ಕೋವಿಡ್ ಲಕ್ಷಣ ಇದ್ದವರು ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಿ
Team Udayavani, Jun 25, 2020, 5:10 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಿಜಯಪುರ: ನೆಗಡಿ, ಕೆಮ್ಮು, ಜ್ವರ ಹಾಗೂ ತೀವ್ರ ಉಸಿರಾಟ ತೊಂದರೆಯಂತ ಕೋವಿಡ್ ಲಕ್ಷಣಗಳ ಇರುವವರು ತಕ್ಷಣ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು. ಅಲ್ಲದೇ ಈ ಕುರಿತು ಮಾಹಿತಿ ಪಡೆಯಲು ಆಗಮಿಸುವ ಆರೋಗ್ಯ ಇಲಾಖೆ, ಆಶಾ ಕಾರ್ಯಕಾರ್ಯರಿಗೆ ಅಗತ್ಯ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಕಾಲೋನಿಗಳ ಮುಖಂಡರ ಸಭೆಯಲ್ಲಿ ಈ ಮನವಿ ಮಾಡಿದ ಅವರು, ಕೋವಿಡ್-19 ಪಾಸಿಟಿವ್ ಪ್ರಕರಣ ದೃಢಪಟ್ಟ ಪ್ರದೇಶಗಳಲ್ಲಿ ಸೀಲ್‌ಡೌನ್ ಮಾಡಲಾಗಿದೆ. ಆಯಾ ಪ್ರದೇಶದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆರು ಆಗಮಿಸಿ ವಿವರಗಳನ್ನು ಪಡೆಯಲಿದ್ದಾರೆ. ನೆಗಡಿ, ಕೆಮ್ಮು, ಜ್ವರ ಹಾಗೂ ತೀವ್ರ ಉಸಿರಾಟ ಸಂಬಂಧಿತ ತೊಂದರೆ ಮಾತ್ರವಲ್ಲ ಮನೆಯ ಎಲ್ಲ ಸದಸ್ಯರ ಮಾಹಿತಿ ಪಡೆಯಲಿದ್ದಾರೆ. ಹೀಗಾಗಿ ಸಾರ್ವಜನಿಕರು ಅಗತ್ಯ ಮಾಹಿತಿ ನೀಡಿ ಸಹಕರಿಸುವಂತೆ ತಿಳಿಸಿದರು.
ಮಾಹಿತಿ ಪಡೆಯಲು ಆಗಮಿಸುವ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರೊಂದಿಗೆ ಅನುಚಿತವಾಗಿ ನಡೆದುಕೊಂಡಲ್ಲಿ ಕಾನೂನಿನ ರಿತ್ಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸೀಲ್‌ಡೌನ್ ಮಾಡಲಾಗಿರುವ ಪ್ರದೇಶಗಳಲ್ಲಿ ಬಡವರಿಗೆ ಆಹಾರ ತೊಂದರೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ಯಾವುದೇ ಸಮಸ್ಯೆ ಕಂಡು ಬಂದಲ್ಲಿ ಸ್ಥಳೀಯ ಮುಖಂಡರು ಸಾರ್ವಜನಿಕರಿಗೆ ತಿಳಿಹೇಳುವ ಕಾರ್ಯ ಮಾಡಬೇಕು ಕೋರಿದರು. ಅಲ್ಲಿನ ಮುಖಂಡರು ಸಾರ್ವಜನಿಕರಲ್ಲಿ ತಿಳಿಹೇಳಬೇಕು. ಆ ವಲಯದಲ್ಲಿ ಸಮಿತಿ ರಚಿಸಿಕೊಂಡು ಆರೋಗ್ಯ ಇಲಾಖೆಗೆ ಸಹಕರಿಸುವಂತೆ ತಿಳಿಸಿದರು. ಡಾ| ಔದ್ರಾಮ್, ಡಾ| ಮುಕುಂದ ಗಲಗಲಿ, ಎಂ.ಬಿ. ಬಿರಾದಾರ, ಡಾ| ಕವಿತಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.