ಪಸಂಖ್ಯಾತ ಹಿಂದೂಗಳಿಗೆ ಭಾರತದ ಮುಸ್ಲಿಂ ಅಲ್ಪಸಂಖ್ಯಾತರಿಗೆ ಸಿಕ್ಕಂತೆ ಮೂಲಭೂತ ಸೌಲಭ್ಯಗಳು ಸಿಕ್ಕಿಲ್ಲ. ಧಾರ್ಮಿಕ ಹಕ್ಕುಗಳ ರಕ್ಷಣೆ ಇಲ್ಲವಾಗಿದೆ. ಇದನ್ನು ಅರಿಯದೇ ಪೌರತ್ವದ ವಿಷಯದಲ್ಲಿ ಪೌರತ್ವ ಕಾಯ್ದೆಯ ವಾಸ್ತವ ಅರಿಯದೇ ಕಾಂಗ್ರೆಸ್‌ ಹಾಗೂ ಅದರ ಮಿತ್ರ ಪಕ್ಷಗಳು ಪೌರತ್ವ ವಿರೋಧ ಹೋರಾಟಕ್ಕೆ ಪ್ರಚೋದನೆ ನೀಡುತ್ತಿರುವುದು ಸಲ್ಲದ ಕ್ರಮ ಎಂದು ವಾಗ್ಧಾಳಿ ನಡೆಸಿದರು.

ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಭಾರತದ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಸದರಿ ಕಾಯ್ದೆಯ ಜಾರಿಯಿಂದ ಮುಸ್ಲಿಂ ಸಮುದಾಯಕ್ಕೆ ಯಾವುದೇ ಬಾಧಕ ಇಲ್ಲ ಎಂಬುದು ಭವಿಷ್ಯದಲ್ಲಿ ಮನವರಿಕೆ ಆಗಲಿದ್ದು, ಕಾಂಗ್ರೆಸ್‌ ಕುತಂತ್ರದ ಕುರಿತೂ ಅರಿವಾಗಲಿದೆ ಎಂದರು.

ಅರಣ್ಯ ಸಚಿವ ಸಿ.ಸಿ. ಪಾಟೀಲ ಮಾತನಾಡಿ, ದೇಶದಲ್ಲಿ ಮೋದಿ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುವ ಮುನ್ನ ಕಾಂಗ್ರೆಸ್‌, ಜೆಡಿಎಸ್‌ ಸೇರಿದಂತೆ ಎಲ್ಲ ವಿಪಕ್ಷಗಳು ಪೌರತ್ವ ಕಾಯ್ದೆ ಕುರಿತು ಸೂಕ್ತ ಹಾಗೂ ಸಮರ್ಥವಾಗಿ ಅರಿಯಲು ಮುಂದಾಗಲಿ ಎಂದು ಕುಟುಕಿದರು. ಆದರೆ ಕಾಯ್ದೆ ಕುರಿತು ಸೂಕ್ತ ಮಾಹಿತಿ ಇಲ್ಲದ ಕೆಲವರಿಂದ ನಡೆಸದ ಪ್ರಚೋದನೆಯಿಂದ ಮಂಗಳೂರು ನಗರದಲ್ಲಿ ವ್ಯವಸ್ಥಿತ ಗಲಭೆ ಸೃಷ್ಟಿಸುವ ಮೂಲಕ ಸಮಾಜದಲ್ಲಿ ಭಾರಿ ಪ್ರಮಾಣದಲ್ಲಿ ಹಾನಿ ಮಾಡುವ ಹುನ್ನಾರ ನಡೆದಿತ್ತು. ಆದರೆ ಸುದೈವಶಾತ್‌ ಅಲ್ಲಿನ ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ದೊಡ್ಡ ಮಟ್ಟದಲ್ಲಿ ನಡೆಯಲಿದ್ದ ಆನಾಹುತ ತಪ್ಪಿದೆ.ಹೀಗಾಗಿ ಇಂಥ ಸಂದರ್ಭದಲ್ಲಿ ಪೊಲೀಸರ ನೈತಿಕ ಸ್ಥೈರ್ಯ ಕುಸಿಯದಂತೆ ನೋಡಿಕೊಳ್ಳುವುದು ನಮ್ಮೆಲರ ಹೊಣೆ ಎಂದರು.

ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಅಲ್ಪಸಂಖ್ಯಾತರಿಗೆ ಯಾವುದೇ ತೊಂದರೆ ಇಲ್ಲ ಎಂದರು. ಇದೇ ವೇಳೆ ಜಿಲ್ಲೆಯ ಬಿಜೆಪಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಆರ್‌. ಎಸ್‌. ಪಾಟೀಲ ಕೂಚಬಾಳ ಅವರನ್ನು ಸಂಸದ ಭಗವಂತ ಖೂಬಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಅಭಿನಂದಿಸಿದರೆ, ಸಂಸದ ಭಗವಂತ ಖೂಬಾ ಆವರಿಗೆ ಸಿದ್ದರಾಮೇಶ್ವರ ಶರಣರ ಭಾವಚಿತ್ರ ನೀಡಿ ಗೌರವಿಸಲಾಯಿತು.

ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಸೋಮನಗೌಡ ಪಾಟೀಲ ಸಾಸನೂರ, ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್‌. ಪಾಟೀಲ ಕೂಚಬಾಳ, ಮಾಜಿ ಸಚಿವರಾದ ಎಸ್‌.ಕೆ. ಬೆಳ್ಳುಬ್ಬಿ, ಅಪ್ಪಾಸಾಹೇಬ ಪಟ್ಟಣಶೆಟ್ಟಿ, ವಿಜುಗೌಡ ಪಾಟೀಲ, ಡಾ| ಗೋಪಾಲ ಕಾರಜೋಳ, ದಯಾಸಾಗರ ಪಾಟೀಲ, ಸಂಗರಾಜ ದೇಸಾಯಿ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.