Vijayapura: ಗುಮ್ಮಟ ನಗರದಲ್ಲಿ ಜೆಸಿಬಿ ಘರ್ಜನೆ, ಪಾಲಿಕೆಯಿಂದ ಒತ್ತುವರಿ ತೆರವು
Team Udayavani, Jul 15, 2024, 1:26 PM IST
ವಿಜಯಪುರ: ವಿಜಯಪುರ ನಗರದಲ್ಲಿ ಸೋಮವಾರ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ ಆರಂಭಗೊಂಡಿದೆ.
ವಿಜಯಪುರ ಮಹಾನಗರ ಪಾಲಿಕೆ ನಗರದ ಮಹಾತ್ಮಾ ಗಾಂಧೀಜಿ ವೃತ್ತದಿಂದ ಸರಾಫ ಬಜಾರ ಮಾರ್ಗದಲ್ಲಿ ಸರ್ಕಾರಿ ಸ್ಥಳ ಒತ್ತುವರಿ ತೆರವು ಹಾಗೂ ರಸ್ತೆ ಅತಿಕ್ರಮಣ ತೆರವು ಕಾರ್ಯಾಚರಣೆ ಆರಂಭಿಸಿದೆ.
ಜಿಲ್ಲಾಧಿಕಾರಿ ಭೂಬಾಲನ್, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸಾರಥ್ಯದಲ್ಲಿ ಒತ್ತುವರಿ ತೆರವಿಗಾಗಿ ಜೆಸಿಬಿ ಬಳಸಿದ್ದು, ಒತ್ತುವರಿ ಮಾಡಿ ನಿರ್ಮಿಸಿದ್ದಾರೆ ಎನ್ನಲಾದ ದೊಡ್ಡ ದೊಡ್ಡ ಕಟ್ಟಡಗಳು ನೆಲಸಮವಾಗಿವೆ.
ಕಾರ್ಯಾಚರಣೆ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ ಮಾಡಲಾಗಿತ್ತು.
ಒತ್ತುವರಿ ತೆರವು ಮಾಡುವ ಸಂದರ್ಭದಲ್ಲಿ ಕೆಲವು ವ್ಯಾಪಾರಿಗಳು ಕಾಲಾವಕಾಶ ಕೋರಿ, ಕಟ್ಟಡ ಒಡೆಯದಂತೆ ಮನವಿ ಮಾಡುತ್ತಿದ್ದುದು ಕಂಡುಬಂತು. ಆದರೆ ಅಧಿಕಾರಿಗಳು ಮಾತ್ರ ಮಹಾನಗರ ಪಾಲಿಕೆಯಿಂದ ಅದಾಗಲೇ ನೋಟೀಸ್ ನೀಡಿ, ಕಾಲಾವಕಾಶವನ್ನೂ ನೀಡಿದ್ದೇವೆ. ಇನ್ನು ಯಾವುದೇ ಕಾಲಾವಕಾಶ ನೀಡಲು ಸಾಧ್ಯವಿಲ್ಲ ಎಂದು ಕಾರ್ಯಾಚರಣೆ ಮುಂದುವರೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.