Vijayapura; ಶಾಸಕ ಯಶವಂತ್ರಾಯಗೌಡರ ಬೇಡಿಕೆ ಈಡೇರಿಕೆ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ
Team Udayavani, Nov 11, 2023, 1:29 PM IST
ವಿಜಯಪುರ: ಕ್ಷೇತ್ರದ ಕೊನೆ ಭಾಗಕ್ಕೆ ನೀರು ತಲುಪದಿರುವುದು, ಬರ ನಿರ್ವಹಣೆಯಲ್ಲಿ ವೈಫಲ್ಯ ಸೇರಿದಂತೆ ಸಚಿವರ ಆಡಳಿತದ ಬಗ್ಗೆ ಗುಡುಗಿದ್ದ ಕಾಂಗ್ರೆಸ್ ಇಂಡಿ ಶಾಸಕ ಯಶವಂತ್ರಾಯಗೌಡ ಅವರನ್ನು ಸಿಎಂ ಸಿದ್ದರಾಮಯ್ಯ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಶಾಸಕ ಯಶವಂತ್ರಾಯಗೌಡ, ಇಂಡಿ ಪ್ರತ್ಯೇಕ ಜಿಲ್ಲೆ ರಚನೆ, ಇಂಡಿ, ಸಿಂದಗಿ ತಾಲೂಕಗಳನ್ನು ಸಂವಿಧಾನದ 371 (ಜೆ) ಕಲಂ ವ್ಯಾಪ್ತಿಗೆ ಸೇರ್ಪಡಿಸಿ, ವಿಶೇಷ ಸೌಲಭ್ಯ ಕಲ್ಪಿಸುವುದು, ಕ್ಷೇತ್ರದ ನೀರಾವರಿ ಯೋಜನೆಗಳಿಗೆ ಕೊನೆ ಭಾಗಕ್ಕೆ ನೀರು ತಲುಪಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದು, ಸಿಎಂ ಸಕಾರಾತ್ಮಕ ಸ್ಪಂದಿಸಿದ್ಧಾಗಿ ಹೇಳಿದ್ದಾರೆ.
ಇಂಡಿ ವಿಧಾನಸಭೆ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕನಾಗಿರುವ ನಾನು ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳ ಕೊನೆ ಭಾಗಕ್ಕೆ ನೀರು ಹರಿಯದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಹಾಗೂ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದೆ. ಇದನ್ನು ಗಮನಿಸಿರುವ ಸಿಎಂ ಸಿದ್ಧರಾಮಯ್ಯ ಹಾಗು ಪಕ್ಷದ ಪ್ರಮುಖರು ನನ್ನನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಸಮಸ್ಯೆಗಳ ಕುರಿತು ಚರ್ಚಿಸಿ, ಪರಿಹರಿಸುವ ಭರವಸೆ ನೀಡಿದ್ದಾಗಿ ಹೇಳಿದ್ದಾರೆ.
ಇದಲ್ಲದೇ ನ.10 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬೆಂಗಳೂರಿನಲ್ಲಿ ನಿವಾಸದಲ್ಲಿ ಭೇಟಿಯಾಗಿ, ಇಂಡಿ ಕ್ಷೇತ್ರದ ಜ್ವಲಂತ ಸಮಸ್ಯೆಗಳ ಕುರಿತು ವಿವರಿಸಿದಾಗ, ಮುಖ್ಯಮಂತ್ರಿಗಳು ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ. ಅಲ್ಲದೆ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸುವ ಭರವಸೆ ನೀಡಿದ್ದಾಗಿ ವಿವರಿಸಿದ್ದಾಗಿ ಶಾಸಕ ಯಶವಂತ್ರಾಯಗೌಡ ವಿವರಿಸಿದ್ದಾರೆ.
ಇಂಡಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಇಂಡಿ ಶಾಖಾ ಕಾಲುವೆ, ಗುತಿ ಬಸವಣ್ಣ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪಿಸುವುದು, ಮುಳವಾಡ ಏತ ನೀರಾವರಿ ಯೊಜನೆ ಮೂಲಕ ತಡವಲಗಾ, ಅಥರ್ಗಾ, ಹಂಜಗಿ, ನಿಂಬಾಳ ಕೆರೆಗಳಿಗೆ ನೀರು ತುಂಬಿಸುವುದು. ಅಣಚಿ ಕೆರೆ ತುಂಬುವ ಯೊಜನೆಯಲ್ಲಿ ಕೆರೆಗಳಿಗೆ ಸಮರ್ಪಕವಾಗಿ ನೀರು ತುಂಬಿಸುವುದು, ಭುಯ್ಯಾರ ಕೆರೆ ನೀರು ತುಂಬುವ ಯೋಜನೆ ಸ್ಥಗಿತಗೊಂಡಿದ್ದು, ಆರಂಭಿಸುವ ಭರವಸೆ ನೀಡಿದ್ದಾರೆ.
ಇದಲ್ಲದೆ ಇಂಡಿ-ಚಡಚಣ ಭಾಗದ ರೈತರ ಮಹತ್ವಾಕಾಂಕ್ಷೆಯ ಹೋರ್ತಿ ಶ್ರೀರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಕರೆದಿರುವ ಟೆಂಡರ್ ನಿಧಾನಗತಿಯಲ್ಲಿ ನಡೆದಿದೆ. 2-3ನೇ ಹಂತದ ಕಾಮಗಾರಿಗೆ ಸಮಗ್ರ ಯೋಜನಾ ವರದಿ ರೂಪಿಸಿ, ಕೆಬಿಜೆಎನ್‍ಎಲ್ ಮಂಡಳಿಯಲ್ಲಿ ತುರ್ತಾಗಿ ಒಪ್ಪಿಗೆ ಪಡೆಯಬೇಕು ಎಂಬ ಬೇಡಿಕೆಗೆ ಸಿಎಂ ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ.
ಕ್ಷೇತ್ರದಲ್ಲಿರುವ ಸಣ್ಣ ನೀರಾವರಿ ಇಲಾಖೆಗೆ ಸೇರಿದ 19 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿಯನ್ನು ತ್ವರಿಗೊಳಿಸಬೇಕು. ಹಂಜಗಿ, ಅರ್ಜನಾಳ, ಗೂಗಿಹಾಳ, ಲೋಣಿ ಕೆ.ಡಿ. ಕೆರೆಗಳಿಗೆ ನೀರು ತುಂಬಿಸಬೇಕು. ಜಿಲ್ಲೆಯಲ್ಲಿ ಭೀಕರ ಬರ ಆವರಿಸಿದ್ದು, ಇಂಡಿ, ಸಿಂದಗಿ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತನಾಡಿ ಭಿಮಾ ನದಿಗೆ ಉಜಿನಿ ಜಲಾಶಯದಿಂದ ನೀರು ಹರಿಸಲು ಕ್ರಮ ಕೈಗೊಳ್ಳಬೇಕು. ಪ್ರಸಕ್ತ ವರ್ಷ ಭೀಕರ ಬರದ ಹಿನ್ನೆಲೆಯಲ್ಲಿ ಕೃಷಿ-ತೋಟಗಾರಿಕೆ ಬೆಳೆ ಹಾನಿಗೆ ಇನ್‍ಪುಟ್ ಸಬ್ಸಿಡಿ ಹಾಗೂ ಹಾನಿಯ ಪರಿಹಾರ ನೀಡಬೇಕು, ಜಲಧಾರೆ ಯೋಜನೆ ಕಾಮಗಾರಿ ತ್ವರಿತಗೊಳಿಸುವುದು ಸೇರಿದಂತೆ ಇತರೆ ಬೇಡಿಕೆಗೆ ಮುಖ್ಯಮಂತ್ರಿಗಳು ಸೈ ಎಂದಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.